ಬೇಬಿ ಬೆಟ್ಟದ ಜಾತ್ರೆಯಲ್ಲಿ 55 ರಾಸುಗಳಿಗೆ ಬಹುಮಾನ

ಪಾಂಡವಪುರ : ಜಿಲ್ಲೆಯ ಪಾಂಡವಪುರ ತಾಲೂಕಿನ ಪುರಾಣ ಪ್ರಸಿದ್ದ ಬೇಬಿ ಬೆಟ್ಟದ ದನಗಳ ಜಾತ್ರೆಯಲ್ಲಿ ಭಾಗವಹಿಸಿದ್ದ  ಉತ್ತಮ ರಾಸುಗಳ ಆಯ್ಕೆ ಭಾನುವಾರ ನಡೆದಿದ್ದು, ಸುಮಾರು 55 ರಾಸುಗಳನ್ನು ಬಹುಮಾನಕ್ಕ ಆಯ್ಕೆ ಮಾಡಲಾಯಿತು.

ಜಾತ್ರೆಯಲ್ಲಿ ಮೂರು ಸಾವಿರಕ್ಕೂ ಹೆಚ್ಚು ರಾಸುಗಳು ಭಾಗವಹಿಸಿದ್ದು, ಈ ಪೈಕಿ ಎತ್ತುಗಳು, ಜೋಡಿ ಕಡಸುಗಳು ಹಾಗೂ ಬೀಜದ ಹೋರಿಗಳು ಸೇರಿದಂತೆ 15 ವಿಭಾಗಗಳಾಗಿ ವಿಂಗಡಿಸಿ ಆಯ್ಕೆ ನಡೆಸಲಾಯಿತು. ಹಾಲು ಹಲ್ಲಿನ, 2, 4, 6 ಹಲ್ಲು ಹಾಗೂ ಬಾಯಿಗೂಡಿದ ರಾಸುಗಳನ್ನು ಸೇರಿದಂತೆ 230 ಜೊತೆ ರಾಸುಗಳನ್ನು ಬಹುಮಾನಕ್ಕೆ ನೋಂದಣಿ ಮಾಡಲಾಗಿತ್ತು.

ಆಯ್ಕೆ ಪ್ರಕ್ರಿಯೆಯಲ್ಲಿ ವಿವಿಧ ತಳಿಗಳ ಗುಣ ಲಕ್ಷಣದ ಆಧಾರದ ಮೇಲೆ ವಿಭಾಗವಾರು ರಾಸುಗಳನ್ನು ಪಶು ವೈದ್ಯಾಧಿಕಾರಿಗಳ ತಂಡ ಯಾವುದೇ ಹಸ್ತಕ್ಷೇಪವಿಲ್ಲದೇ ಸಾರ್ವಜನಿಕರೆದುರು ಪಾರದರ್ಶಕವಾಗಿ ಆಯ್ಕೆ ಮಾಡಿದರು. ಆಯ್ಕೆಯಾದ ರಾಸುಗಳಿಗೆ ಮಾ.8 ರಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಕೆ.ಸಿ.ನಾರಾಯಣಗೌಡ ಹಾಗೂ ಶಾಸಕ ಸಿ.ಎಸ್.ಪುಟ್ಟರಾಜು ನೇತೃತ್ವದಲ್ಲಿ ಬಹುಮಾನ ವಿತರಿಸಲಾಗುವುದು.

55 ವಿಜೇತ ರಾಸುಗಳಿಗೆ ತಲಾ 5 ಗ್ರಾಂನಂತೆ ಒಟ್ಟು 250 ಗ್ರಾಂ ಚಿನ್ನದ ಬಹುಮಾನ ನೀಡಲಾಗುತ್ತದೆ ಎಂದು ಪಾಂಡವಪುರ ಪಶು ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ಬಿ.ಪ್ರವೀಣ್‌ಕುಮಾರ್ ತಿಳಿಸಿದ್ದಾರೆ.

ಪಾಂಡವಪುರ ಪಶು ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ಬಿ.ಪ್ರವೀಣ್‌ಕುಮಾರ್ ನೇತೃತ್ವದಲ್ಲಿ ಮೈಸೂರು, ಚಾಮರಾಜನಗರ ಸೇರಿದಂತೆ ಹೊರ ಜಿಲ್ಲೆಗಳಿಂದ ಡಾ.ರಾಘವೇಂದ್ರ, ಡಾ.ನಟರಾಜು, ಡಾ.ಶಶಿಧರ್, ಡಾ.ಹರೀಶ್, ಡಾ.ಮಧುಚಂದ್ರೇಗೌಡ ಅವರುಗಳ ನೇತೃತ್ವದಲ್ಲಿ ಎರಡು ತಂಡಗಳು ಆಯ್ಕೆ ಪ್ರಕ್ರಿಯೆ ನಡೆಸಿದರು.

ಸ್ಥಳೀಯ ಪಶು ವೈದ್ಯಾಧಿಕಾರಿಗಳಾದ ಡಾ.ಮಹೇಂದ್ರ, ಡಾ.ಹಿಮಚಲ, ಡಾ.ದರ್ಶನ್, ಡಾ.ಮಧು, ಪಶು ಪರೀಕ್ಷಕರಾದ ಕೆ.ಶಿವಲಿಂಗೇಗೌಡ, ಶ್ರೀನಿವಾಸ್,  ಲೋಕೇಶ್,  ಸಿಬ್ಬಂದಿಗಳಾದ ಸಣ್ಣೇಗೌಡ, ಸಚಿನ್, ಕುಮಾರ್,  ಕದರೇಶ್ ಮತ್ತು ಶ್ರೀ ರಾಮಯೋಗಿಶ್ವರ ಮಠದ ಶಿವಬಸವ ಸ್ವಾಮೀಜಿ, ತಾ.ಪಂ ಇಒ ಆರ್.ಪಿ.ಮಹೇಶ್, ಜಾತ್ರಾ ಸಲಹಾ ಸಮಿತಿ ಅಧ್ಯಕ್ಷ ಶಿಂಡಬೋಗನಹಳ್ಳಿ ನಾಗಣ್ಣ  ಇದ್ದರು.

Sneha Gowda

Recent Posts

ʼಮೇ 18-19 ಹಳ್ಳಿಗಟ್ಟು ಬೋಡ್ ನಮ್ಮೆ: ಮೇ 11 ರಂದು ದೇವ ಕಟ್ಟ್ ಬೀಳುವುದುʼ

ಕೆಸರಿನ ಓಕುಳಿಯ ಹಬ್ಬವೆಂದು ಖ್ಯಾತಿ ಪಡೆದಿರುವ ಹಳ್ಳಿಗಟ್ಟು ಶ್ರೀ ಭದ್ರಕಾಳಿ ಹಾಗೂ ಶ್ರೀ ಗುಂಡಿಯತ್ ಅಯ್ಯಪ್ಪ ದೇವರ ವಾರ್ಷಿಕ ಬೋಡ್…

9 mins ago

ಪೂಜೆಗೆ ಅರಳಿ ಹೂವು ಬಳಕೆ ನಿಲ್ಲಿಸಲು ಟಿಡಿಬಿ ತೀರ್ಮಾನ

ಕೇರಳದ ತಿರುವಾಂಕೂರು ದೇವಸ್ಥಾನ ಆಡಳಿತ ಮಂಡಳಿಯು (ಟಿಡಿಬಿ) ತನ್ನ ಸುಪರ್ದಿಯಲ್ಲಿರುವ ದೇವಾಲಯಗಳಲ್ಲಿ ಪೂಜೆಗೆ ಅರಳಿ ಹೂವು (ಒಲಿಯಾಂಡರ್‌-ಕಣಗಿಲು ಜಾತಿಗೆ ಸೇರಿದ…

31 mins ago

50 ಕೋ. ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ ಮಂತ್ರಿಮಾಲ್‌: ಬೀಗ ಜಡಿದ ಬಿಬಿಎಂಪಿ

ಸರಿ ಸುಮಾರು 50 ಕೋಟಿಗಿಂತ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಬೆಂಗಳೂರಿನ ಪ್ರತಿಷ್ಠಿತ ಮಾಲ್‌ಗೆ ಬಿಬಿಎಂಪಿ ಬೆಳ್ಳಂಬೆಳಗ್ಗೆಯೇ  ಬೀಗ…

36 mins ago

ಆಟವಾಡುತ್ತಿದ್ದ ಮಗುವಿಗೆ ಕಚ್ಚಿದ ಬೀದಿ ನಾಯಿ : ಮಹಾನಗರ ಪಾಲಿಕೆ ವಿರುದ್ಧ ಆಕ್ರೋಶ

ಆಟವಾಡುತ್ತಿದ್ದ ಮಕ್ಕಳ ಮೇಲೆ ಎರಗಿ ಬೀದಿ ನಾಯಿಗಳು ಕಚ್ಚಿದ ಘಟನೆ ಬೆಳಗಾವಿ ನ್ಯೂ ಗಾಂಧಿನಗರದಲ್ಲಿ ನಡೆದಿದೆ.

54 mins ago

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ನಾಲ್ಕನೇ ಆರೋಪಿ ಸುಳ್ಯದ ಮುಸ್ತಾಫ ಸೆರೆ

ದೇಶವನ್ನೇ ಬೆಚ್ಚಿಬೀಳಿಸಿದ ಬಿಜೆಪಿ ಕಾರ್ಯಕರ್ತನ ಕೊಲೆ ಪ್ರಕರಣದಲ್ಲಿ ಮತ್ತೊಂದು ಬೆಳವಣಿಗೆಯಾಗಿದೆ. ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರ್ ಹತ್ಯೆ…

56 mins ago

ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಎಲಿಜಬೆತ್ ದೀಪಿಕಾ ಸುಳ್ಯದಲ್ಲಿ ಪತ್ತೆ

ಕೆಲ ದಿನಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಎಲಿಜಬೆತ್ ದೀಪಿಕಾ ಪೊನ್ನುರಾಜು ಅವರನ್ನು ಪೊಲೀಸರು ಸುಳ್ಯದ ಅರಂತೋಡಿನಲ್ಲಿ ಪತ್ತೆ ಹಚ್ಚಿದ್ದಾರೆ

60 mins ago