ಮಹದೇಶ್ವರ ಬೆಟ್ಟ:ಯುಗಾದಿ ಜಾತ್ರಾ ಮಹೋತ್ಸವಕ್ಕೆ ಚಾಲನೆ

ಮಹದೇಶ್ವರ ಬೆಟ್ಟ : ಇಲ್ಲಿನ ಮಲೆ ಮಹದೇಶ್ವರ ಸ್ವಾಮಿ ದೇವಾಲಯದಲ್ಲಿ ಮಂಗಳವಾರ ಯುಗಾದಿ ಜಾತ್ರಾ ಮಹೋತ್ಸವಕ್ಕೆ ಚಾಲನೆ ಸಿಕ್ಕಿದೆ. ಮೊದಲ ದಿನ ಸಂಜೆಯ ವೇಳೆಗೆ ಭಾರಿ ಪ್ರಮಾಣದಲ್ಲಿ ಭಕ್ತರು ಕ್ಷೇತ್ರಕ್ಕೆ ಭೇಟಿ ನೀಡಿ ಮಹದೇಶ್ವರ ಸ್ವಾಮಿಯ ದರ್ಶನ ಪಡೆದರು.

ಜಿಲ್ಲೆ ಹಾಗೂ ಹೊರ ಜಿಲ್ಲೆಗಳಿಂದ ಭಕ್ತರು, ವಿಶೇಷವಾಗಿ ಕಾಲ್ನಡಿಗೆಯಲ್ಲಿ ಬಂದಿದ್ದ ಭಕ್ತರು ರುದ್ರಾಕ್ಷಿ ಮಂಟಪ, ಹುಲಿವಾಹನ, ಬಸವವಾಹನ ಸೇವೆ, ಉರುಳು ಸೇವೆಗಳನ್ನು ನೆರವೇರಿಸಿ ಹರಕೆ ಮತ್ತು ಕಾಣಿಕೆ ಸಲ್ಲಿಸಿ ಮಾದಪ್ಪನಿಗೆ ಹರಕೆ ಸಲ್ಲಿಸಿದರು.

ಏಪ್ರಿಲ್‌ 2ರವರೆಗೆ ನಡೆಯಲಿರುವ ಜಾತ್ರೆಯ ಮೊದಲ ದಿನ ಮಂಗಳವಾರ ಸ್ವಾಮಿಗೆ ಬೆಳಗಿನ ಜಾವ ನಾಲ್ಕು ಗಂಟೆಯ ಸಮಯದಲ್ಲಿ ಬಿಲ್ವಾರ್ಚನೆ, ಗಂಧದ ಅಭಿಷೇಕ, ರುದ್ರಾಭಿಷೇಕ, ಮಹಾಮಂಗಳಾರತಿ ಸೇವೆ ಹಾಗೂ ವಿಶೇಷ ಪೂಜೆಯನ್ನು ನೆರವೇರಿಸಿದ ಬಳಿಕ ದರ್ಶನಕ್ಕೆ ಅನುವು ಮಾಡಿಕೊಡಲಾಯಿತು.

ತಮಿಳುನಾಡಿನ ಭಕ್ತರು ಹೆಚ್ಚು: ಕರ್ನಾಟಕದ ನಾನಾ ಭಾಗಗಳಿಂದ ಭಕ್ತರು ಕಾಲ್ನಡಿಗೆಯಲ್ಲಿ ಬಂದು ದೇವಾಲಯವನ್ನು ತಲುಪಿದರೆ, ನೆರೆ ರಾಜ್ಯವಾದ ತಮಿಳುನಾಡಿನಿಂದ ಮೊದಲ ದಿನ ಸಾಕಷ್ಟು ಸಂಖ್ಯೆಯಲ್ಲಿ ಭಕ್ತರು ಬಂದಿದ್ದರು.

ಶಿವರಾತ್ರಿ ಜಾತ್ರೆಯ ಸಮಯದಲ್ಲಿ ಬೆಟ್ಟಕ್ಕೆ ಸಾವಿರಾರು ಭಕ್ತರು ಭೇಟಿ ನೀಡುತ್ತಾರೆ. ಯುಗಾದಿ ಜಾತ್ರೆ ಸಂದರ್ಭದಲ್ಲಿ ಅಷ್ಟೊಂದು ಪ್ರಮಾಣದಲ್ಲಿ ಬಾರದಿದ್ದರೂ, ಕಾಲ್ನಡಿಗೆಯಲ್ಲಿ ಬಂದು ಹರಕೆ ತೀರಿಸುವವರು ಇದ್ದಾರೆ.

Gayathri SG

Recent Posts

ವಾಸವಿ ಯುವಜನ ಸಂಘದ ವತಿಯಿಂದ ಪ್ರಸಾದ ವಿತರಣೆ

ವಾಸವಿ ಜಯಂತಿ ಪ್ರಯುಕ್ತ ನಗರದ ಕನ್ನಿಕಾ ಪರಮೇಶ್ವರಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಮಜ್ಜಿಗೆ, ಕೋಸಂಬರಿ ವಿತರಣೆ ಮಾಡಲಾಯಿತೆಂದು ವಾಸವಿ…

1 min ago

ನಟಿ ರಶ್ಮಿಕಾ ಟ್ವೀಟ್​ಗೆ ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್ ವಿವಾದಾದ್ಮಕ ಹೇಳಿಕೆ

ನಟಿ ರಶ್ಮಿಕಾ ಮಂದಣ್ಣ ಸೋಶಿಯಲ್ ಮೀಡಿಯಾದಲ್ಲಿ ತಮ್ಮದೇ ಅದ ದೊಡ್ಡ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ವಿವಿಧ ಭಾಷೆಗಳಲ್ಲಿ ನಟಿಸಿ ಸೈ…

8 mins ago

ಮೊಬೈಲ್ ವಿಚಾರಕ್ಕೆ ಹಲ್ಲೆ: ಆರೋಪಿಗಳು ವಶಕ್ಕೆ

ಮೊಬೈಲ್ ವಿಚಾರಕ್ಕೆ ಸ್ನೇಹಿತರ ನಡುವೆ ಗಲಾಟೆಯಾಗಿ ಮಚ್ಚಿನಿಂದ ಹಲ್ಲೆ ನಡೆಸಿರುವ ಘಟನೆ ಬಾಪೂಜಿನಗರದ ಮಧುರ ಬಾರ್ ಬಳಿ ನಡೆದಿದೆ.

13 mins ago

ಅಂಜಲಿ ಹತ್ಯೆ ಪ್ರಕರಣ: ನನ್ನ ಮಗನಿಗೆ ಕೋರ್ಟ್ ಯಾವ ಶಿಕ್ಷೆ ಬೇಕಾದರು ಕೊಡಲಿ ಎಂದ ಆರೋಪಿ ಗಿರೀಶ್ ತಾಯಿ

ನನ್ನ ಮಗ ಗಿರೀಶ್ ತಪ್ಪು ಮಾಡಿದ್ದಾನೆ. ಅವನಿಗೆ ಕೋರ್ಟ್ ಯಾವ ಶಿಕ್ಷೆ ಬೇಕಾದರು ಕೊಡಲಿ. ಅಂಜಲಿ ಮತ್ತು ಗಿರೀಶ್ ಪರಸ್ಪರ…

32 mins ago

ಸ್ವಾತಿ ಹಲ್ಲೆ ಪ್ರಕರಣ : ಹೊಸ CCTV ಫೂಟೇಜ್ ಬಿಡುಗಡೆ ಮಾಡಿದ ಎಎಪಿ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ ಬಿಭವ್ ಕುಮಾರ್ ಅವರು ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ನಡೆಸಿದ…

33 mins ago

ಮರಕ್ಕೆ ಕಾರು ಡಿಕ್ಕಿ: ನಾಲ್ವರು ಕಾನೂನು ವಿದ್ಯಾರ್ಥಿಗಳು ಮೃತ್ಯು

ಅತಿ ವೇಗವಾಗಿ ಬಂದ ಕಾರೊಂದು ಭಯಾನಕವಾಗಿ ಇನ್ನೊಂದು ಕಾರಿಗೆ ಡಿಕ್ಕಿಯಾಗಿ ಮತ್ತೆ ಮರಕ್ಕೆ ರಭಸದಿಂದ ಗುದ್ದಿದ್ದರಿಂದ ನಾಲ್ವರು ಕಾನೂನು ವಿದ್ಯಾರ್ಥಿಗಳು…

54 mins ago