ಬಿಳಿಗಿರಿರಂಗನಬೆಟ್ಟದಲ್ಲಿ ಅದ್ಧೂರಿ ರಥೋತ್ಸವ

ಚಾಮರಾಜನಗರ: ಕಳೆದ ಆರು ವರ್ಷಗಳಿಂದ ನಡೆಯದೆ ನಿಂತು ಹೋಗಿದ್ದ ಜಿಲ್ಲೆಯ ಯಳಂದೂರು ತಾಲ್ಲೂಕಿನ ಬಿಳಿಗಿರಿರಂಗನ ಬೆಟ್ಟದ ಬಿಳಿಗಿರಿರಂಗನಾಥನ ರಥೋತ್ಸವ ಅದ್ಧೂರಿಯಾಗಿ ನಡೆಯಿತು.

ಈ ಬಾರಿ ನೂತನ ರಥದಲ್ಲಿ ಮೊದಲ ಬ್ರಹ್ಮರಥೋತ್ಸವ ಜರುಗಿದ್ದು ಜಿಲ್ಲೆ, ರಾಜ್ಯ ಹಾಗೂ ಹೊರ ರಾಜ್ಯದಿಂದ ಆಗಮಿಸಿದ ಸಹಸ್ರಾರು ಭಕ್ತರು ಭವ್ಯ ಕ್ಷಣಕ್ಕೆ ಸಾಕ್ಷಿಯಾಗಿದ್ದರು.

ನಿಗಧಿತ ಸಮಯಕ್ಕೆ ಸರಿಯಾಗಿ ಬಿಳಿಗಿರಿರಂಗನಾಥನ ಉತ್ಸವ ಮೂರ್ತಿಯನ್ನು ಅಲಂಕೃತ ರಥದಲ್ಲಿ ಕುಳ್ಳರಿಸಿ ರಥ ಎಳೆಯುವ ಮೂಲಕ ಭಕ್ತರು ಪುನೀತರಾದರು. ಎಲ್ಲರೂ ಗೋವಿಂದ ಗೋವಿಂದ ಎನ್ನುವ ನಾಮ ಸ್ಮರಣೆ ಮಾಡುತ್ತಿದ್ದದ್ದು ಕಂಡು ಬಂತು.

ಬಿಳಿಗಿರಿರಂಗನ ಬೆಟ್ಟದಲ್ಲಿ ಶನಿವಾರ ರಥೋತ್ಸವ ನಡೆಯುವ ಹಿನ್ನಲೆಯಲ್ಲಿ ಯಳಂದೂರು ಮಾರ್ಗವಾಗಿ ಬರುವ ಖಾಸಗಿ ವಾಹನಗಳನ್ನು ನಿಷೇಧಿಸಲಾಗಿತ್ತು. ಆದರೆ ಖಾಸಗಿ ವಾಹನಗಳಲ್ಲಿ ಬಂದ ಸಾರ್ವಜನಿಕರಿಗೂ ಪೊಲೀಸ್ ಅಧಿಕಾರಿಗಳು ಅರಣ್ಯ ಇಲಾಖೆಯ ಸಿಬ್ಬಂದಿಗಳ ನಡುವೆ ಮಾತಿನ ಚಕಮಕಿ ನಡೆದ ಹಿನ್ನಲೆಯಲ್ಲಿ ಖಾಸಗಿ ವಾಹನಗಳು ಎಂದಿನಂತೆ ಬೆಟ್ಟಕ್ಕೆ ಸಂಚಾರ ಮಾಡಿದ್ದು, ಟ್ರಾಫಿಕ್ ಜಾಮ್ ಆಗಲು ಕಾರಣವಾಗಿತ್ತು.

ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್. ಸುಂದರ್ ರಾಜು ರವರು ಆಗಮಿಸಿ ಟ್ರಾಫಿಕ್ ಕಂಟ್ರೋಲ್ ಮಾಡಲು ಪ್ರಯತ್ನಿಸಿದರೂ ಪ್ರಯೋಜನವಾಗಿಲ್ಲ . ಈ ನಡುವೆ ಬೆಟ್ಟದ ಕಿರುದಾದ ರಸ್ತೆಯಲ್ಲಿ ಖಾಸಗಿ ವಾಹನಗಳ ಜೊತೆ ಕೆ.ಎಸ್. ಆರ್. ಟಿ .ಸಿ ಬಸ್ ಸಂಚಾರ ಮಾಡಿದ್ದರಿಂದ ಖಾಸಗಿ ಬಸ್ ವೊಂದು ಮರಕ್ಕೆ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಅದೃಷ್ಟವಷಾತ್ ಯಾರಿಗೂ ತೊಂದರೆಯಾಗಲಿಲ್ಲ.

Swathi MG

Recent Posts

ಎಕ್ಸಾಂನಲ್ಲಿ ಫೇಲ್‌ : ಕೆರೆಗೆ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ

ಪರೀಕ್ಷೆಯಲ್ಲಿ ಫೇಲ್‌ ಆಗಿದ್ದೇನೆ ಎಂದು ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. . ಫೇಲ್ ಆದ ವಿಚಾರ ಪೋಷಕರಿಗೆ…

20 mins ago

29ನೇ ಬಾರಿ ಮೌಂಟ್‌ ಎವರೆಸ್ಟ್‌ ಏರಿದ ಕಮಿ ರೀಟಾ ಶೆರ್ಪಾ

ಎವರೆಸ್ಟ್ ಮ್ಯಾನ್ ಎಂದೇ ಹೆಸರಾಗಿರುವ ನೇಪಾಳದ ಕಮಿ ರೀಟಾ ಶೆರ್ಪಾ 29ನೇ ಬಾರಿ ವಿಶ್ವದ ಅತಿ ಎತ್ತರದ ಪರ್ವತ ಮೌಂಟ್‌…

29 mins ago

ಭೀಕರ ಅಪಘಾತ : ಇಬ್ಬರು ಶಿಕ್ಷಕರು ಸ್ಥಳದಲ್ಲೇ ದುರ್ಮರಣ

ಮದುವೆಗೆ ಹೋಗಿ ತಡರಾತ್ರಿ ಮರಳಿ ಬರುತ್ತಿದ್ದ ಸಂದರ್ಭ ಕಾರು ಪಲ್ಟಿಯಾಗಿ ಇಬ್ಬರು ಶಿಕ್ಷಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಪಾವಗಡ -ತುಮಕೂರು…

41 mins ago

ಕಡಬ: ಸಿಡಿಲು ಬಡಿದು ಮರಳುಗಾರಿಕೆ ಮಾಡುತ್ತಿದ್ದ ಕಾರ್ಮಿಕ ಸಾವು

ದಕ್ಷಿಣಕನ್ನಡ ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಮಳೆ ಆರಂಭವಾಗಿದ್ದು, ಬಿಸಿಲಿನಿಂದ ಕಂಗೆಟ್ಟಿದ್ದ ದಕ್ಷಿಣಕನ್ನಡ ಜಿಲ್ಲೆಗೆ ವರುಣ ತಂಪೇರಗಿದ್ದಾನೆ. ಈ ನಡುವೆ ಸಿಡಿಲು…

1 hour ago

ಕಲುಷಿತ ನೀರು ಸೇವಿಸಿ 25ಕ್ಕೂ ಹೆಚ್ಚು ಜನರು ಅಸ್ವಸ್ಥ

ಕಲುಷಿತ ನೀರು ಸೇವಿಸಿ 25ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿರುವ ಘಟನೆ ಹುಣಸೂರು ತಾಲೂಕಿನ ಕಡೇಮನುಗನಹಳ್ಳಿ ಗ್ರಾಮದಲ್ಲಿ ನಡೆದಿದೆ

1 hour ago

ಮಂಜೂರಾದ ಜಮೀನು ಪಿಟಿಸಿಎಲ್ ಕಾಯಿದೆಯಡಿ ಮರು ಸ್ಥಾಪನೆ ಇಲ್ಲ

ಕರ್ನಾಟಕ ಭೂ ಸುಧಾರಣಾ ಕಾಯಿದೆಯಡಿಯಲ್ಲಿ ಭೂ ನ್ಯಾಯಮಂಡಳಿಗಳಿಂದ ಮಂಜೂರಾಗಿರುವ ಜಮೀನುಗಳನ್ನು ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪಂಗಡಗಳ (ಕೆಲ ಜಮೀನುಗಳ…

1 hour ago