ಚಾಮರಾಜನಗರ

ಬೆಳಗಾವಿ ರಾಜಕಾರಣಿಗಳು ಮರಾಠಿಗರ ಏಜೆಂಟರು : ವಾಟಾಳ್

ಚಾಮರಾಜನಗರ: ಬೆಳಗಾವಿ ರಾಜಕಾರಣಿಗಳು ಹಾಗೂ ಅಲ್ಲಿನ ಅಧಿಕಾರಿಗಳು ಸಂಪೂರ್ಣ ಮರಾಠಿಗಳ ಏಜೆಂಟರಾಗಿದ್ದಾರೆ. ಜನಪ್ರತಿನಿಧಿಗಳ ಮಾತು ಮರಾಠಿ, ಮರಾಠಿ ಮತ ಬೇಕು, ರಾಜಕಾರಣಕ್ಕೆ ಕರ್ನಾಟಕ ಬೇಕು ಕನ್ನಡ ಬೇಡ. ಅಧಿಕಾರಿಗಳು ಎಂಇಎಸ್ ವಿರುದ್ಧ ಕೇಸ್ ಹಾಕಲು ಹಿಂದೇಟು ಹಾಕುತ್ತಾರೆ. ಮಾತು ಮಾತ್ರ ಆಡ್ತಾರೆ, ಅವರ ವಿರುದ್ಧ ಕ್ರಮಕೈಗೊಳ್ಳಲ್ಲ ಎಂದು ವಾಟಾಳ್ ನಾಗರಾಜ್ ಕಿಡಿಕಾರಿದರು.

ಚಾಮರಾಜನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ವಾಟಾಳ್ ನಾಗರಾಜ್ ಮಾತನಾಡಿ, ಸರ್ಕಾರ ಈ ಹಿಂದೆಯೇ ಎಂಇಎಸ್ ಅನ್ನು ನಿಷೇಧ ಮಾಡಿದ್ದರೇ ಈಗ ಅವರು ಹೊಸ ಭೂಪಟ ರಚಿಸಿ, ಬೆಳಗಾವಿ, ನಿಪ್ಪಾಣಿ, ಕಾರವಾರ ಬೇಕು ಎನ್ನುತ್ತಿರಲಿಲ್ಲ. ಸರ್ಕಾರ ಆ ಕೆಲಸ ಮಾಡದೇ ಕನ್ನಡಿಗರಿಗೆ ದ್ರೋಹ ಎಸಗಿದೆ.ಈ ಕೂಡಲೇ ಮಹಾರಾಷ್ಟ್ರ ಸರ್ಕಾರಕ್ಕೆ ಸಿಎಂ ಬೊಮ್ಮಾಯಿ ಗಂಭೀರವಾಗಿ ಎಚ್ವರಿಕೆ ಮಾತು ಆಡಬೇಕು. ಬೆಳಗಾವಿಯನ್ನು 3 ಭಾಗಗಳಾಗಿ ವಿಭಜಿಸಲು ಹೊರಟಿರುವುದು ಸರಿಯಲ್ಲ, ಬೆಳಗಾವಿಯನ್ನು ಏನಾದರೂ ವಿಭಜಿಸಿದರೇ ಮುಂದೆ ಅಪಾಯ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಶರದ್ ಪವಾರ್ ಅವರು ಎಸ್ ಸಿಪಿ ಕಾರ್ಯಾಲಯವನ್ನು ಬೆಂಗಳೂರಲ್ಲಿ ತೆರೆಯುತ್ತಿದ್ದಾರೆ. ಕೆಲ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ನಿಲ್ಲಿಸಲು ತಯಾರಿಯನ್ನು ಮಾಡಿಕೊಂಡಿದ್ದಾರೆ. ಆದರೆ, ಅದಕ್ಕೂ ಮೊದಲು ಬೆಳಗಾವಿ ಬಗ್ಗೆ ತಮ್ಮ ನಿಲುವು ಸ್ಪಷ್ಟಪಡಿಸಲಿ. ನಿಲುವು ಸ್ಪಷ್ಟನೆಗೂ ಮುನ್ನ ಕಾರ್ಯಾಲಯ ತೆರೆಯಬಾರದು ಎಂದು ಆಕ್ರೋಶ ಹೊರ ಹಾಕಿದರು‌.

ಈಗಿನ ಸಿಎಂ ಬೊಮ್ಮಾಯಿ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದು, ದರ್ಪ ತೋರದೇ ಜನಪರವಾಗಿದ್ದಾರೆ. ಅಂತಹದರಲ್ಲಿ ಬೊಮ್ಮಾಯಿ ಬದಲಾವಣೆಯ ಮಾತು ಕೇಳಿಬಂದಿದ್ದು ಬೊಮ್ಮಾಯಿ ಅವರನ್ನು ಬದಲಾಯಿಸುವುದು ಸರಿಯಲ್ಲ‌. ಅದ್ಯಾರೋ ಬಿ.ಎಲ್.ಸಂತೋಷ್ ಆಗಾಗ್ಗೆ ರಾಜ್ಯಕ್ಕೆ ಬಂದು ಏನಾದರೂ ಮಾತನಾಡಿ ಹೋಗುತ್ತಾರೆ, ಬಿ.ಎಲ್.ಸಂತೋಷ್ ಅವರಿಂದ ರಾಜ್ಯಕ್ಕೆ ಏನು ಕೊಡುಗೆ ಇದೆ..? ಈಗಾಗಲೇ ಎರಡು ಮೂರು ಮಂದಿ ಸಿಎಂ ಆಗಿದ್ದಾರೆ. ಈಗ ಬದಲಾವಣೆ ಮಾತು ಆಡಿರುವ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್‌. ಸಂತೋಷ್ ವಿರುದ್ಧ ಕಿಡಿಕಾರಿದರು.

ದೆಹಲಿ ನ್ಯಾಯಾಲಯವು ತಮ್ಮ ವಿರುದ್ಧ ಬಂಧನ ವಾರೆಂಟ್ ಹೊರಡಿಸಿದ್ದರ ಬಗ್ಗೆ ಅವರು ಮಾತನಾಡಿ, ಈ ಹಿಂದೆ ಡಬ್ಬಿಂಗ್ ವಿರೋಧಿಸಿ ಹೋರಾಟದ ವೇಳೆ ಯಾವುದೇ ಕಾರಣಕ್ಕೂ ಡಬ್ಬಿಂಗ್ಗೆ ಸಹಮತ ಇಲ್ಲ ಎಂದು ಹೇಳಿದ್ದೆವು. ಆ ಸಮಯದಲ್ಲಿ ಡಬ್ಬಿಂಗ್ ಪರ ಇರುವವರು ನ್ಯಾಯಾಲಯಕ್ಕೆ ದಾವೆ ಹಾಕಿದ್ದರು. ಕೋರ್ಟ್ಗೆ ಹಾಜರಾಗದಿದ್ದರಿಂದ ಬಂಧನ ವಾರೆಂಟ್ ಜಾರಿ ಮಾಡಿದ್ದಾರೆ. ದೆಹಲಿ ಪೊಲೀಸ್ ಸಿಬ್ಬಂದಿ ನೋಟಿಸ್ ಕೊಟ್ಟಿದ್ದು, ಇದೇ 11ಕ್ಕೆ ನ್ಯಾಯಾಲಯಕ್ಕೆ ಹಾಜರಾಗುವಂತೆ ಹೇಳಿದ್ದಾರೆ. ವಕೀಲರುಗಳ ಬಗ್ಗೆ ಚರ್ಚೆ ನಡೆಸುತ್ತಿದ್ದೇನೆ ಎಂದರು.

Sneha Gowda

Recent Posts

ʼನನ್ನನ್ನು ನೋಡಬೇಡಿ, ಅಟಲ್‌ ಸೇತುವೆ ನೋಡಿʼ ಎಂದ ರಶ್ಮಿಕಾಗೆ ಪಿಎಂ ಮೋದಿ ಮೆಚ್ಚುಗೆ

ನಟಿ ರಶ್ಮಿಕಾ ಮಂದಣ್ಣ ಅವರು ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಹೊಂದಿದ್ದಾರೆ. ಇದಕ್ಕೆ ಕಾರಣ ಆಗಿದ್ದು ಅವರ ಸಿನಿಮಾಗಳು.…

17 mins ago

ಗಮನ ಸೆಳೆದ ಮಾವು ಮೇಳ; ವಿವಿಧ ತಳಿಯ ಮಾವಿನ ಹಣ್ಣುಗಳ ಪ್ರದರ್ಶನ

ಹಣ್ಣುಗಳ ರಾಜನೆಂದು ಕರೆಯಲಾಗುವ, ಬಾಯಲ್ಲಿ ನೀರೂರಿಸುವ ಮಾವಿನ ಹಣ್ಣುಗಳ ಪ್ರದರ್ಶನ ಹಾಗೂ ಮಾರಾಟ ಮೇಳ ದೊಡ್ಡಣಗುಡ್ಡೆಯ ಶಿವಳ್ಳಿ ಮಾದರಿ ತೋಟಗಾರಿಕಾ…

42 mins ago

ಇಂದು ರೀ ರಿಲೀಸ್ ಆದ ಉಪ್ಪಿಯ ‘‘A’’ ಸಿನಿಮಾ; ಸ್ವಾಗತಿಸಿದ ಫ್ಯಾನ್ಸ್

ಕನ್ನಡ ಚಿತ್ರರಂಗದ ಸರ್ವಕಾಲಿಕ ಸೂಪರ್ ಹಿಟ್ ಚಿತ್ರ ಉಪೇಂದ್ರ ನಿರ್ದೇಶನದ “A” ಸಿನಿಮಾ ಇಂದು ರೀ ರಿಲೀಸ್​ ಆಗಿದೆ. ಬೆಂಗಳೂರಿನ…

1 hour ago

ಚಾರ್ ಧಾಮ್​ ಯಾತ್ರೆ, ದೇವಸ್ಥಾನಗಳ ಬಳಿ ರೀಲ್ಸ್​ಗೆ ನಿಷೇಧ

ಚಾರ್​ ಧಾಮ್ ಯಾತ್ರೆ ಶುರುವಾಗಿದ್ದು, ಮೇ 31ರವರೆಗೆ ವಿಐಪಿ ದರ್ಶನಕ್ಕೆ ಅವಕಾಶ ನೀಡದಿರಲು ಸರ್ಕಾರ ನಿರ್ಧರಿಸಿದೆ. ಅಷ್ಟೇ ಅಲ್ಲದೆ ದೇವಾಲಯದಗಳ…

2 hours ago

ಎವರೆಸ್ಟ್​, ಎಂಡಿಎಚ್​ ಮಸಾಲೆಗಳ ಮಾರಾಟ ನಿಷೇಧ !

ಭಾರತದ ಎಂಡಿಎಚ್​ ಹಾಗೂ ಎವರೆಸ್ಟ್​ ಮಸಾಲೆ ಉತ್ಪನ್ನಗಳಲ್ಲಿ ವಿಷಕಾರಿ ಅಂಶ ಇರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ನೇಪಾಳವು…

3 hours ago

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಮಳೆಯ ಅಬ್ಬರ

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ,…

3 hours ago