ವರದಕ್ಷಿಣೆ ಕಿರುಕುಳದಿಂದ ಉಡಿಗಾಲದ ಮಹಿಳೆ ಸಾವು

ಚಾಮರಾಜನಗರ : ವರದಕ್ಷಿಣೆ ಕಿರುಕುಳದಿಂದಾಗಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಉಡಿಗಾಲದಲ್ಲಿ ಸೋಮವಾರ ನಡೆದಿದೆ. ಉಡಿಗಾಲದ ಜಯಶಂಕರ್‌ ಎಂಬುವವರ ಪತ್ನಿ 24 ವರ್ಷದ ದಿವ್ಯಾ ಅವರು ಮೃತಪಟ್ಟವರು.ಪೊಲೀಸರು ಐವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದು, ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬುದು ತನಿಖೆಯಿಂದ ಗೊತ್ತಾಗಬೇಕಿದೆ.

ಮಗಳನ್ನು ವರದಕ್ಷಿಣೆಗಾಗಿ ಹಿಂಸಿಸಿ, ಹಲ್ಲೆ ಮಾಡಿ ಕೊಲೆ ಮಾಡಲಾಗಿದೆ ಎಂದು ದಿವ್ಯ ಅವರ ತಂದೆ ದೇವಪ್ಪ ಅವರು ಚಾಮರಾಜನಗರದ ಗ್ರಾಮಾಂತರ ಠಾಣೆಯಲ್ಲಿ ದೂರು ನೀಡಿದ್ದಾರೆ.

ದಿವ್ಯ ಅವರ ಪತಿ ಜಯಶಂಕರ್‌, ಮಾವ ಸಿದ್ದಮಲ್ಲಪ್ಪ, ಅತ್ತೆ ಸುಂದ್ರಮ್ಮ, ಬಾವ ಚಂದ್ರಶೇಖರ್‌ ಹಾಗೂ ಅವರ ಪತ್ನಿ ರೇಖಾ ಅವರು ತಲೆಮರೆಸಿಕೊಂಡಿದ್ದಾರೆ.

ಡಿವೈಎಸ್‌ಪಿ ಪ್ರಿಯದರ್ಶಿನಿ ಸಾಣೆಕೊಪ್ಪ, ಇನ್‌ಸ್ಪೆಕ್ಟರ್‌ ಪುಟ್ಟಸ್ವಾಮಿ, ಸಬ್‌ ಇನ್‌ಸ್ಪೆಕ್ಟರ್‌ ಹನುಮಂತ ಉ‍ಪ್ಪಾರ್‌ ಸೇರಿದಂತೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Swathi MG

Recent Posts

ಮದುವೆಯಾದ ನಾಲ್ಕೇ ವರ್ಷಕ್ಕೆ ವಿಚ್ಛೇದನ ಪಡೆದುಕೊಂಡ ಯಶ್‌ ಹೀರೋಯಿನ್‌!

ಸಿನಿಮಾ ರಂಗದಲ್ಲಿ ಮತ್ತೊಂದು ವಿಚ್ಛೇದನ ಖಚಿತವಾಗಿದೆ. ಸೋಶಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಹಂಚಿಕೊಳ್ಳುವ ಮೂಲಕ ಈ ಸುದ್ದಿಯನ್ನು ಖಚಿತಪಡಿಸಿದ್ದಾರೆ.

3 hours ago

ಐದು ಮಂದಿಗೆ ವೆಸ್ಟ್ ನೈಲ್ ಜ್ವರ ಪತ್ತೆ; ಅಲರ್ಟ್ ಆದ ಸರಕಾರ

ವೆಸ್ಟ್ ನೈಲ್ ಫೀವರ್ ನ ಐದು ಪ್ರಕರಣಗಳು ಕೇರಳದ ಕೋಯಿಕ್ಕೋಡ್ ಜಿಲ್ಲೆಯಲ್ಲಿ ಪತ್ತೆಯಾಗಿದ್ದು, ಇದೀಗ ಆತಂಕಕ್ಕೆ ಕಾರಣವಾಗಿದೆ.

3 hours ago

ಆಂಬುಲೆನ್ಸ್ ನೌಕರರ ಮುಷ್ಕರ ತಾತ್ಕಾಲಿಕ ಮುಂದೂಡಿಕೆ

ಬಾಕಿ ಉಳಿಸಿಕೊಂಡಿರುವ ವೇತನ ಪಾವತಿಗೆ ಆಗ್ರಹಿಸಿ 108-ಆರೋಗ್ಯ ಕವಚ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ನಡೆಸಲು ಉದ್ದೇಶಿಸಿದ್ದ ಮುಷ್ಕರವನ್ನು ತಾತ್ಕಾಲಿಕವಾಗಿ ಮುಂದೂಡಿದ್ದಾರೆ.

4 hours ago

ಬೆಂಗಳೂರಿನಲ್ಲಿ ರೌಡಿಶೀಟರ್​ ಕಾರ್ತಿಕೇಯನ್ ಬರ್ಬರ ಹತ್ಯೆ

ನಗರದ ಬಾಣಸವಾಡಿ ವ್ಯಾಪ್ತಿಯ ರಾಮಸ್ವಾಮಿ ಪಾಳ್ಯದಲ್ಲಿ ರೌಡಿಶೀಟರ್​ ಕಾರ್ತಿಕೇಯನ್(40) ಎಂಬಾತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಹತ್ಯೆ ಮಾಡಲಾಗಿದೆ.

4 hours ago

ಪಕ್ಷದ ಬ್ಯಾಡ್ಜ್ ಧರಿಸಿ ಮತದಾನ; ಖೂಬಾ ವಿರುದ್ಧ ಪ್ರಕರಣ ದಾಖಲು

ಬೀದರ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಕೇಂದ್ರ ಸಚಿವ ಭಗವಂತ ಖೂಬಾ ಅವರು ತಮ್ಮ ಅಂಗಿ ಮೇಲೆ ಪಕ್ಷದ ಚಿಹ್ನೆ…

4 hours ago

ಬೀದರ್ ಲೋಕಸಭಾ ಕ್ಷೇತ್ರದಲ್ಲಿ ಶಾಂತಿಯುತ ಮತದಾನ

ಬೀದರ್ ಲೋಕಸಭಾ ಕ್ಷೇತ್ರದ ಒಟ್ಟು ಎಂಟು ವಿಧಾನ ಸಭಾ ಕ್ಷೇತ್ರಗಳಲ್ಲಿ ಮೇ 7 ರಂದು ಶಾಂತಿಯುತವಾಗಿ ಮತದಾನ ನಡೆಯಿತು.

5 hours ago