ಬಂಡೀಪುರದಲ್ಲಿ ಯೂ ನಡೆಯಲಿದೆ ಗಜ ಪಯಣ…

ಚಾಮರಾಜನಗರ: ವಿಶ್ವ ವಿಖ್ಯಾತ ಮೈಸೂರು ದಸರಾದಲ್ಲಿ ನಡೆಯುವ ಜಂಬೂ ಸವಾರಿಯಲ್ಲಿ  ಪಾಲ್ಗೊಳ್ಳಲು ಚಾಮರಾಜನಗರ ಜಿಲ್ಲೆಯ ಬಂಡೀಪುರ ರಾಷ್ಟ್ರೀಯ ಉದ್ಯಾನವನದ ರಾಂಪುರ ಆನೆ ಶಿಬಿರದಲ್ಲಿರುವ ಎರಡು ಆನೆಗಳು ಆಯ್ಕೆಯಾಗಿದ್ದು, ಇದೇ ಮೊದಲ ಬಾರಿಗೆ ಬಂಡೀಪುರದಿಂದ ಗಜಪಯಣ ಆರಂಭವಾಗಲಿದೆ.

ಚಾಮರಾಜನಗರ ಜಿಲ್ಲೆಯ ಬಂಡೀಪುರ ವ್ಯಾಪ್ತಿಯ ರಾಂಪುರ ಆನೆ ಶಿಬಿರದ  ಚೈತ್ರ ಹಾಗೂ ಲಕ್ಷ್ಮಿ ಸಾಕಾನೆಗಳು ಮೈಸೂರು ದಸರಾ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳುತ್ತಿದ್ದು, ಪ್ರತಿ ವರ್ಷ ನಾಗರಹೊಳೆ ವ್ಯಾಪ್ತಿಯ ವೀರನಹೊಸಹಳ್ಳಿಯಿಂದ ಗಜಪಯಣ ನಡೆಯುತ್ತದೆ. ಆದರೆ ಈ ಬಾರಿ ಆ ರೀತಿ ಇಲ್ಲ ಎನ್ನಲಾಗಿದ್ದು, ಬಂಡೀಪುರದ ಸಾಕಾನೆಗಳನ್ನು ಬಂಡೀಪುರ ವ್ಯಾಪ್ತಿಯ ಮದ್ದೂರು ವಲಯಾರಣ್ಯಾಧಿಕಾರಿಗಳ ಕಚೆೇರಿಗೆ ಕರೆದೊಯ್ದು ಅಲ್ಲಿಂದ ಗಜ ಪಯಣದ ಮೂಲಕ  ಮೈಸೂರು ದಸರಾಕ್ಕೆ ಕರೆದೊಯ್ಯಲಾಗುತ್ತಿದೆ. ಈ ಕುರಿತು  ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯಾಧಿಕಾರಿ ಎಸ್.ಆರ್. ನಟೇಶ್ ಮಾಹಿತಿ ನೀಡಿದ್ದಾರೆ.

ಸೆಪ್ಟೆಂಬರ್ 11 ರಂದು ಸಂಜೆ ನಾಲ್ಕು ಗಂಟೆಗೆ ಮದ್ದೂರು ವಲಯ ಅರಣ್ಯಾಧಿಕಾರಿಗಳ ಕಚೇರಿಯ ಬಳಿಯಿಂದ ಸಾಕಾನೆಗಳಾದ ಚೈತ್ರ ಮತ್ತು ಲಕ್ಷ್ಮಿಗೆ ಅಲಂಕಾರ ಮಾಡಿ ಗಜ ಪಯಣಕ್ಕೆ ಚಾಲನೆ ನೀಡಲಾಗುವುದು. ಈ ಸಂದರ್ಭದಲ್ಲಿ ಗುಂಡ್ಲುಪೇಟೆ ಶಾಸಕ ಸಿ.ಎಸ್. ನಿರಂಜನ್ ಕುಮಾರ್, ಮತ್ತು ಅರಣ್ಯ ಇಲಾಖೆಯ ಸಿಬ್ಬಂದಿಗಳು ಹಾಗೂ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ.

 

Raksha Deshpande

Recent Posts

ಪುಸ್ತಕದಲ್ಲಿ ಬೈಬಲ್‌ ಪದ ಬಳಕೆ : ಕರೀನಾ ಕಪೂರ್‌ಗೆ ಕೋರ್ಟ್‌ ನೋಟಿಸ್‌

ಗರ್ಭಧಾರಣೆಗೆ (ಪ್ರಗ್ನೆನ್ಸಿ) ಸಂಬಂಧಿಸಿದಂತೆ ಬರೆದ ಪುಸ್ತಕದ ಶೀರ್ಷಿಕೆಯಲ್ಲಿ ‘ಬೈಬಲ್’ ಪದ ಬಳಕೆ ಮಾಡಿದಕ್ಕಾಗಿ ಮಧ್ಯಪ್ರದೇಶ ಹೈಕೋರ್ಟ್ ಬಾಲಿವುಡ್ ನಟಿ ಕರೀನಾ…

3 mins ago

ಭಯೋತ್ಪಾದಕ ಕೃತ್ಯದಲ್ಲಿ ಭಾಗಿ: ಉಗ್ರರ ಇಬ್ಬರು ಸಹಚರರ ಬಂಧನ

ಉಗ್ರರ ಇಬ್ಬರು ಸಹಚರರನ್ನು ಜಮ್ಮು–ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

17 mins ago

ಗುಜರಾತ್ ತಂಡದ ನಾಯಕ ಶುಭಮನ್ ಗಿಲ್​ಗೆ ಮತ್ತೆ 24 ಲಕ್ಷ ರೂ. ದಂಡ

ಶುಕ್ರವಾರ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 35 ರನ್‌ಗಳಿಂದ ಜಯಗಳಿಸಿದ ಗುಜರಾತ್ ಟೈಟಾನ್ಸ್ ತಂಡದ ನಾಯಕ ಶುಭಮನ್…

18 mins ago

ಟಿ20 ವಿಶ್ವಕಪ್​ಗೆ ಮುನ್ನ ರಿಷಭ್​ ಪಂತ್​​ಗೆ ನಿಷೇಧ, 30 ಲಕ್ಷ ರೂ. ದಂಡ

17ನೇ ಆವೃತ್ತಿಯ ಐಪಿಎಲ್​ನ 62ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡದ ನಡುವೆ ಹೈವೋಲ್ಟೇಜ್ ಪಂದ್ಯ…

42 mins ago

ʼರಾಜ್ಯ ಸರ್ಕಾರ ಸಾಲ ಮನ್ನಾ ಮಾಡಿ ರೈತರಿಗೆ ನೆರವಾಗಬೇಕುʼ

ರಾಜ್ಯ ಸರ್ಕಾರ ಸಾಲ ಮನ್ನಾ ಮಾಡಿ ರೈತರಿಗೆ ನೆರವಾಗಬೇಕು ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.

44 mins ago

ಪ್ರವಾಹಕ್ಕೆ ತತ್ತರಿಸಿ ಹೋದ ಅಫ್ಗಾನಿಸ್ತಾನ : 200ಕ್ಕೂ ಹೆಚ್ಚು ಜನ ಬಲಿ

ಅಫ್ಘಾನಿಸ್ತಾನದಲ್ಲಿ ಭಾರೀ ಮಳೆಯಿಂದ ಪ್ರವಾಹ ಉಂಟಾಗಿದೆ. ಈ ಪ್ರವಾಹದಿಂದಾಗಿ ಸುಮಾರು 200ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ ಎಂದು ವಿಶ್ವಸಂಸ್ಥೆ ಶನಿವಾರ…

1 hour ago