ಚಾಮರಾಜನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀನಿವಾಸ್ ಪ್ರಸಾದ್, ಸಿದ್ದರಾಮಯ್ಯ ಕ್ಷೇತ್ರಕ್ಕಾಗಿ ಅಲೆಯುತ್ತಿದ್ದು, ಜಮೀರ್ ಕಾಲಿಡಿದುಕೊಂಡು ಚಾಮರಾಜಪೇಟೆಗೆ ಹೋಗುತ್ತಿದ್ದಾರೆ. ನಿಮಗೆ ಧೈರ್ಯ ಇದ್ದರೆ ಮೈಸೂರಿಗೆ ಬಂದು ಪಕ್ಷವನ್ನ ಸಂಘಟನೆ ಮಾಡಿ ಚುನಾವಣೆ ಗೆಲ್ಲಿ ಸಿದ್ದರಾಮಯ್ಯ ವಿರುದ್ಧ ಗುಡುಗಿದರು.
ನೀವು ಮುಖ್ಯಮಂತ್ರಿಯಾಗಿ ಎರಡೆರಡು ಕ್ಷೇತ್ರದಲ್ಲಿ ಚುನಾವಣೆಗೆ ನಿಲ್ಲುತ್ತೀರ. ಬಿಜೆಪಿಯನ್ನ ಎದುರಿಸುವ ಶಕ್ತಿ ಕಾಂಗ್ರೆಸ್ ಪಕ್ಷಕ್ಕೆ ಇಲ್ಲ. ಕಾಂಗ್ರೆಸ್ ರಾಷ್ಟ್ರೀಯ ಪಕ್ಷದ ಅಧ್ಯಕ್ಷರು ಅಮೇಥಿ ಕ್ಷೇತ್ರದಲ್ಲಿ ಸೋತು ಸುಣ್ಣವಾಗಿದ್ದಾರೆ. ಕೇವಲ ಸೋನಿಯಾ ಗಾಂಧಿ ಮಾತ್ರ ಉತ್ತರ ಪ್ರದೇಶದಲ್ಲಿ ಗೆದ್ದಿದ್ದಾರೆ ಎಂದು ವ್ಯಂಗ್ಯವಾಡಿದರು.
ರಾಹುಲ್ ಗಾಂಧಿ ಕೇರಳಕ್ಕೆ ಪಲಾಯಾನ ಮಾಡಿದ್ದು, ದೇಶದಲ್ಲಿ ನೆಲೆ ಇಲ್ಲದಂತಾಗಿದೆ. ಉತ್ತರ ಪ್ರದೇಶದಲ್ಲಿ ನಿಮ್ಮ ಪಾರ್ಟಿಯನ್ನ ಬಲಪಡಿಸಿ ಎಂದು ಟಾಂಗ್ ಕೊಟ್ಟರು.