ಗುಂಡ್ಲುಪೇಟೆ : ದಟ್ಟ ಮಂಜಿನಿಂದಾಗಿ ಮುಂಜಾನೆ ದಾರಿ ಕಾಣದ ಸ್ಥಿತಿ ನಿರ್ಮಾಣವಾಗಿದ್ದು, ಅನಾಹುತಗಳು ಸೃಷ್ಟಿಯಾಗುತ್ತಿದ್ದು ತಾಲ್ಲೂಕಿನ ಬೇಗೂರಿನ ಹಿರಿಕಾಟಿ ಬಳಿ ಬೆಳ್ಳಂ ಬೆಳಿಗ್ಗೆ ಬಸ್ ಗಳ ನಡುವೆ ಡಿಕ್ಕಿ ಸಂಭವಿಸಿದ್ದು, ಭಾರೀ ಅನಾಹುತ ತಪ್ಪಿದೆ.
ಮಂಜು ಕವಿದ ವಾತಾವರಣದಿಂದ ಮುಂದೆ ನಿಂತಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್ ಗೆ ಕೇರಳ ರಾಜ್ಯದ ಸಾರಿಗೆ ಬಸ್ ಹಿಂಬದಿಯಿಂದ ಬಂದು ಡಿಕ್ಕಿ ಹೊಡೆದಿದೆ. ಪರಿಣಾಮ ಕೆ.ಎಸ್.ಆರ್.ಟಿ.ಸಿ ಬಸ್ ಕಂಡಕ್ಟರ್ ಸೇರಿದಂತೆ ಬಸ್ಸಿನಲ್ಲಿದ್ದ ಮೂವರು ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಅದೃಷ್ಟ ವಶಾತ್ ಯಾವುದೇ ರೀತಿಯ ಅನಾಹುತ ಸಂಭವಿಸಿಲ್ಲ. ಘಟನಾ ಸ್ಥಳಕ್ಕೆ ಬೇಗೂರು ಪೊಲೀಸರು ಭೇಟಿ ನೀಡಿ ಉಳಿದ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಟ್ಟರು.