ಮೇಲುಕೋಟೆಯಿಂದ ಬೋಗಾದಿಗೆ ಬಸ್ ವ್ಯವಸ್ಥೆ

ಪಾಂಡವಪುರ: ತಾಲೂಕಿನ ಮೇಲುಕೋಟೆಯಿಂದ ಬೋಗಾದಿಗೆ ಕೆಎಸ್‌ಆರ್‌ಟಿಸಿ ಬಸ್ ವ್ಯವಸ್ಥೆ ಕಲ್ಪಿಸುವಲ್ಲಿ ಬಿಜೆಪಿ  ಮುಖಂಡ, ಪರಿವರ್ತನ ಟ್ರಸ್ಟ್ ಅಧ್ಯಕ್ಷ ಡಾ.ಎನ್.ಎಸ್.ಇಂದ್ರೇಶ್ ಸಫಲರಾಗಿದ್ದಾರೆ.

ಮೇಲುಕೋಟೆಯಿಂದ ಗೌರಿಕಟ್ಟೆ ವೃತ್ತ, ಕನಗೋನಹಳ್ಳಿ, ತಾಳೆಕೆರೆ ಮಾರ್ಗವಾಗಿ ನಾಗಮಂಗಲ ತಾಲೂಕಿನ ಬೋಗಾದಿಗೆ  ಪ್ರತಿನಿತ್ಯ ನೂರಾರು ಸಂಖ್ಯೆಯಲ್ಲಿ ಪ್ರಯಾಣಿಕರು ಮತ್ತು ವಿದ್ಯಾರ್ಥಿಗಳು ಸಂಚರಿಸುತ್ತಿದ್ದು, ಬಸ್ ವ್ಯವಸ್ಥೆಯಿಲ್ಲದೇ ಖಾಸಗಿ ವಾಹನಗಳ ಮೇಲೆ ಅವಲಂಭಿತರಾಗಿದ್ದರು.

ಜತೆಗೆ ಮೇಲುಕೋಟೆ ಧಾರ್ಮಿಕ ಕ್ಷೇತ್ರವಾಗಿರುವ ಕಾರಣಕ್ಕೆ ಈ ಮಾರ್ಗದಿಂದ ಮೇಲುಕೋಟೆಗೆ ಆಗಮಿಸುವವರ ಸಂಖ್ಯೆಯೂ ಹೆಚ್ಚಾಗಿತ್ತು. ಈ ಹಿನ್ನೆಲೆಯಲ್ಲಿ ಬಸ್ ಇಲ್ಲದೇ ನಿತ್ಯ ಅನುಭವಿಸುತ್ತಿದ್ದ ತೊಂದರೆಯನ್ನು ಪ್ರಯಾಣಿಕರು ಸರ್ಕಾರದ ಗಮನಕ್ಕೆ ತಂದು ಕೆಎಸ್‌ಆರ್‌ಟಿಸಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ಬಿಜೆಪಿ ಮುಖಂಡರಾದ ಡಾ.ಎನ್.ಎಸ್.ಇಂದ್ರೇಶ್ ಅವರ ಬಳಿ ಮನವಿ ಮಾಡಿಕೊಂಡಿದ್ದರು.

ಸ್ಥಳೀಯರ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿದ ಬಿಜೆಪಿ ಮುಖಂಡ ಡಾ.ಎನ್.ಎಸ್.ಇಂದ್ರೇಶ್ ಅವರು ಬಸ್ ವ್ಯವಸ್ಥೆ  ಕಲ್ಪಿಸುವವರೆಗೆ ತಾವು ಮೇಲುಕೋಟೆಗೆ ಕಾಲಿಡುವುದಿಲ್ಲ ಎಂದು ಶಪಥ ಮಾಡಿದ್ದರು. ಕೊಟ್ಟ ಮಾತಿನಂತೆಯೇ ಕೆಎಸ್‌ಆರ್‌ಟಿಸಿ ನಿಗಮದ ಉಪಾಧ್ಯಕ್ಷ ಎಸ್.ಎನ್.ಈಶ್ವರಪ್ಪ ಅವರಿಗೆ ಸಮಸ್ಯೆಯನ್ನು ಮನವರಿಕೆ ಮಾಡಿಕೊಟ್ಟು ಮೇಲುಕೋಟೆ ಭಾಗದ ಗ್ರಾಮೀಣ ಜನರಿಗೆ ಕೆಎಸ್‌ಆರ್‌ಟಿಸಿ ಬಸ್ ವ್ಯವಸ್ಥೆ ಕಲ್ಪಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಹೀಗಾಗಿ ಈ ಮಾರ್ಗವಾಗಿ ಕಳೆದ ಮೂರು ದಿನಗಳಿಂದಲೂ ಪ್ರತಿನಿತ್ಯ ಐದು ಬಾರಿ ಕೆಎಸ್‌ಆರ್‌ಟಿಸಿ ಬಸ್ ಸಂಚರಿಸುತ್ತಿದೆ. ಇದರಿಂದ ಈ ಭಾಗದ ಪ್ರಯಾಣಿಕರು ಮತ್ತು ವಿದ್ಯಾರ್ಥಿಗಳು ಅತೀವ ಸಂತಸ ವ್ಯಕ್ತಪಡಿಸುವ ಜತೆಗೆ ಡಾ.ಎನ್.ಎಸ್.ಇಂದ್ರೇಶ್ ಅವರ ಸಾಮಾಜಿಕ ಕಾರ್ಯಕ್ಕೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

Sneha Gowda

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

6 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

6 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

7 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

7 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

8 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

9 hours ago