ಹನೂರು (ಚಾಮರಾಜನಗರ) : ತಾಲ್ಲೂಕಿನ ವಡಕೆಹಳ್ಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಹಲ್ಲಿ ಬಿದ್ದಿದ್ದ ಬಿಸಿಯೂಟ ಸೇವಿಸಿದ 70 ಮಕ್ಕಳನ್ನು ಕೌದಳ್ಳಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಶಾಲೆಯಲ್ಲಿ 170 ಮಕ್ಕಳಿದ್ದಾರೆ. ಸೋಮವಾರ 90 ಮಂದಿ ಹಾಜರಾಗಿದ್ದಾರೆ. ಈ ಪೈಕಿ 70 ಮಕ್ಕಳು ಬಿಸಿಯೂಟ ಸೇವಿಸಿದ್ದಾರೆ.
ಮಧ್ಯಾಹ್ನದ ಬಿಸಿಯೂಟಕ್ಕೆ ಸಿದ್ಧಪಡಿಸಿದ್ದ ಸಾಂಬಾರಿಗೆ ಹಲ್ಲಿ ಬಿದ್ದಿತ್ತು. ಇದು ಅರಿವಿಗೆ ಬಂದಾಗ, ಮಕ್ಕಳಿಗೆ ಊಟ ಮಾಡಿಯಾಗಿತ್ತು. ಕೆಲವು ಮಕ್ಕಳಲ್ಲಿ ವಾಂತಿ ಕಾಣಿಸಿಕೊಂಡಿದೆ. ತಕ್ಷಣವೇ ಶಿಕ್ಷಕರು ಮಕ್ಕಳನ್ನು ಕೌದಳ್ಳಿಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದರು.
‘ಬಿಸಿಯೂಟದಲ್ಲಿ ಹಲ್ಲಿ ಬಿದ್ದಿರುವ ವಿಷಯ ತಿಳಿಯುತ್ತಿದ್ದಂತೆ ಎಲ್ಲಾ ಮಕ್ಕಳನ್ನು ಕೌದಳ್ಳಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಮಕ್ಕಳಿಗೆ ಏನೂ ಆಗಿಲ್ಲ. ಮುಂಜಾಗ್ರತಾ ಕ್ರಮವಾಗಿ ಚಿಕಿತ್ಸೆ ನೀಡಲಾಗುತ್ತಿದೆ’ ಎಂದು ಶಾಲೆಯ ಮುಖ್ಯ ಶಿಕ್ಷಕ ಕೊಳಂದೈರಾಜ್ ಅವರು ತಿಳಿಸಿದರು.
ಅಂಜಲಿ ಅಂಬಿಗೇರ ಹತ್ಯೆ ಪ್ರಕರಣ ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿದೆ. ಈ ಮಧ್ಯೆ ಸಹೋದರಿಯ ಹತ್ಯೆಯಿಂದ ಮಾನಸಿಕವಾಗಿ ಕುಗ್ಗಿ ಹೋಗಿರುವ ಯಶೋದಾ…
ಜಮ್ಮು-ಕಾಶ್ಮೀರದಲ್ಲಿ ಇನ್ನು ಎರಡು ದಿನಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದ್ದು, ಅದಕ್ಕೂ ಮುನ್ನ ನಿನ್ನೆ ಶನಿವಾರ ತಡರಾತ್ರಿ ಜಮ್ಮು ಮತ್ತು ಕಾಶ್ಮೀರದ…
ಬೆಂಗಳೂರಿನಿಂದ ಕೊಚ್ಚಿಗೆ ಪ್ರಯಾಣಿಸುತ್ತಿದ್ದ ಏರ್ ಇಂಡಿಯಾ ಎಕ್ಸಪ್ರೆಸ್ ವಿಮಾನವು ಶನಿವಾರ ತಡರಾತ್ರಿ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್ ಮಾಡಿದೆ.…
ಸಿಂಗಾಪುರದಲ್ಲಿ ಕೊರೊನಾ ಸೋಂಕಿನ ಹೊಸ ಅಲೆ ಭೀತಿ ಎದುರಾಗಿದ್ದು, ದಿನದಿಂದ ದಿನಕ್ಕೆ ಕೊರೊನಾ ಸೋಂಕಿತ ಸಂಖ್ಯೆಯಲ್ಲಿ ಏರಿಕೆಯಾಗಿದೆ. ಜನರಿಗೆ ಮಾಸ್ಕ್…
ಮಗನ ಹೆಸರಲ್ಲಿ ಹೇಳಿಕೊಂಡಿದ್ದ ಹರಕೆ ತೀರಿಸಲು ಶಬರಿಮಲೆಗೆ ತೆರಳಿದ್ದ ಸುರತ್ಕಲ್ ಕಾಟಿಪಳ್ಳ ನಿವಾಸಿ ಸಂದೀಪ್ ಶೆಟ್ಟಿ (37) ಅವರು ಹೃದಯಾಘಾತದಿಂದ…
ಬಿಸಿಲಿನ ಬೇಗೆಯಿಂದ ತತ್ತರಿಸುತ್ತಿರುವ ಜನರಿಗೆ ತಂಪೆರೆಯುವ ಸಲುವಾಗಿ ಕಳೆದ ಒಂದು ವಾರಗಳಿಂದ ಮಳೆಯು ಧಾರಾಕಾರವಾಗಿ ಸುರಿಯುತ್ತಿದೆ ಇಂತಹ ಸಂದರ್ಭದಲ್ಲಿ ರಾಜ್ಯದ…