ಬಂಡೀಪುರದಲ್ಲಿ ಹೊಸ ವರ್ಷಾಚರಣೆಯ ಮೋಜು, ಮಸ್ತಿಗೆ ನಿಷೇಧ

ಚಾಮರಾಜನಗರ : ರಾಜ್ಯದಲ್ಲಿ ಕೊರೊನಾ ಸೋಂಕಿನ ಭೀತಿ ಹೆಚ್ಚಿರುವುದರಿಂದ ಬಂಡಿಪುರದಲ್ಲಿ ಡಿಸೆಂಬರ್ 31 ಹಾಗೂ ಜನವರಿ 1ರಂದು ಹೊಸವರ್ಷಾಚರಣೆಯನ್ನು ನಿಷೇಧಿಸಲಾಗಿದೆ.

ಕೊರೊನಾ ವೈರಸ್ ರೂಪಾಂತರಿ ಒಮಿಕ್ರಾನ್ ಸೋಂಕಿನ ಆತಂಕ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಈ ವರ್ಷ ಬಂಡೀಪುರ ಅರಣ್ಯಧಾಮದಲ್ಲಿ ಹೊಸ ವರ್ಷಾಚರಣೆಯನ್ನು ನಿಷೇಧಿಸಲಾಗಿದೆ.ಡಿಸೆಂಬರ್ 31 ಹಾಗೂ ಜನವರಿ 1 ರಂದು ಅರಣ್ಯ ಇಲಾಖೆಯ ಡಾರ್ಮೆಟರಿಗಳು, ಕಾಟೇಜ್ ಹಾಗೂ ಗೆಸ್ಟ್ ಹೌಸ್‌ಗಳಲ್ಲಿ ವಾಸ್ತವ್ಯ ನಿರ್ಬಂಧಿಸಿದ್ದು, ಆನ್‌ಲೈನ್ ಬುಕಿಂಗ್ ಕೂಡಾ ಬ್ಲಾಕ್ ಮಾಡಲಾಗಿದೆ. ಡಿಸೆಂಬರ್ 31 ಹಾಗೂ ಜನವರಿ 1 ಕ್ಕೆ ಬಂಡೀಪುರದಲ್ಲಿ ಮೋಜು-ಮಸ್ತಿಗಷ್ಟೇ ಬ್ರೇಕ್ ಹಾಕಲಾಗಿದ್ದು, . ಎಂದಿನಂತೆ ಬೆಳಗ್ಗೆ ಹಾಗೂ ಸಂಜೆ ಸಫಾರಿ ಇರಲಿದೆ. ಆದರೆ ವಾಸ್ತವ್ಯ ಹೂಡುವಂತಿಲ್ಲ ಎಂದು ಬಂಡೀಪುರ ಅರಣ್ಯ ಸಂರಕ್ಷಣಾಧಿಕಾರಿ ಮಾಹಿತಿ ನೀಡಿದ್ದಾರೆ.

Swathi MG

Recent Posts

ಕಿಂಗ್ಸ್‌-ರಾಯಲ್ಸ್‌ ಕದನದಲ್ಲಿ ಕಲಾಶ್‌ನಿಕಾವೋ: ಕೊಹ್ಲಿ ಕೆಣಕಿ ಉಳಿದವರುಂಟೇ

ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಆರ್‌ ಸಿ ಬಿ ತಂಡ ಪಂಜಾಬ್ ಕಿಂಗ್ಸ್ ಅನ್ನು 60 ರನ್‌ಗಳಿಂದ…

10 mins ago

ಭಾರೀ ಗಾಳಿ ಮಳೆಗೆ ಮನೆಯ ಗೇಟ್ ಬಿದ್ದು ಬಾಲಕಿ ಮೃತ್ಯು

ಮಳೆ ಜತೆಗೆ ರಭಸವಾಗಿ ಬೀಸಿದ ಬಿರುಗಾಳಿಗೆ ಮನೆಯ ಗೇಟ್ ಕಿತ್ತು ಬಂದಿದ್ದು, ಇದೇ ವೇಳೆ ಮನೆಯ ಮುಂದೆ ಆಟವಾಡುತ್ತಿದ್ದ 7…

13 mins ago

ʼಮೇ 18-19 ಹಳ್ಳಿಗಟ್ಟು ಬೋಡ್ ನಮ್ಮೆ: ಮೇ 11 ರಂದು ದೇವ ಕಟ್ಟ್ ಬೀಳುವುದುʼ

ಕೆಸರಿನ ಓಕುಳಿಯ ಹಬ್ಬವೆಂದು ಖ್ಯಾತಿ ಪಡೆದಿರುವ ಹಳ್ಳಿಗಟ್ಟು ಶ್ರೀ ಭದ್ರಕಾಳಿ ಹಾಗೂ ಶ್ರೀ ಗುಂಡಿಯತ್ ಅಯ್ಯಪ್ಪ ದೇವರ ವಾರ್ಷಿಕ ಬೋಡ್…

36 mins ago

ಪೂಜೆಗೆ ಅರಳಿ ಹೂವು ಬಳಕೆ ನಿಲ್ಲಿಸಲು ಟಿಡಿಬಿ ತೀರ್ಮಾನ

ಕೇರಳದ ತಿರುವಾಂಕೂರು ದೇವಸ್ಥಾನ ಆಡಳಿತ ಮಂಡಳಿಯು (ಟಿಡಿಬಿ) ತನ್ನ ಸುಪರ್ದಿಯಲ್ಲಿರುವ ದೇವಾಲಯಗಳಲ್ಲಿ ಪೂಜೆಗೆ ಅರಳಿ ಹೂವು (ಒಲಿಯಾಂಡರ್‌-ಕಣಗಿಲು ಜಾತಿಗೆ ಸೇರಿದ…

58 mins ago

50 ಕೋ. ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ ಮಂತ್ರಿಮಾಲ್‌: ಬೀಗ ಜಡಿದ ಬಿಬಿಎಂಪಿ

ಸರಿ ಸುಮಾರು 50 ಕೋಟಿಗಿಂತ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಬೆಂಗಳೂರಿನ ಪ್ರತಿಷ್ಠಿತ ಮಾಲ್‌ಗೆ ಬಿಬಿಎಂಪಿ ಬೆಳ್ಳಂಬೆಳಗ್ಗೆಯೇ  ಬೀಗ…

1 hour ago

ಆಟವಾಡುತ್ತಿದ್ದ ಮಗುವಿಗೆ ಕಚ್ಚಿದ ಬೀದಿ ನಾಯಿ : ಮಹಾನಗರ ಪಾಲಿಕೆ ವಿರುದ್ಧ ಆಕ್ರೋಶ

ಆಟವಾಡುತ್ತಿದ್ದ ಮಕ್ಕಳ ಮೇಲೆ ಎರಗಿ ಬೀದಿ ನಾಯಿಗಳು ಕಚ್ಚಿದ ಘಟನೆ ಬೆಳಗಾವಿ ನ್ಯೂ ಗಾಂಧಿನಗರದಲ್ಲಿ ನಡೆದಿದೆ.

1 hour ago