ಚಾಮರಾಜನಗರ: ಜಮೀನಿನ ಖಾತೆ ಮಾಡಿಕೊಡಲು ರೈತರಿಂದ ತಹಸೀಲ್ದಾರ್ ಕಛೇರಿಯಲ್ಲಿ ಲಂಚ ಸ್ವೀಕಾರ ಮಾಡುವಾಗ ಗ್ರಾಮಲೆಕ್ಕಿರೊಬ್ಬರು ಎಸಿಬಿ ಬಲೆಗೆ ಬಿದ್ದಿರುವ ಘಟನೆ ಜಿಲ್ಲೆಯ ಹನೂರಿನಲ್ಲಿ ನಡೆದಿದೆ.
ಚಾಮರಾಜನಗರ ಜಿಲ್ಲೆಯ ಹನೂರು ಪಟ್ಟಣದಲ್ಲಿರುವ ತಹಸೀಲ್ದಾರ್ ಕಚೇರಿಯ ಗ್ರಾಮಲೆಕ್ಕಿಗ ದಿನೇಶ್ ಎಸಿಬಿ ಬಲೆಗೆ ಬಿದ್ದವರು. ಗ್ರಾಮಲೆಕ್ಕಿಗ ದಿನೇಶ್ ರಾಮಪುರ ಹೋಬಳಿಯ ಕುರಟ್ಟಿ ಹೊಸೂರು ವೃತ್ತದ ಗ್ರಾಮಲೆಕ್ಕಿಗರಾಗಿದ್ದು ಜಮೀನಿನ ಖಾತೆ ಬದಲಾವಣೆಗೆ ಸಂಬಂಧಿಸಿದಂತೆ ರೈತರೊಬ್ಬರಿಂದ 10 ಸಾವಿರ ರೂಪಾಯಿಗೆ ಬೇಡಿಕೆಯಿಟ್ಟಿದ್ದರು. ಈ ಬಗ್ಗೆ ರೈತರು ಎಸಿಬಿ ಅಧಿಕಾರಿಗಳಿಗೆ ಲಿಖಿತವಾಗಿ ದೂರು ದಾಖಲಿಸಿದ್ದರು. ದೂರಿನ ಮೇರೆಗೆ ಡಿವೈಎಸ್ಪಿ ಸದಾನಂದ ತಿಪ್ಪಣ್ಣವರ್, ಇನ್ಸ್ಪೆಕ್ಟರ್ ಹರೀಶ್ ಹಾಗೂ ಸಿಬ್ಬಂದಿ ನಾಗಲಕ್ಷ್ಮಿ ಮಹದೇವಸ್ವಾಮಿ ಕೃಷ್ಣಕುಮಾರ್ ದಾಳಿ ನಡೆಸಿ ಗ್ರಾಮ ಲೆಕ್ಕಿಗ ದಿನೇಶ್ ನನ್ನು ವಶಕ್ಕೆ ಪಡೆದಿದ್ದಾರೆ.
ಈ ಬಗ್ಗೆ ಡಿವೈಎಸ್ಪಿ ಸದಾನಂದ ತಿಪ್ಪಣ್ಣವರ್ ಮಾತನಾಡಿ ಯಾವುದೇ ಕಾರಣಕ್ಕೂ ದೂರುದಾರರ ಹೆಸರನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ. ವಶಕ್ಕೆ ಪಡೆದಿರುವ ಗ್ರಾಮಲೆಕ್ಕಾಧಿಕಾರಿಯನ್ನು ಎಲ್ಲ ಪ್ರಕ್ರಿಯೆಗಳನ್ನು ಮುಗಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದಾಗಿ ಹೇಳಿದ್ದಾರೆ.
ಅಂಜಲಿ ಅಂಬಿಗೇರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ ಅಮಾನತು…
ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್ ಕೊಲೆ ಆರೋಪಿಗೆ ಎನ್ಕೌಂಟರ್ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.
ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…
ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…
ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…
ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…