ಗುಂಡ್ಲುಪೇಟೆ (ಚಾಮರಾಜನಗರ) : ಯುಗಾದಿ ಹೋಳಿಯಾಟ ಆಡಿ ಬಣ್ಣ ತೊಳೆಯಲು ಯುವಕ ಈಜು ಬಾರದೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ತಾಲೂಕಿನ ಶಿವಪುರ ಗ್ರಾಮದ ಕಲ್ಕಟ್ಟೆ ಕೆರೆಯಲ್ಲಿ ನಡೆದಿದೆ. ತಾಲೂಕಿನ ಕೋಡಹಳ್ಳಿ ಗ್ರಾಮದ ವೈಶಾಲ್(17) ಮೃತ ಯುವಕ.
ಈತ ಯುಗಾದಿ ಬಣ್ಣದಾಟ ಆಡಿ ನಂತರ ಸ್ನೇಹಿತರೊಡನೆ ಕಲ್ಕಟ್ಟ ಕೆರೆಗೆ ಬಣ್ಣ ತೊಳೆಯಲು ಹೋಗಿದ್ದಾನೆ. ಆ ವೇಳೆ ಕೆರೆಯಲ್ಲಿ ಈಜಲು ಹೋಗಿ ಹೆಚ್ಚಿನ ಆಳದಲ್ಲಿ ಸಿಲುಕಿದ ಹಿನ್ನಲೆ ಹೊರಬರಲಾಗದೆ ನೀರಿನಲ್ಲಿ ಮುಳಿಗಿ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.
ಮಾಹಿತಿ ಅರಿತ ಅಗ್ನಿ ಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಸ್ಥಳೀಯ ಈಜುಗಾರರ ಸಹಾಯದಿಂದ ಮೃತ ದೇಹವನ್ನು ಹೊರಗೆ ತೆಗೆದಿದ್ದಾರೆ. ಈ ಕುರಿತು ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಜ್ಯಸಭಾ ಸದಸ್ಯೆ ಸ್ವಾತಿ ಮಾಲಿವಾಲ್ ಮೇಲಿನ ಹಲ್ಲೆ ಆರೋಪಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ…
ಇಲ್ಲಿನ ವೀರಾಪುರ ಓಣಿಯಲ್ಲಿ ಅಂಜಲಿ ಅಂಬಿಗೇರ ಹಂತಕ ಗಿರೀಶ ಉರುಫ್ ವಿಶ್ವ ಸಾವಂತ ವಿರುದ್ಧ ಬೆಂಡಿಗೇರಿ ಠಾಣೆಯಲ್ಲಿ ಮತ್ತೊಂದು ಪ್ರಕರನ…
ದೇಶದ್ಯಾಂತ ಕಾಂಗ್ರೆಸ್ ಪಕ್ಷದ ಪರವಾಗಿ ಪ್ರಚಾರ ನಡೆಸಬೇಕೆಂಬ ಉದ್ದೇಶದಿಂದ ನಾನು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿಲ್ಲ, ರಾಹುಲ್ ಗಾಂಧಿ…
ಪೊಲೀಸ್ ಕಸ್ಟಡಿಯಲ್ಲಿಯೇ ಗಂಡ ಹಾಗೂ ಹೆಂಡತಿ ಮೃತಪಟ್ಟಿರುವ ಘಟನೆ ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ನಡೆದಿದೆ.
ಇದು ತೆಲುಗು ಕಿರುತೆರೆ ನಟ ಚಂದು ಆತ್ಮಹತ್ಯೆಗೂ ಮುನ್ನ ಬರೆದ ಸಂದೇಶ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಚಂದುವಿನ ಕೊನೆಯ ಮೆಸೇಜ್…
ಕರ್ನಾಟಕದ ಹಲವೆಡೆ ಮೇ 19ರಿಂದ 21 ರವರೆಗೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.