ಚಾಮರಾಜನಗರ

ಬೊಮ್ಮಾಯಿ ನೇತೃತ್ವದಲ್ಲಿ ಮುಂದಿನ ಚುನಾವಣೆ : ಎಸ್. ಟಿ. ಸೂಮಶೇಖರ್

ಚಾಮರಾಜನಗರ: ಮುಖ್ಯಮಂತ್ರಿ  ಬೊಮ್ಮಾಯಿ ನೇತೃತ್ವದಲ್ಲಿ  ರಾಜ್ಯದಲ್ಲಿ  ಮುಂದಿನ ವಿಧಾನಸಭಾ ಚುನಾವಣೆ ಎನ್ನುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ  ಇದೀಗ ರಾಜ್ಯ ಬಿಜೆಪಿಯಲ್ಲಿ ಸಂಚಲನ ಮೂಡಿಸಿದೆ.

ಬೊಮ್ಮಾಯಿ ನೇತೃತ್ವಕ್ಕೆ ಕೆಲ ನಾಯಕರು ಆಕ್ಷೇಪ ವ್ಯಕ್ತಪಡಿಸುತ್ತಿದ್ದರೆ, ಇನ್ನೂ ಕೆಲವರು ಅಮಿತ್ ಶಾ ಹೇಳಿಕೆಗೆ ಸಹಮತ ವ್ಯಕ್ತಪಡಿಸುವ ಮೂಲಕ ಬೊಮ್ಮಾಯಿ ಪರ ಬ್ಯಾಟಿಂಗ್ ಮಾಡುತ್ತಿದ್ದಾರೆ.

ಇನ್ನು ಈ ಬಗ್ಗೆ ಸಚಿವ ಎಸ್​​​​​.ಟಿ ಸೋಮಶೇಖರ್ ಅವರು ಚಾಮರಾಜನಗರ ಇಂದು  ಪ್ರತಿಕ್ರಿಯಿಸಿದ್ದು,  ಸಿಎಂ ಬಸವರಾಜ್​​​ ಬೊಮ್ಮಾಯಿ ನೇತೃತ್ವದಲ್ಲೇ ಮುಂದಿನ ವಿಧಾನಸಭಾ ಚುನಾವಣೆ ಎದುರಿಸಲಿದ್ದೇವೆ ಎಂದು ​ಸ್ಪಷ್ಟಪಡಿಸಿದರು.

ಕೇಂದ್ರ ಗೃಹ ಸಚಿವ ಅಮಿತ್​​ ಶಾ ಅವರ ಮಾತೇ ಅಂತಿಮ. ಅಮಿತ್​​​​​​ ಶಾ ಅವರು ಹೇಳಿದಂತೆ 2023ರ ವಿಧಾನಸಭಾ ಚುನಾವಣೆ ಸಿಎಂ ಬಸವರಾಜ್​​ ಬೊಮ್ಮಾಯಿ ನಾಯಕತ್ವದಲ್ಲೇ ಎದುರಿಸುತ್ತೇವೆ ಎಂದರು.

ಸಿಎಂ ಬಸವರಾಜ್​ ಬೊಮ್ಮಾಯಿ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಚುನಾವಣೆ ನಡೆಸುತ್ತಾರೆ. ಇವರು ಬಹಳ ಬುದ್ಧಿವಂತರು ಮತ್ತು ಸಮರ್ಥರು. ಈಗಲೂ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡೇ ಸರ್ಕಾರ ನಡೆಸುತ್ತಿದ್ದಾರೆ ಎಂದು ಹೇಳಿದರು.

Raksha Deshpande

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

1 hour ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

1 hour ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

2 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

2 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

2 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

2 hours ago