ಹಿಮವದ್ ಗೋಪಾಲಸ್ವಾಮಿ  ಜಾತ್ರೆ ಆರಂಭ

ಚಾಮರಾಜನಗರ: ಜಿಲ್ಲೆಯಲ್ಲಿ ನಡೆಯುವ ಜಾತ್ರಾಮಹೋತ್ಸವದ ಪೈಕಿ ಒಂದಾಗಿರುವ ಗುಂಡ್ಲುಪೇಟೆ ತಾಲ್ಲೂಕಿನ ಹಿಮವದ್‌ ಗೋಪಾಲಸ್ವಾಮಿ ಬೆಟ್ಟದಲ್ಲಿ ಜಾತ್ರೆ ಮಾ.28ರಿಂದ ಆರಂಭವಾಗಿದ್ದು ಮಾ.31ರವರೆಗೆ ನಡೆಯಲಿದ್ದು, ಜಾತ್ರೆಯ ಪ್ರಮುಖ ಆಕರ್ಷಣೆಯಾಗಿರುವ ರಥೋತ್ಸವ ಎಲ್ಲರ ಗಮನಸೆಳೆಯುತ್ತಿದ್ದು, ಎರಡು ವರ್ಷಗಳ ಬಳಿಕ ನಡೆಯುತ್ತಿರುವ ರಥೋತ್ಸವಕ್ಕೆ ಭಕ್ತರ ದಂಡು ದೌಡಾಯಿಸುತ್ತಿದೆ.

ಇನ್ನು ಈ ರಥದ ಬಗ್ಗೆ ಹೇಳಬೇಕೆಂದರೆ ಗುಂಡ್ಲುಪೇಟೆ ತಾಲ್ಲೂಕಿನ ಕಣ್ಣೇಗಾಲ ಹಾಗೂ ಗೋಪಾಲಪುರ ಗ್ರಾಮಸ್ಥರು ಕಾಡಿನಲ್ಲಿ ಸಿಗುವ ಬಿದರಿನ ಬಂಬು ಮತ್ತು ಹಗ್ಗದ ಬದಲು ಕಾಡಿನಲ್ಲಿ ಸಿಗುವ ಹಂಬುಗಳನ್ನು (ಬಳ್ಳಿ) ಬಳಸಿ ರಥ ಎಳೆಯುವುದು ಇಲ್ಲಿನ ವಿಶೇಷವಾಘಿದೆ ಅಷ್ಟೇ ಅಲ್ಲದೆ ರಥದ ಅಲಂಕಾರವೂ ಕಾಡಿನಲ್ಲಿ ಸಿಗುವ ಹೂಗಳಿಂದ ಮಾಡಲಾಗುತ್ತದೆ.

2020 ಹಾಗೂ 2021ರಲ್ಲಿ ಕೋವಿಡ್‌ ಕಾರಣಕ್ಕೆ ಜಾತ್ರೆ ಸರಳವಾಗಿ ನಡೆದಿತ್ತು. ಭಕ್ತರಿಗೆ ನಿರ್ಬಂಧ ವಿಧಿಸಲಾಗಿತ್ತು. ಹೀಗಾಗಿ ಭಕ್ತರಲ್ಲಿ ನಿರಾಸೆ ಮೂಡಿತ್ತು. ಈ ಬಾರಿ ಕೋವಿಡ್‌ ಪರಿಸ್ಥಿತಿ ತಿಳಿಯಾಗಿರುವುದರಿಂದ ಎಂದಿನಂತೆ ರಥೋತ್ಸವ ನಡೆಯುತ್ತಿದೆ. ಹಿಮವದ್‌ ಗೋಪಾಲಸ್ವಾಮಿ ಬೆಟ್ಟವು ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ವ್ಯಾಪ್ತಿಯಲ್ಲಿ ಬರುವುದರಿಂದ ಜನರ ಮಿತಿ ಮೀರಿದ ಚಟುವಟಿಕೆಗಳಿಗೆ ನಿರ್ಬಂಧವಿದೆ. ಹಾಗಾಗಿ, ಪರಿಸರ ಸಂರಕ್ಷಣೆಯ ಜೊತೆಗೆ ಧಾರ್ಮಿಕ ಆಚರಣೆಯನ್ನು ನಡೆಸುವುದು ಹಿಂದಿನಿಂದಲೂ ನಡೆದು ಬಂದಿದೆ.

ಜಾತ್ರೆಗೆ ಆಗಮಿಸುವ ಭಕ್ತರಿಗೆ ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ ಮಾಡಲಾಗಿದೆ. ಅಷ್ಟೇ ಅಲ್ಲದೆ,ಆರೋಗ್ಯ ಇಲಾಖೆ ವತಿಯಿಂದ ಪ್ರಥಮ ಚಿಕಿತ್ಸಾ ಘಟಕ ತೆರೆಯಲಾಗಿದೆ. ಪ್ರಸಾದವನ್ನು ಪರೀಕ್ಷೆ ಮಾಡಿ ದೃಢೀಕರಿಸಲಾಗುತ್ತಿದೆ. ಅಗ್ನಿಶಾಮಕ ಸಿಬ್ಬಂದಿಯನ್ನು ನಿಯೋಜಿಸಲಾಗುವುದು. ಅರಣ್ಯ ಇಲಾಖೆಯವರು ಭಕ್ತರು ದೇವಸ್ಥಾನಕ್ಕೆ ಹೋಗಿ ಬರಲು ವಾಹನ ಮತ್ತು ಕುಡಿಯುವ ನೀರಿನ ವ್ಯವಸ್ಥೆ ಮಾಡಿದ್ದಾರೆ.ಭಕ್ತರಿಗೆ ಅನುಕೂಲವಾಗುವಂತೆ ಕೆಎಸ್ಆರ್‌ಟಿಸಿ ಯಿಂದ ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಲಾಗಿದೆ.

Swathi MG

Recent Posts

ಮೊದಲ ಬಾರಿಗೆ ಮರಾಠಿ ಭಾಷೆಯಲ್ಲಿ ಯಕ್ಷಗಾನ ಪ್ರದರ್ಶನ

ಕನ್ನಡದ ಹೆಮ್ಮೆಯ ಕಲೆ ಯಕ್ಷಗಾನ ಇದೀಗ ಗಡಿಗಳನ್ನು ದಾಟಿ ಮಹಾರಾಷ್ಟ್ರದ ಕಡೆಗೆ ಪಯಣ ಬೆಳೆಸಿದೆ. ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ…

7 mins ago

ತೃತೀಯ ಲಿಂಗಿಯ ಹತ್ಯೆ ಪ್ರಕರಣ: ಮಹಿಳೆಯ ಬಂಧನ

ತೃತೀಯ ಲಿಂಗಿಯನ್ನು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕೊಲೆ ಆರೋಪಿಯನ್ನು ಬಂಧಿಸಿದ್ದಾರೆ.

26 mins ago

ಬಿಗ್‌ಬಾಸ್‌ 16 ಸ್ಪರ್ಧಿ ʼಅಬ್ದು ರೋಝಿಕ್‌ʼಗೆ ಮದುವೆಯಂತೆ

ಬಿಗ್‌ಬಾಸ್‌ 16ನಲ್ಲಿ ಸ್ಪರ್ಧಿಸಿದ್ದ ಅಬ್ದು ರೋಝಿಕ್‌ ವಿಡಿಯೋವೊಂದನ್ನು ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ತಾನೀಗ ಪ್ರೀತಿಗೆ ಬಿದ್ದಿದ್ದು, ಜುಲೈ 7ರಂದು ಮನಮೆಚ್ಚಿದ…

36 mins ago

ಕೆ.ಆರ್.ಪೇಟೆಯಲ್ಲಿ ಜೆಡಿಎಸ್ ನಿಂದ ಬೃಹತ್ ಪ್ರತಿಭಟನೆ

ಹಾಸನದ ಸಿ.ಡಿ.ಹಗರಣವನ್ನು ಸಿ.ಬಿ.ಐ ತನಿಖೆಗೆ ಒಪ್ಪಿಸುವಂತೆ ಆಗ್ರಹಿಸಿ ಪಟ್ಟಣದಲ್ಲಿಂದು ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

51 mins ago

ಸೊಳ್ಳೆ ‘ಟ್ವೀಟ್ ಕಳುಹಿಸುವ’ ಫೋಟೋ ವೈರಲ್‌

ನಾವು ಪ್ರತಿದಿನ ಸೋಶಿಯಲ್‌ ಮಿಡಿಯಾಗಳಲ್ಲಿ ಹಲವಾರು ಟ್ವೀಟ್‌ಗಳು ಮತ್ತು ಪೋಸ್ಟ್ ಗಳನ್ನು ನೋಡುತ್ತೇವೆ.ಅದರಲ್ಲೂ ಕೆಲ ಪೋಸ್ಟ್‌ ಗಳು ನಮ್ಮನ್ನು ನಗುವಂತೆ…

1 hour ago

ಪಾಕಿಸ್ತಾನವನ್ನು ನಾವು ಗೌರವಿಸಬೇಕು ಎಂದ ಮಾಜಿ ಸಚಿವ ಮಣಿಶಂಕರ್ ಅಯ್ಯರ್‌

ಈ ಹಿಂದೆಯೂ ಪಾಕಿಸ್ತಾನವನ್ನು ಹಾಡಿಹೊಗಳಿ ವ್ಯಾಪಕ ಟೀಕೆಗೆ ಗುರಿಯಾಗಿದ್ದ ಕಾಂಗ್ರೆಸ್‌ ಮಾಜಿ ಸಚಿವ ಮಣಿಶಂಕರ್ ಅಯ್ಯರ್‌ ಈಗ ಮತ್ತೊಂದು ವಿವಾದಾತ್ಮಕ…

1 hour ago