ಹಲವು ವಿಶೇಷತೆಯ ಕುದೇರು ಸ್ವರ್ಣ ಗೌರಿ

ಚಾಮರಾಜನಗರ : ಸಾಮಾನ್ಯವಾಗಿ ಗೌರಿ ಹಬ್ಬವನ್ನು ಮನೆಗಳಲ್ಲಿ ಗೌರಿಯನ್ನು ಪ್ರತಿಷ್ಠಾಪಿಸಿ ಪೂಜಿಸಿ ಮುತ್ತೈದೆಯರಿಗೆ ಬಾಗಿನ ನೀಡಲಾಗುತ್ತದೆ. ಆದರೆ ಚಾಮರಾಜನಗರದ ಕುದೇರಿನಲ್ಲಿ ಮಾತ್ರ ಗೌರಿ ಹಬ್ಬವನ್ನು ವಿಶಿಷ್ಟವಾಗಿ ಆಚರಿಸಲಾಗುತ್ತಿದೆ.

ಗ್ರಾಮದಲ್ಲಿರುವ ಸ್ವರ್ಣ ಗೌರಿ ದೇಗುಲದಲ್ಲಿ ವಿವಿಧ ಪೂಜೆ ಪುರಸ್ಕಾರದೊಂದಿಗೆ ಗೌರಿಯನ್ನು ಪೂಜಿಸಲಾಗುತ್ತದೆ. ಎಲ್ಲ ವರ್ಗದ ಜನತೆ ಯಾವುದೇ ಜಾತಿ ಭೆದಭಾವವಿಲ್ಲದೇ ಜತೆಗೂಡಿ ಗೌರಿಯನ್ನು ಮನೆಯಲ್ಲಿ ಪ್ರತಿಷ್ಠಾಪಿಸದೆ ಎಲ್ಲರೂ ಒಂದೆಡೆ ಸೇರಿ ದೇಗುಲದಲ್ಲಿಯೇ ಆಚರಿಸುವುದು ಇಲ್ಲಿನ ವಿಶೇಷತೆಯಾಗಿದೆ.

ಇನ್ನು ಹಬ್ಬದ ಆಚರಣೆ ಹೇಗಿರಲಿದೆ ಎನ್ನುವುದನ್ನು ನೋಡುವುದಾದರೆ

ಗ್ರಾಮದ ದೊಡ್ಡಕೆರೆ ಯಮುನಾ ತಡಿಯಲ್ಲಿ ಹಬ್ಬಕ್ಕೂ ಮೊದಲು ಮರಳಿನ ಗೌರಿಯನ್ನು ಸಿದ್ದಗೊಳಿಸಿ ನಂತರ ಹಬ್ಬದ ದಿನ  ವಿಶೇಷ ಪೂಜೆಗಳೊಂದಿಗೆ ಪ್ರಮುಖ ಬೀದಿಗಳಲ್ಲಿ  ಮೆರವಣಿಗೆ ಮಾಡಿ ಗೌರಿಯನ್ನ ಪ್ರತಿಷ್ಠಾಪಿಸಲಾಗುತ್ತದೆ. ದೇವಾಲಯದಲ್ಲಿ ಐದನೇ ದಿನಕ್ಕೆ ಮರಳಿನ ಗೌರಿಯನ್ನ ಬದಲಿಸಿ ಕಡಲೆ ಹಿಟ್ಟಿನ ಗೌರಿಯನ್ನು ಪ್ರತಿಷ್ಠಾಪಿಸಿ ಅದಕ್ಕೆ ಚಿನ್ನದ ಕವಚ ಆಭರಣ ಹಾಕಲಾಗುತ್ತದೆ.

ದೇವಾಲಯದಲ್ಲಿ ಗೌರಿಯನ್ನು ಪ್ರತಿಷ್ಠಾಪಿಸಿದಾಗಿನಿಂದ 12 ದಿನಗಳ ಕಾಲ ಪ್ರತಿನಿತ್ಯ ಪೂಜೆ   ನಡೆಯುತ್ತದೆ. ಪ್ರಾರಂಭ ದಿನದಲ್ಲಿ ನವದಂಪತಿಗಳು ಬಾಗಿನ ಅರ್ಪಿಸುತ್ತಾರೆ. ಮಕ್ಕಳಿಲ್ಲದವರು ಸಂತಾನ ಭಾಗ್ಯಕ್ಕಾಗಿ  ಚಿನ್ನ, ಬೆಳ್ಳಿಯ ತೊಟ್ಟಿಲು ಸಮರ್ಪಣೆ  ಮಡುತ್ತಾರೆ. ಯುವತಿಯರು ಕಂಕಣ ಭಾಗ್ಯಕ್ಕಾಗಿ ಮಾಂಗಲ್ಯವನ್ನು ದೇವರಿಗೆ ಅರ್ಪಣೆ ಮಾಡುತ್ತಾರೆ. ಅಷ್ಟೇ ಅಲ್ಲ ದೀಪೋತ್ಸವ, ದೀಪಾರಾಧನೆ ಸೇರಿದಂತೆ ಇಷ್ಟಾರ್ಥ ಸಿದ್ದಿಗಾಗಿ ನಾನಾ ಹರಕೆಗಳನ್ನು ಹರಿಸಿಕೊಂಡ ಭಕ್ತರು ಸಲ್ಲಿಸಿ ದೇವರನ್ನು ಪ್ರಾರ್ಥಿಸುತ್ತಾರೆ.

ಮೊದಲಿಗೆ ಗೌರಿಗೆ ಕಡಲೆ ಹಿಟ್ಟಿನ  ಗೌರಮ್ಮ ಎನ್ನುತ್ತಿದ್ದ ಜನತೆ ತದ ನಂತರ ಊರ ಹಬ್ಬವಾಗಿ ಆಚರಿಸಲು ವಿಗ್ರಹಕ್ಕೆ ಚಿನ್ನದ ಕವಚ, ಆಭರಣ ತೊಡಿಸಿರು ಅಂದಿನಿಂದ ಇದು ಸ್ವರ್ಣ ಗೌರಮ್ಮನಾಗಿ ಭಕ್ತರ ನ್ನು ಸೆಳೆಯುತ್ತಿದ್ದಾಳೆ.

 

Raksha Deshpande

Recent Posts

ಬೆಂಗಳೂರಿನಲ್ಲಿ ಭಾರಿ ಮಳೆ; ಆರ್​ಸಿಬಿ- ಡೆಲ್ಲಿ ಪಂದ್ಯ ರದ್ದು

ಐಪಿಎಲ್ 2024ರ 62 ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ನಡುವೆ ಇಂದು ಸಂಜೆ…

11 mins ago

ದೇಶದ ಸಂಪೂರ್ಣ ಸಂಪತ್ತನ್ನು ಶ್ರೀಮಂತರಿಗೆ ಕೊಟ್ಟಿದ್ದಾರೆ ಮೋದಿ: ಪ್ರಿಯಾಂಕಾ ವಾಗ್ದಾಳಿ

ಇಲ್ಲಿನ ಕಾಂಗ್ರೆಸ್​ ಲೋಕಸಭಾ ಅಭ್ಯರ್ಥಿಯಾಗಿ ಚುನಾವಣಾ ಕಣಕ್ಕಿಳಿದಿರುವ 'ಕೈ' ನಾಯಕ ರಾಹುಲ್ ಗಾಂಧಿ ಪರ ಪ್ರಚಾರ ಮಾಡಲು ಆಗಮಿಸಿದ ಅವರ…

36 mins ago

ಹಲ್ಲುಗಳ ಆರೋಗ್ಯ ಕಾಪಾಡಿಕೊಳ್ಳುವುದು ಹೇಗೆ?

ಹಲ್ಲುಗಳ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಬಹು ಮುಖ್ಯವಾಗಿದೆ.  ಗುಟ್ಕಾ, ಎಲೆಅಡಿಕೆ, ತಂಬಾಕು ಅಗೆಯುವುದರಿಂದ, ಬೀಡಿ, ಸಿಗರೇಟ್ ಸೇದುವುದರಿಂದ ಹಲ್ಲುಗಳು ನೈಜ ಹೊಳಪು…

51 mins ago

ವಿಶ್ವದಲ್ಲೇ ಮೊದಲ ಬಾರಿಗೆ ಹಂದಿ ಕಿಡ್ನಿ ಕಸಿ ಮಾಡಿಸಿಕೊಂಡಿದ್ದ ವ್ಯಕ್ತಿ ಸಾವು

ವಿಶ್ವದಲ್ಲೇ ಮೊದಲ ಬಾರಿಗೆ ಹಂದಿ ಕಿಡ್ನಿ ಕಸಿ ಮಾಡಿಸಿಕೊಂಡಿದ್ದ 62 ವರ್ಷದ ರಿಚರ್ಡ್​ ಸ್ಲಾಯ್​​ಮನ್ ನಿಧನರಾಗಿದ್ದಾರೆ. ಕಳೆದ ಮಾರ್ಚ್​​ನಲ್ಲಿ ಅವರು…

1 hour ago

ಎಸ್‌ಐಟಿಯವರು ಅಪರಾಧಿಗಳನ್ನ ಬಂಧಿಸುತ್ತಿಲ್ಲ: ಬಸವರಾಜ ಬೊಮ್ಮಾಯಿ

ಪ್ರಜ್ವಲ್ ಪ್ರಕರಣದ ತನಿಖೆ ನಡೆಯುತ್ತಿರುವ ರೀತಿ ಸರಿ ಇಲ್ಲ. ಎಸ್‌ಐಟಿಯ ತನಿಖೆಯ ದಿಕ್ಕು ತಪ್ಪುತ್ತಿದೆ. ಅಪರಾಧಿಗಳನ್ನ ಎಸ್‌ಐಟಿಯವರು ಬಂಧಿಸುತ್ತಿಲ್ಲ. ಎಂದು…

2 hours ago

ಅಮ್ಮನ ಮೇಲಿನ ಪ್ರೀತಿಗಾಗಿ ಹೆಸರು ಬದಲಿಸಿಕೊಂಡ ವಿಜಯ್ ಸೂರ್ಯ

ತಾಯಿ ಎಂದರೆ ಮಮತೆಯ ಆಗರ, ತಾಯಿ ಎಂದರೆ ಕರುಣೆಯ ಕಡಲು, ತಾಯಿ ಎಂದರೆ ಪ್ರೀತಿಯ ಸೆಲೆ... ಹೀಗೆ ತಾಯಿಯ ಬಗ್ಗೆ…

2 hours ago