ಚಾಮರಾಜನಗರ

ಬಂಡೀಪುರ ಅರಣ್ಯಾಧಿಕಾರಿ ವಿರುದ್ಧ ಆದಿವಾಸಿಗಳ ಆಕ್ರೋಶ: ಉಮೇಶ್ ಕತ್ತಿ ಜತೆ ವಾಗ್ವಾದ

ಚಾಮರಾಜನಗರ: ಬಂಡೀಪುರ ಕ್ಷೇತ್ರ ವ್ಯಾಪ್ತಿಯಲ್ಲಿ ದಿನಗೂಲಿ ನೌಕರರಾಗಿದ್ದ 208 ಮಂದಿ ಆದಿವಾಸಿಗಳನ್ನು ಏಕಾಏಕಿ 50-60 ಕಿ.ಮೀ ದೂರದ ಪ್ರದೇಶಗಳಿಗೆ ಸಿಎಫ್ಒ ವರ್ಗಾವಣೆ ಮಾಡಿದ್ದಾರೆ. ಇದರಿಂದ ತುಂಬಾ ಸಮಸ್ಯೆ ಆಗುತ್ತಿದೆ ಎಂದು ಆದಿವಾಸಿ ಮಹಿಳೆಯರು ಅರಣ್ಯ ಸಚಿವ ಉಮೇಶ್ ಕತ್ತಿ ಎದುರು ಆಕ್ರೋಶ ಹೊರಹಾಕಿದರು.
ಗುಂಡ್ಲುಪೇಟೆ ತಾಲ್ಲೂಕಿನ ಮೇಲುಕಾಮನಹಳ್ಳಿಯ ಆದಿವಾಸಿ ಕಾಲೋನಿಗೆ ಗುರುವಾರ ಭೇಟಿ ನೀಡಿದ್ದ ವೇಳೆ ಸಿಎಫ್‌ಒ ಎಸ್.ಆರ್.ನಟೇಶ್ ಅವರನ್ನು ಸುತ್ತುವರೆದ ಮಹಿಳೆಯರು ತರಾಟೆಗೆ ತೆಗೆದುಕೊಂಡರು.
ಗಿರಿಜನ ಕಾಲೊನಿಯ ವಯಸ್ಸಾದ ದಿನಗೂಲಿ ನೌಕರರನ್ನು ದೂರದ ಪ್ರದೇಶಕ್ಕೆ ಸಿಎಫ್ಒ ನಟೇಶ್ ಅವರು ವರ್ಗಾವಣೆ ಮಾಡಿದ್ದಾರೆ. ದೂರದ ಪ್ರದೇಶಕ್ಕೆ ವರ್ಗ ಮಾಡಿದ್ದರಿಂದ ಆ ಕಾಡಿನ ಮಾಹಿತಿ ಇರುವುದಿಲ್ಲ. ಇದರಿಂದ ಕಾಡು ಪ್ರಾಣಿಗಳ ದಾಳಿ ಸಂದರ್ಭದಲ್ಲಿ ಅವುಗಳಿಂದ ತಪ್ಪಿಸಿಕೊಳ್ಳಲು ಕಷ್ಟವಾಗುತ್ತದೆ. ಅಲ್ಲದೇ 24 ಗಂಟೆಗಳ ಕೆಲಸಕ್ಕೆ ತಿಂಗಳಿಗೆ ನೀಡಲಾಗುವ 11ಸಾವಿರ ರೂ ಸಂಬಳವೂ ಯಾವುದಕ್ಕೂ ಸಾಲುತ್ತಿಲ್ಲ. ಇದರಿಂದ ಜೀವನ ನಿರ್ವಹಣೆಯೇ ಕಷ್ಟವಾಗಿದೆ. ವೃದ್ದರು, ಮಕ್ಕಳನ್ನು ಕಟ್ಟಿಕೊಂಡು ಕುಟುಂಬಗಳನ್ನು ಸ್ಥಳಾಂತರಿಸಲು ಸಾಧ್ಯವಾಗದೇ ಇಕ್ಕಟ್ಟಿಗೆ ಸಿಲುಕಿದ್ದೇವೆ ಎಂದು ಗ್ರಾಪಂ ಸದಸ್ಯ ಚಿಕ್ಕತಾಯಮ್ಮ ಹಾಗೂ ವೃದ್ಧೆ ಬೊಮ್ಮಿ ಅಸಮಾಧಾನ ವ್ಯಕ್ತಪಡಿಸಿದರು.
ನಮ್ಮಿಂದಲೇ ಕಾಡು ಉಳಿದಿದೆ ಎಂಬುದನ್ನು ಮರೆಯಬೇಡಿ. ಆದರೆ ನಮಗೆ ಸಮಸ್ಯೆ ಉಂಟು ಮಾಡುತ್ತಿದ್ದಾರೆ. ಕುರಿತು ಮಹಿಳೆಯರನ್ನು ಸಮಾಧಾನ ಪಡಿಸಲು ಯತ್ನಿಸಿದ ಸಚಿವ ಕತ್ತಿ,ಮಧ್ಯಾಹ್ನ ಅಧಿಕಾರಿಗಳ ಜೊತೆ ಸಭೆ ಕರೆದಿದ್ದು ಈ ವಿಚಾರದ ಬಗ್ಗೆ ಪ್ರಸ್ತಾಪ ಮಾಡಿ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಇದರಿಂದ ತೃಪ್ತರಾಗದ ಮಹಿಳೆಯರು ಸಚಿವರ ಜತೆ ವಾಗ್ದಾದಕ್ಕಿಳಿದರು. ಇದರಿಂದ ಸಿಟ್ಟಿಗೆದ್ದ ಸಚಿವ ಕತ್ತಿ, ಏನು ಮಾಡಿಕೊಳ್ಳುತ್ತಿರೊ ಮಾಡಿಕೊಳ್ಳಿ ಎಂದು ಹೇಳಿ ಕಾರು ಏರಿದರು.

Indresh KC

Recent Posts

ಆರ್‌ಸಿಬಿ ಸಿಎಸ್‌ಕೆ ಹೈವೋಲ್ಟೇಜ್ ಪಂದ್ಯ: ಸೈಬರ್‌ ಖದೀಮರಿಂದ ವಂಚನೆ

ಇಂದು ಚಿನ್ನಸ್ವಾಮಿಯಲ್ಲಿ ನಡೆಯಲಿರುವ ಹೈವೋಲ್ಟೇಜ್ ಪಂದ್ಯದ ಟಿಕೆಟ್ ಈಗಾಗಲೇ ಸೋಲ್ಡ್ ಔಟ್ ಆಗಿದೆ. ಆದರೆ ಈ ಪಂದ್ಯದ ಟಿಕೆಟ್‌ ನೀಡುತ್ತೇವೆ…

11 mins ago

ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು ಮುಂದಾದ ಸರಕಾರ

ಪಂಚ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವುದು ಸರಕಾರಕ್ಕೆ ಸವಾಲಾಗಿದ್ದು, ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು…

27 mins ago

ಬಹುಭಾಷೆಯಲ್ಲಿ ಡಬ್ ಆಗಿದೆ ದೊಡ್ಮನೆ ಕುಡಿಯ ‘ಯುವ’ ಸಿನಿಮಾ

ದೊಡ್ಮನೆ ಕುಡಿ ಯುವರಾಜ್‌ಕುಮಾರ್ ನಟನೆಯ ‘ಯುವ’ ಸಿನಿಮಾ ಒಟಿಟಿಗೆ ಲಗ್ಗೆ ಇಟ್ಟಿದ್ದು ಇದೀಗ ಬಹುಭಾಷೆಯಲ್ಲಿ ಯುವ ಸಿನಿಮಾ ಡಬ್ ಆಗಿದೆ.…

47 mins ago

ಕೊನೆಯ ಸ್ಥಾನದೊಂದಿಗೆ ಐಪಿಎಲ್ ಅಂತ್ಯಗೊಳಿಸಿದ ಮುಂಬೈ ಇಂಡಿಯನ್ಸ್

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಶುಕ್ರವಾರ  ನಡೆದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ  ಹಾರ್ದಿಕ್ ಪಾಂಡ್ಯ ಪಡೆ ಮುಂಬೈ ಇಂಡಿಯನ್ಸ್ ಸೋಲನುಭವಿಸಿದೆ.

1 hour ago

8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌: ಗುಡುಗು, ಮಿಂಚು ಸಹಿತ ಮಳೆ ಸಾಧ್ಯತೆ

ರಾಜ್ಯಾದ್ಯಂತ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು,  40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಿ, ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ.

2 hours ago

ಸ್ವಾತಿ ಮಲಿವಾಲ್‌ ಮೇಲೆ ದೂರು ದಾಖಲಿಸಿದ ಆರೋಪಿ ಬಿಭವ್‌

ಆಪ್‌ ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣದ ಆರೋಪಿಯಾಗಿರುವ ಬಿಭವ್‌ ಕುಮಾರ್‌ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಗೆ…

2 hours ago