News Karnataka Kannada
Sunday, May 05 2024
ಚಾಮರಾಜನಗರ

ಸಂತೆಗೆ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯ ಮೇಲೆ ಕಾಡಾನೆ ದಾಳಿ

Crime.
Photo Credit :

ಚಾಮರಾಜನಗರ: ತಾಲ್ಲೂಕಿನ ಚಂಗಡಿಯಿಂದ ಕೌದಳ್ಳಿ ಗ್ರಾಮಕ್ಕೆ ತೆರಳುತ್ತಿದ್ದ ಮುನಿವೆಂಕಟೇಗೌಡ ಎಂಬುವವರ ಮೇಲೆ ಶುಕ್ರವಾರ ಬೆಳಿಗ್ಗೆ ಕಾಡಾನೆಯೊಂದು ದಾಳಿ‌ ನಡೆಸಿ ಗಾಯಗೊಳಿಸಿದೆ.ಮುನಿವೆಂಕಟೇಗೌಡ ಅವರು ಮಲೆ ಮಹದೇಶ್ವರ ವನ್ಯಧಾಮದ ವ್ಯಾಪ್ತಿಯಲ್ಲಿರುವ ಚಂಗಡಿ ಗ್ರಾಮದಿಂದ ಕೌದಳ್ಳಿಯಲ್ಲಿ ನಡೆಯುವ ಸಂತೆಗೆ ನಡೆದುಕೊಂಡು ಹೋಗುತ್ತಿದ್ದರು.

ಕಾಡಿನ ದಾರಿ ಮಧ್ಯೆ, ಒಂಟಿ ಆನೆಯೊಂದು ದಾಳಿ ಮಾಡಿದೆ. ಮುನಿವೆಂಕಟೇಗೌಡ ಅವರ ಬಲಕಾಲು ಮುರಿದಿದೆ. ಸೊಂಟದ ಭಾಗಕ್ಕೂ ಗಾಯವಾಗಿದೆ.ಅವರನ್ನು ಚಿಕಿತ್ಸೆಗಾಗಿ ಕೊಳ್ಳೇಗಾಲ ಸರ್ಕಾರಿ ಉಪ ವಿಭಾಗ ಆಸ್ಪತ್ರೆಗೆ ದಾಖಲಿಸಲಾಗಿದೆ.

ಚಿಕಿತ್ಸೆಗಾಗಿ ಅವರನ್ನು ಕೊಳ್ಳೇಗಾಲದ ಆಸ್ಪತ್ರೆಗೆ ದಾಖಲಿಸಲಾಗಿದೆ.ಕಾಡಿನ ಮಧ್ಯೆ ಇರುವ ಈ ಗ್ರಾಮದಲ್ಲಿ ಮೂಲಸೌಕರ್ಯದ ಕೊರತೆ ಒಂದೆಡೆಯಾದರೆ ವನ್ಯಪ್ರಾಣಿಗಳ ಹಾವಳಿ ಇಲ್ಲಿನ ಗ್ರಾಮಸ್ಥರನ್ನು ಹೈರಾಣಾಗಿಸಿದೆ. ಇದರಿಂದ ಬೇಸತ್ತಿರುವ ಗ್ರಾಮಸ್ಥರು ಅರಣ್ಯದಿಂದ ಹೊರಗೆ ಬರುವುದಾಗಿ ಒಪ್ಪಿಕೊಂಡಿದ್ದಾರೆ. ಇದಕ್ಕೆ ಸಮ್ಮತಿಸಿರುವ ಅರಣ್ಯ ಇಲಾಖೆ ಪುನರ್ವಸತಿ ಕಲ್ಪಿಸಲು ಸರ್ಕಾರಕ್ಕೆ ವರದಿ ಸಲ್ಲಿಸಿದೆ.

ಆದರೆ, ವರದಿ ಸಲ್ಲಿಸಿ ಆರು ತಿಂಗಳಾದರೂ ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು