ಮಲೆ ಮಹದೇಶ್ವರ ಬೆಟ್ಟದಲ್ಲಿ ಸೇವೆಗಳು ಪುನರಾರಂಭ

ಚಾಮರಾಜನಗರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳವಾದ ಮಲೆ ಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಕೊರೊನಾ ಕಾರಣದಿಂದ  ಸ್ಥಗಿತಗೊಂಡಿದ್ದ ವಿವಿಧ ಉತ್ಸವ ಮತ್ತು ಸೇವೆಗಳು ಸೋಮವಾರದಿಂದ ಪುನರಾರಂಭಗೊಂಡಿದ್ದು, ಭಕ್ತರು ಆಗಮಿಸಿ ಮಲೆಮಹದೇಶ್ವರನ ದರ್ಶನ ಪಡೆದುಕೊಂಡರು.

ಕಳೆದ ಮೂರು ತಿಂಗಳ ಹಿಂದೆ ರಾಜ್ಯದಲ್ಲಿ ಕೋವಿಡ್ ಸಂಖ್ಯೆ ತಗ್ಗಿದ ಹಿನ್ನಲೆ ದೇವಸ್ಥಾನಗಳಲ್ಲಿ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ನೀಡಲಾಗಿತ್ತಲ್ಲದೇ ವಿವಿಧ ಉತ್ಸವಗಳನ್ನು ಸಹ ಪುನರಾರಂಭಿಸಲು ಅವಕಾಶ ಮಾಡಿಕೊಡಲಾಗಿತ್ತು. ಅದರಂತೆಯೇ ಮಾದಪ್ಪನ ಸನ್ನಿಧಿಯಲ್ಲೂ ಉತ್ಸವಗಳನ್ನು ನೆರವೇರಿಸಲಾಗುತ್ತಿತ್ತು. ಆದರೆ ಕಳೆದ ತಿಂಗಳು ಕೋವಿಡ್ ಸಂಖ್ಯೆ ಹೆಚ್ಚಾದ ಹಿನ್ನಲೆ ಕರ್ಫ್ಯೂವನ್ನು ಜಾರಿಗೊಳಿಸಲಾಗಿತ್ತಲ್ಲದೇ ಜಿಲ್ಲಾಡಳಿತದ ಸೂಚನೆ ಮೇರೆಗೆ ಶ್ರೀ ಮಲೆ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಆಡಳಿತ ದೇವಸ್ಥಾನದಲ್ಲಿ ವಿವಿಧ ಉತ್ಸವದ ಸೇವೆಗಳನ್ನು ರದ್ದುಗೊಳಿಸಿ ಆದೇಶ ನೀಡಲಾಗಿತ್ತು.

ಇದೀಗ ಸರ್ಕಾರ ಕೋವಿಡ್ ಗೆ ಸಂಬಂಧಿಸಿದಂತೆ ಎಲ್ಲ ನಿರ್ಬಂಧಗಳನ್ನು ವಾಪಸ್ ಪಡೆದಿರುವುದರಿಂದ ಸೋಮವಾರದಿಂದ ಮಾದಪ್ಪನ ಸನ್ನಿಧಿಯ ಹೊರಾಂಗಣದಲ್ಲಿ ಚಿನ್ನದ ತೇರಿನ ಉತ್ಸವ, ಹುಲಿವಾಹನ, ರುದ್ರಾಕ್ಷಿ ವಾಹನ ಹಾಗೂ ಬಸವ ವಾಹನ ಉತ್ಸವದ ಸೇವೆಗಳು ಪುನರಾರಂಭವಾದವು.

ಜತೆಗೆ ದೇವಸ್ಥಾನದ ಒಳಾಂಗಣದಲ್ಲಿ ಜರುಗುವ ಮಹಾರುದ್ರಾಭಿಷೇಕ, ಪಂಚ ಕಳಸ ಸಮೇತ ನವರತ್ನ ಕಿರೀಟಧಾರಣೆ, ಏಕದಶವಾರ ರುದ್ರಾಭಿಷೇಕ, ಏಕವಾರ ರುದ್ರಾಭಿಷೇಕ, ಶಿವ ಅಷ್ಠೋತ್ತರ ಬಿಲ್ವಾರ್ಚನೆ, ಶಿವ ಸಹಸ್ರ ಬಿಲ್ವಾರ್ಚನೆ, ಪಂಚಾಮೃತ ಅಭಿಷೇಕ ಸೇರಿದಂತೆ ಇನ್ನಿತರೆ ಸೇವಾ ಉತ್ಸವಾದಿಗಳು ಆರಂಭವಾಗಿವೆ. ಈ ಸೇವೆಗಳಿಗೆ ಪ್ರಾಧಿಕಾರದ ಆಡಳಿತ ಕೋವಿಡ್ ನಿಯಮವನ್ನು ಪಾಲಿಸುವುದರ ಮೂಲಕ ಎಲ್ಲ ಸೇವೆಗಳನ್ನು ಮಾಡಲು ಭಕ್ತರಿಗೆ ಅವಕಾಶ ಕಲ್ಪಿಸಿದೆ.

ಅಮಾವಾಸ್ಯೆಯ ಹಿನ್ನಲೆ ಮಾದಪ್ಪನ ಸನ್ನಿಧಿಯಲ್ಲಿ ಜರುಗುವ ಪೂಜಾ ಕೈಂಕರ್ಯದಲ್ಲಿ ಭಾಗಿಯಾಗುವ ದಿಸೆಯಲ್ಲಿ ಕಳೆದ 2 ದಿನಗಳಿಂದ ರಾಜ್ಯದ ವಿವಿಧೆಡೆಯಿಂದ ಸಾವಿರಾರು ಭಕ್ತರು ಕಾಲ್ನಡಿಗೆಯ ಮೂಲಕ ತೆರಳುತ್ತಿದ್ದು, ದೇವರ ದರ್ಶನ ಪಡೆಯುವುದರ ಮೂಲಕ ಮಹದೇಶ್ವರಬೆಟ್ಟದಲ್ಲಿ ಬೀಡು ಬಿಟ್ಟಿದ್ದರು. ಸೋಮವಾರದಿಂದ ಪುನರಾರಂಭವಾದ ಹುಲಿ, ಬಸವ ಹಾಗೂ ರುದ್ರಾಕ್ಷಿ ವಾಹನದ ಉತ್ಸವಗಳ ಸೇವೆಗಳಲ್ಲಿ ಭಾಗಿಯಾಗಿದ್ದರು. ಈ ವೇಳೆ ಹರಕೆ ಹೊತ್ತ ಭಕ್ತರು ದಂಡಿನ ಕೋಲನ್ನು ಹೊತ್ತು ದೇವಸ್ಥಾನದ ಸುತ್ತಲೂ ಪ್ರದಕ್ಷಿಣೆ ಹಾಕಿದರು. ಈ ವೇಳೆ ಉಘೇ ಮಾದಪ್ಪ ಉಘೇ, ಜೈ ಮಹತ್ ಮಲೆಯಾ ಎಂಬಿತ್ಯಾದಿ ಘೋಷಣೆಗಳನ್ನು ಮೊಳಗಿಸುವುದರ ಮೂಲಕ ಮಾದಪ್ಪನ ಕೃಪೆಗೆ ಪಾತ್ರರಾದರು.

Sneha Gowda

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

3 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

4 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

4 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

4 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

5 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

6 hours ago