News Karnataka Kannada
Monday, April 29 2024
ಚಾಮರಾಜನಗರ

ಸಂಭ್ರಮದಿಂದ ಜರುಗಿದ ಗೋಪಾಲಸ್ವಾಮಿ ಬ್ರಹ್ಮರಥೋತ್ಸವ

Gopal
Photo Credit :

ಚಾಮರಾಜನಗರ: ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿರುವ ಪುರಾಣ ಪ್ರಸಿದ್ಧ ಶ್ರೀ ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಸೋಮವಾರ ಬ್ರಹ್ಮ ರಥೋತ್ಸವ ಸಡಗರ ಸಂಭ್ರಮದಿಂದ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಜರುಗಿತು.

ಸ್ಥಳೀಯರು ಸೇರಿದಂತೆ ದೂರದಿಂದ ಆಗಮಿಸಿದ ಭಕ್ತರು ಗೋಪಾಲಸ್ವಾಮಿಯ ಭವ್ಯ ರಥೋತ್ಸವದಲ್ಲಿ ಪಾಲ್ಗೊಂಡು ರಥವನ್ನು ಎಳೆದು ಹಣ್ಣು ಜವನ ಎಸೆದು ಕೃತಾರ್ಥರಾದರು. ಕಳೆದು ಎರಡು ವರ್ಷಗಳಿಂದ ಕೋವಿಡ್ ಸೋಂಕಿನ ಭೀತಿಯ ಹಿನ್ನಲೆಯಲ್ಲಿ ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಬ್ರಹ್ಮ ರಥೋತ್ಸವ ನಡೆದಿರಲಿಲ್ಲ. ಈ ವರ್ಷ ಕೋವಿಡ್ ಸೋಂಕು ನಿಯಂತ್ರಣವಾಗಿರುವ ಹಿನ್ನಲೆಯಲ್ಲಿ ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಬ್ರಹ್ಮ ರಥೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು.

ನಿಗದಿತ ಸಮಯದಲ್ಲಿ ಭವ್ಯ ರಥದಲ್ಲಿ ಗೋಪಾಲಸ್ವಾಮಿಯ ಉತ್ಸವ ಮೂರ್ತಿಯನ್ನು ಪ್ರತಿಷ್ಠಾಪಿಸಿ ವಿಧಿವಿಧಾನಗಳು ನಡೆದ ನಂತರ ನೆರೆದ ಭಕ್ತರು ಗೋವಿಂದ, ಗೋವಿಂದ ಎಂದು ಘೋಷಣೆ ಕೂಗುತ್ತಾ ರಥವನ್ನು ಎಳೆದರು.

ಬ್ರಹ್ಮ ರಥೋತ್ಸವದ ಹಿನ್ನಲೆಯಲ್ಲಿ ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಪೊಲೀಸ್ ಬಿಗಿ ಬಂದೋ ಬಸ್ತ್ ಮಾಡಲಾಗಿತ್ತು. ಅರಣ್ಯ ಇಲಾಖೆಯ ಸಿಬ್ಬಂದಿ, ಪೊಲೀಸ್ ಸಿಬ್ಬಂದಿ, ಕರ್ತವ್ಯ ನಿರ್ವಹಿಸುವುದರ ಮೂಲಕ ರಥೋತ್ಸವ ಸುಗಮವಾಗಿ ನಡೆಯಲು ಸಹಕರಿಸಿದರು. ಕೆ.ಎಸ್.ಆರ್.ಟಿ.ಸಿ ಯು ಭಕ್ತರ ಅನುಕೂಲಕ್ಕಾಗಿ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಬಸ್ ಸೌಲಭ್ಯ ಕಲ್ಪಿಸಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು