ಮತ್ತೊಬ್ಬ ಸಚಿವ ರಾಜೀನಾಮೆ ಕೊಡಲಿದ್ದಾರೆ; ಧ್ರುವನಾರಾಯಣ ಭವಿಷ್ಯ

ಚಾಮರಾಜನಗರ : ಪಿಎಸ್ಐ ನೇಮಕಾತಿ ಹಗರಣದಲ್ಲಿ ಬಿಜೆಪಿಯ ಮತ್ತೊಂದು ವಿಕೆಟ್ ಪತನವಾಗಲಿದೆ. ನನ್ನ ಬಾಯಲ್ಲಿ ಅವರ ಹೆಸರು ಹೇಳಲ್ಲ, ಕಾಲವೇ ತಿಳಿಸಲಿದೆ. ಈ ಹಿಂದೆ ಬಿಜೆಪಿ ಅಧಿಕಾರದಲ್ಲಿದ್ದಾಗ ಐವರು ರಾಜೀನಾಮೆ ಕೊಟ್ಟಿದ್ದರು. ಈಗ ಮೂವರು ಕೊಟ್ಟಿದ್ದು, ಭ್ರಷ್ಟಾಚಾರದಿಂದ ಮತ್ತೊಬ್ಬರು ರಾಜೀನಾಮೆ ಕೊಡಲಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ ಭವಿಷ್ಯ ನುಡಿದಿದ್ದಾರೆ.

ಪಿಎಸ್ಐ ನೇಮಕಾತಿಯು ಒಂದು ಹಗರಣವಾಗಿದ್ದು, ಘಟನೆ ಗಮನಿಸುತ್ತಿದ್ದರೇ ಸರ್ಕಾರವೇ ಪಾಲ್ಗೊಂಡಂತಿದೆ. ರಾಜ್ಯ ಸರ್ಕಾರ ವ್ಯಾಪ್ತಿಯಲ್ಲಿರುವ ಸಿಐಡಿ ತನಿಖೆಯನ್ನು ಸಿಬಿಐಗೆ ಹಸ್ತಾಂತರಿಸಿದರೇ ನ್ಯಾಯ ಸಿಗುವ ನಿರೀಕ್ಷೆ ಇದೆ. ಸಿಐಡಿ ತನಿಖೆಯಲ್ಲಿ ನಂಬಿಕೆ ಇಲ್ಲ, ತಕ್ಷಣವೇ ಸಿಐಡಿಯಿಂದ ಸಿಬಿಐಗೆ ಪ್ರಕರಣವನ್ನು ಹಸ್ತಾಂತರಿಬೇಕು ಎಂದು ಆಗ್ರಹಿಸಿದರು.

ಬಿಜೆಪಿಗರ ಮಾತೇ ಬೇರೆ ಆಡಳಿತವೇ ಬೇರೆ, ಕೋಮು ಪ್ರಚೋದನೆ ಬಿಟ್ಟು ಇನ್ಯಾವ ತತ್ವವೂ ಅವರಲ್ಲಿಲ್ಲ. ಜನರು ಇವರ ಆಡಳಿತದಿಂದ ರೋಸಿಹೋಗಿ ಚುನಾವಣೆಗೆ ಬರುವುದನ್ನೇ ಕಾಯುತ್ತಿದ್ದಾರೆ. ಹಳೇ ಮೈಸೂರು ಭಾಗದಲ್ಲಿ ಇರುವ ಬಿಜೆಪಿ ಸ್ಥಾನಗಳನ್ನೇ ಕಳೆದುಕೊಳ್ಳಲಿದ್ದು, 2023ಕ್ಕೆ ಬಹುಮತ ಪಡೆದು ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ಹೊರಹಾಕಿದರು‌.

ಬಿಜೆಪಿಗೆ ಸೇರಿ ತಪ್ಪು ಮಾಡಿದೆ ಎಂದು ಎಂಟಿಬಿ ನಾಗರಾಜ್ ಬಹಿರಂಗವಾಗಿ ಹೇಳಿದ್ದಾರೆ. ಆದರೆ ನನ್ನ ಬಳಿ, ಕೆಲ ಖಾಸಗಿ ಕಾರ್ಯಕ್ರಮಗಳಲ್ಲಿ ಹಲವಾರು ಮಂದಿ ಬಿಜೆಪಿ ಸೇರಿ ತಪ್ಪು ಮಾಡಿದೆ ಎಂದು ಅಳಲು ತೋಡಿಕೊಂಡಿದ್ದಾರೆ. ಬಸವನ ಅನುಭವ ಮಂಟಪದಂತೆ ಇರುವ ಪಕ್ಷ ಅದು ಕಾಂಗ್ರೆಸ್ ಮಾತ್ರ, ಕಾಂಗ್ರೆಸ್ ನಲ್ಲಿರುವುದೇ ಸೌಭಾಗ್ಯ ಎಂದು ಪಕ್ಷ ಬಿಟ್ಟು ಹೋದವರಿಗೆ ಅರ್ಥವಾಗಿದೆ ಎಂದು ಹೇಳಿದರು.

Gayathri SG

Recent Posts

ಭಾರತದಲ್ಲಿ ಮೊದಲ ಬಾರಿಗೆ ಮತದಾನ ಮಾಡಿದ ಅಕ್ಷಯ್‌ ಕುಮಾರ್‌

ಲೋಕಸಭೆ ಚುನಾವಣೆಯ ಐದನೇ ಹಂತದ ಮತದಾನ ಪ್ರಕ್ರಿಯೆ ಈಗಾಗಲೇ ಶುರುವಾಗಿದೆ. ಆರು ರಾಜ್ಯಗಳು ಹಾಗೂ ಎರಡು ಕೇಂದ್ರಾಡಳಿತ ಪ್ರದೇಶಗಳ 49…

11 mins ago

ಕಾಶ್ಮೀರ ವಾಪಸ್ ಪಡೆದೇ ಪಡೆಯುತ್ತೇವೆ: ಗೃಹ ಸಚಿವ ಅಮಿತ್ ಶಾ

ಪಾಕಿಸ್ತಾನದ ಬಳಿ ಪರಮಾಣು ಬಾಂಬ್​ ಇದೆ ಹಾಗಾಗಿ ನಾವು ಅವರನ್ನು ಗೌರವಿಸಬೇಕಾಗುತ್ತದೆ ಎಂಬ ಕಾಂಗ್ರೆಸ್​ ನಾಯಕ ಮಣಿಶಂಕರ್​ ಐಯ್ಯರ್​ ಹೇಳಿಕೆಗೆ…

30 mins ago

ಖಾಸಗಿ ಶಾಲೆಗಳಲ್ಲಿ 30% ವರೆಗೆ ಶುಲ್ಕ ಏರಿಕೆ : ಕಂಗಾಲಾದ ಪೋಷಕರು

2024-25ನೇ ಸಾಲಿಗೆ ಶಾಲಾ ಪ್ರವೇಶ ಪ್ರಕ್ರಿಯೆ ನಡೆಸುತ್ತಿರುವ ಖಾಸಗಿ ಶಾಲೆಗಳು ಶೇ.20ರಿಂದ 30ರವರೆಗೆ ಶುಲ್ಕ ಹೆಚ್ಚಿಸುವ ಮೂಲಕ ಸುಲಿಗೆ ಪದ್ಧತಿ…

56 mins ago

ಯುವಕನೊಬ್ಬ ಎಂಟು ಬಾರಿ ಮತ ಚಲಾಯಿಸಿದ ವೀಡಿಯೊ ವೈರಲ್

ಯುವಕನೋರ್ವ ಬಿಜೆಪಿ ಅಭ್ಯರ್ಥಿಗೆ ಎಂಟು ಬಾರಿ ಮತಹಾಕಿರುವ ಘಟನೆ ಉತ್ತರ ಪ್ರದೇಶದ ಇಟಾ ಜಿಲ್ಲೆಯ ನಯಾ ಗಾಂವ್ ಪಟ್ಟಣದಲ್ಲಿ ನಡೆದಿದೆ.…

1 hour ago

ʻಮೋದಿಗೆ ಯಾರೂ ವೋಟ್ ಹಾಕಬೇಡಿ’ ಎಂದಿದ್ದ ಶಿಕ್ಷಕ ಅರೆಸ್ಟ್‌

ಯಾರು ಮೋದಿಗೆ ವೋಟ್​ ಹಾಕಬೇಡಿ ಎಂದು ಶಾಲಾ ಮಕ್ಕಳಿಗೆ ಹೇಳಿದ್ದ ಸರ್ಕಾರಿ ಶಾಲೆಯ ಶಿಕ್ಷಕನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಈ…

1 hour ago

ರೇವ್‌ ಪಾರ್ಟಿ ಮೇಲೆ ಪೊಲೀಸ್‌ ದಾಳಿ : ತೆಲುಗು ನಟಿ, ಮಾಡೆಲ್​ ಸಿಸಿಬಿ ವಶಕ್ಕೆ

ಸಿಸಿಬಿ ಪೊಲೀಸರು ರಾಜಧಾನಿಯಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿಯೊಂದರ ಮೇಲೆ ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ಆಂಧ್ರಪ್ರದೇಶದಿಂದ ತೆಲುಗು ನಟಿಯರನ್ನು ಕರೆಸಿಕೊಂಡು…

2 hours ago