ಸರಗೂರಲ್ಲಿ ವಿಜೃಂಬಣೆಯ ಲಕ್ಷ್ಮಿನರಸಿಂಹಸ್ವಾಮಿ ರಥೋತ್ಸವ

ಸರಗೂರು: ಪಟ್ಟಣದಲ್ಲಿ ವಿಜೃಂಬಣೆಯ ಲಕ್ಷ್ಮಿನರಸಿಂಹಸ್ವಾಮಿ ರಥೋತ್ಸವ ನಡೆಯಿತು. ಈ ವೇಳೆ ಭಕ್ತರು ರಥ ಎಳೆದು       ಭಕ್ತಿ ಸಮರ್ಪಿಸಿದರು.

ಪಟ್ಟಣದ 7ನೇ ವಾರ್ಡ್  ನಲ್ಲಿ ಸ್ಥಾಪಿತವಾಗಿರುವ ಪ್ರಸಿದ್ದ ಲಕ್ಷ್ಮಿನರಸಿಂಹ ದೇವಾಲಯದಲ್ಲಿ ರಥೋತ್ಸವದ ಅಂಗವಾಗಿ ತಳಿತೋರಣ ರಂಗೋಲಿ ಬಿಡಿಸಿ ಬಣ್ಣ ಬಣ್ಣದ ದೀಪಗಳಿಂದ ಅಲಂಕರಿಸಿ ದೇವರ ಉತ್ಸವಮೂರ್ತಿಯನ್ನು ನದಿ ಬಳಿ ಕೊಂಡೊಯ್ದು ಅಮ್ಮನವರ ಮೂರ್ತಿಗೆ ಗಂಗೆ ಪೂಜೆ ಸಲ್ಲಿಸಿ, ವಿವಿಧ ಹೋಮ-ಹವನ ನಡೆಸಿದ ಬಳಿಕ ವಿಶೇಷ ಪೂಜೆ ಸಲ್ಲಿಸಲಾಯಿತು.

ಮಂಗಳವಾದ್ಯದೊಂದಿಗೆ ಮೆರವಣಿಗೆ ಮೂಲಕ ಉತ್ಸವ ಮೂರ್ತಿಯನ್ನು  ತರಲಾಯಿತು. ನಂತರ ವಿವಿದ ಹೂವಿನಿಂದ  ಅಲಂಕೃತ ಗೊಂಡ ರಥದಲ್ಲಿ ವಿಗ್ರಹವನ್ನು ಪ್ರತಿಷ್ಠಾಪಿಸಲಾಯಿತು ಆ ನಂತರ ಪಟ್ಟಣದಲ್ಲಿ ಪ್ರಮುಖ ಬೀದಿಗಳಲ್ಲಿ ರಥವನ್ನು ಎಳೆಯುವ ಮೂಲಕ ಮೆರವಣಿಗೆ ನಡೆಸಲಾಯಿತು.

ಈ ವೇಳೆ ನೆರೆದಿದ್ದ ಭಕ್ತರು ತೆಂಗಿನಕಾಯಿ ಒಡೆದು ಹರಕೆ ತಿರಿಸಿದರು, ದೇವಾಲಯಕ್ಕೆ ರಥ ಹಿಂತಿರುಗಿದ ಬಳಿಕ ನೆರೆದ ಭಕ್ತರಿಗೆ ಪ್ರಸಾದ ವಿನಿಯೋಗ ಮಾಡಲಾಯಿತು. ದೇವಸ್ಥಾನದ ಪ್ರಧಾನ ಆರ್ಚಕರಾದ ಕಸ್ತೂರಿ, ಪಟ್ಟಣ ಪಂಚಾಯಿತಿ ಸದಸ್ಯ ವೀರೇಶ್, ಆರ್ಯಈಡಿಗ ಸಮಾಜದ ಬಂದುಗಳು ಸಾರ್ವಜನಿಕರು ಭಾಗಿಯಾಗಿದ್ದರು.

Sneha Gowda

Recent Posts

ತಮಿಳು ನಟ ಸಿಂಭು ಅವರನ್ನು ಚಿತ್ರರಂಗದಿಂದ ನಿಷೇಧಿಸುವಂತೆ ನಿರ್ದೇಶಕ ಒತ್ತಾಯ

ತಮಿಳು ಚಿತ್ರರಂಗದ ಜನಪ್ರಿಯ ನಟ ಸಿಂಭು ಅವರ ವಿರುದ್ಧ ಇದೀಗ ನಿರ್ದೇಶಕ ದೂರು ನೀಡಿದ್ದು ತಮಿಳು ಚಿತ್ರರಂಗದಿಂದ ಹೊರಗಟ್ಟಬೇಕು ಎಂದು…

8 mins ago

ಆಫೀಸ್‌ನಲ್ಲಿ ಒತ್ತಡಕ್ಕೆ ಒಳಗಾಗ್ತಿದ್ದೀರಾ : ಹಾಗಾದ್ರೆ ಇಲ್ಲಿದೆ ಟಿಪ್ಸ್‌

ಹಲವಾರು ಕಾರಣಗಳಿಗಾಗಿ ಕೆಲಸದ ಸ್ಥಳದಲ್ಲಿ ಅತಿಯಾದ ಒತ್ತಡವುಂಟಾಗುತ್ತದೆ. ಇದರಿಂದ ಆಯಾಸ ಹಾಗೂ ವಿಶ್ರಾಂತಿಯ ಕೊರತೆ ತಲೆದೋರುತ್ತದೆ. ಇದರಿಂದ ವ್ಯಕ್ತಿ ಸಿಕ್ಕಾಪಟ್ಟೆ…

32 mins ago

ಇಂದು 8 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್, 23 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ರಾಜ್ಯದ ಕೆಲವಡೆ ಬಾರಿ ಮಳೆಯಾಗುವ ಸಾಧ್ಯತೆ ಇರುವ ಕಾರಣ ಹವಮಾನ ಇಲಾಖೆ 8 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್, 23 ಜಿಲ್ಲೆಗಳಿಗೆ…

56 mins ago

ಇಂದು ತಾಯಂದಿರ ದಿನ : ಈ ದಿನದ ಮಹತ್ವ ,ಹಿನ್ನೆಲೆ ಏನು?

ತಾಯಂದಿರ ದಿನ , ತಾಯಂದಿರ ಗೌರವಾರ್ಥ ರಜಾದಿನವನ್ನು ವಿಶ್ವದಾದ್ಯಂತ ದೇಶಗಳಲ್ಲಿ ಆಚರಿಸಲಾಗುತ್ತದೆ. ಅದರ ಆಧುನಿಕ ರೂಪದಲ್ಲಿ ರಜಾದಿನವು ಹುಟ್ಟಿಕೊಂಡಿತುಯುನೈಟೆಡ್ ಸ್ಟೇಟ್ಸ್…

1 hour ago

ಇಂದಿನ ರಾಶಿ ಫಲ : ಯಾರಿಗೆ ಶುಭ, ಯಾರಿಗೆ ಅಶುಭ

ವಾರದ ಆರಂಭದಲ್ಲೇ ಶುಭ ಸುದ್ದಿ. ಮನೆಯಲ್ಲಿ ಕಾರ್ಯಕ್ರಮಗಳು ನಡೆಯಲಿದೆ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಲಿದ್ದು, ವಾರಾಂತ್ಯದಲ್ಲಿ ಎಲ್ಲವೂ ಸರಿದೂಗಲಿದೆ. ಕಾರ್ಮಿಕರಿಗೆ ಲಾಭ.…

1 hour ago

ಇಂದು ಶಂಕರ ಜಯಂತಿ : ಶಂಕರಾಚಾರ್ಯರ ಕುರಿತ ಕುತೂಹಲಕರ ಸಂಗತಿಗಳು ಇಲ್ಲಿವೆ

ಹೆಸರೇ ಸೂಚಿಸುವಂತೆ, ಆದಿ ಶಂಕರ ಜಯಂತಿಯನ್ನು ಭಾರತೀಯ ತತ್ವಜ್ಞಾನಿ ಮತ್ತು ದೇವತಾಶಾಸ್ತ್ರಜ್ಞ ಆದಿ ಶಂಕರರ ಜನ್ಮದಿನದ ಸವಿ ನೆನಪಿಗಾಗಿ ಆಚರಿಸಲಾಗುತ್ತದೆ.…

2 hours ago