News Karnataka Kannada
Friday, May 17 2024
ಚಾಮರಾಜನಗರ

ಮಲೆ ಮಹದೇಶ್ವರ ಬೆಟ್ಟದಲ್ಲಿನ ಕಾಮಗಾರಿಗಳ ಪರಿಶೀಲನೆ

Photo Credit : News Kannada

ಚಾಮರಾಜನಗರ: ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಕೆ.ಎಂ.ಗಾಯತ್ರಿ ಅವರು ಮಲೆ ಮಹದೇಶ್ವರ ಬೆಟ್ಟಕ್ಕೆ ಭೇಟಿ ನೀಡಿ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದರು.

ದೊಡ್ಡಕೆರೆ ಕಲ್ಯಾಣಿ ಒಳಚರಂಡಿ ಯೋಜನೆಯ ಸಂಸ್ಕರಣಾ ಘಟಕ, ಜಡೇಕಲ್ಲು ದೇಗುಲದ ಮುಂಭಾಗದ ಪಾರ್ಕಿಂಗ್ ಕಾಮಗಾರಿ ವೀಕ್ಷಿಸಿ ಅಗತ್ಯ ಸೂಚನೆ ನೀಡಿದರಲ್ಲದೆ, ಅಂತರ ಗಂಗೆಯ ಕಲ್ಯಾಣಿ, ಹೆಲಿಪ್ಯಾಡ್‍ನ ಸಿಸಿ ರಸ್ತೆ ಪರಿಶೀಲನೆ ಮಾಡಿದರು.

ದೀಪಗಿರಿ ಒಡ್ಡುವಿನಲ್ಲಿ ನಿರ್ಮಾಣವಾಗುತ್ತಿರುವ 108 ಅಡಿಯ ಮಹದೇಶ್ವರ ಪ್ರತಿಮೆ ಕಾಮಗಾರಿ ಸೇರಿದಂತೆ ಪ್ರಾಧಿಕಾರದಿಂದ ಕೈಗೊಳ್ಳಲಾಗಿರುವ ಇತರೆ ಅಭಿವೃದ್ಧಿ ಕೆಲಸ ಪರಿಶೀಲಿಸಿದ ಅವರು ನಿಗದಿತ ಅವಧಿಯೊಳಗೆ ಕಾಮಗಾರಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಮಹದೇಶ್ವರ ಬೆಟ್ಟವು ಪವಿತ್ರ ಸ್ಥಳವಾಗಿದ್ದು, ಪ್ರತಿದಿನ ಸಾವಿರಾರು ಭಕ್ತರು ಭೇಟಿ ನೀಡಲಿರುವುದರಿಂದ ಕಲ್ಯಾಣಿ ಅಂತರಗಂಗೆ ಮತ್ತು ದೇವಸ್ಥಾನದ ಸುತ್ತಮುತ್ತಲಿನ ಪ್ರದೇಶದಲ್ಲಿ ಸ್ವಚ್ಛತೆಯನ್ನು ಕಾಪಾಡುವಂತೆ ಭಕ್ತಾಧಿಗಳು ಹಾಗೂ ಸಾರ್ವಜನಿಕರಲ್ಲಿ ಹೆಚ್ಚಿನ ಅರಿವು ಮೂಡಿಸಬೇಕು. ಜೂನ್ 5 ವಿಶ್ವ ಪರಿಸರ ದಿನವಾಗಿರುವುದರಿಂದ ಅಂದು ಗ್ರಾಮ ಪಂಚಾಯಿತಿ ಮತ್ತು ಪ್ರಾಧಿಕಾರದ ವತಿಯಿಂದ ಗಿಡಗಳನ್ನು ನೆಡುವ ಮೂಲಕ ವಿಶ್ವ ಪರಿಸರ ದಿನವನ್ನು ಅರ್ಥ ಪೂರ್ಣವಾಗಿ ಆಚರಿಸುವಂತೆ ತಿಳಿಸಿದರು.

ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಕುಗ್ರಾಮಗಳ ಶಾಲೆಗಳ ವಿವರ, ಮಹಿಳಾ ಸ್ವ ಸಹಾಯ ಸಂಘಗಳ ಅಭಿವೃದ್ಧಿಗೆ ಕೈಗೊಳ್ಳಬೇಕಾಗಿರುವ ಕಾರ್ಯಸೂಚಿಗಳ ಪಟ್ಟಿ ತಯಾರಿಸುವಂತೆ ನಿರ್ದೇಶನ ನೀಡಿದರು.

ಮಹದೇಶ್ವರ ಬೆಟ್ಟದ ವ್ಯಾಪ್ತಿಯಲ್ಲಿ ಗಿರಿಜನರು ಹೆಚ್ಚಾಗಿ ವಾಸವಿದ್ದು, ಇವರಿಗೆ ಎನ್.ಆರ್.ಎಲ್.ಎಂ ಯೋಜನೆಯಡಿ ಮಹಿಳಾ ಸ್ವ ಸಹಾಯ ಸಂಘಗಳನ್ನು ರಚಿಸಿ ಯೋಜನೆಯಡಿ ದೊರೆಯುವ ಸೌಲಭ್ಯಗಳನ್ನು ಒದಗಿಸುವಂತೆ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಂತರ ಮಲೆ ಮಹದೇಶ್ವರ ಬೆಟ್ಟ ವ್ಯಾಪ್ತಿಯ ಆಣೆಹೊಲ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಹಾಗೂ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಮಕ್ಕಳ ಹಾಜರಾತಿ ಹಾಗೂ ಮೂಲಸೌಲಭ್ಯಗಳ ಬಗ್ಗೆ ಪರಿಶೀಲಿಸಿದರು.

ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಧರಣೇಶ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕಿರಣ್ ಹಾಗೂ ಮಲೈ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿ ಸಿಬ್ಬಂದಿ ಈ ಸಂದರ್ಭದಲ್ಲಿ ಹಾಜರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು