ಚಾಮರಾಜನಗರ

ಹೊನ್ನೂರು ಗೌರಮ್ಮಗೆ ಸೋಬಾನೆ ಚಿಕ್ಕಮ್ಮ ಪ್ರಶಸ್ತಿ

ಚಾಮರಾಜನಗರ: ಬೆಂಗಳೂರು ಕರ್ನಾಟಕ ಜಾನಪದ ಪರಿಷತ್ತು ನೀಡುವ 2022 ನೇ ಸಾಲಿನ ರಾಜ್ಯಮಟ್ಟದ ಜಾನಪದಲೋಕ ಸೋಬಾನೆ ಚಿಕ್ಕಮ್ಮ ಪ್ರಶಸ್ತಿಗೆ ಯಳಂದೂರು ತಾಲೂಕಿನ ಹೊನ್ನೂರು ಗ್ರಾಮದ ವಿಕಲಚೇತನ ಕಲಾವಿದೆ ಸೋಬಾನೆ ಗೌರಮ್ಮ ಆಯ್ಕೆಯಾಗಿದ್ದಾರೆ.

ಇದೇ ಮಾರ್ಚ್ 12 ಮತ್ತು 13ರಂದು ರಾಮನಗರ ಜಾನಪದಲೋಕದಲ್ಲಿ ಹಮ್ಮಿಕೊಂಡಿರುವ ಎರಡು ದಿನಗಳ ಪ್ರವಾಸಿ ಜನಪದ ಲೋಕೋತ್ಸವ ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್ ಮತ್ತು ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷರಾದ ಪದ್ಮಶ್ರೀ  ಮಾತಾ  ಬಿ.ಮಂಜಮ್ಮ ಜೋಗತಿ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ಪ್ರಶಸ್ತಿಯು ಪಾರಿತೋಷಕ, ಪ್ರಶಸ್ತಿ ಪತ್ರ ಹಾಗೂ 10 ಸಾವಿರ ರೂ ನಗದನ್ನು ಒಳಗೊಂಡಿರುತ್ತದೆ ಎಂದು ಕರ್ನಾಟಕ ಜಾನಪದ ಲೋಕದ ರಾಜ್ಯಾಧ್ಯಕ್ಷರಾದ ಡಾ. ಟಿ  ತಿಮ್ಮೇಗೌಡ ಅವರು ತಿಳಿಸಿದ್ದಾರೆ. ಇದೇ ಸಂದರ್ಭದಲ್ಲಿ ಪ್ರಶಸ್ತಿಗೆ ಭಾಜನರಾದ 25 ವರ್ಷದ ಹಿರಿಯ ಜಾನಪದ ಕಲಾವಿದೆ ಸೋಬಾನೆ  ಹೊನ್ನೂರು ಗೌರಮ್ಮ ಅವರನ್ನು ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾಧ್ಯಕ್ಷ ಸಿಎಂ ನರಸಿಂಹಮೂರ್ತಿ ಅಭಿನಂದಿಸಿದ್ದಾರೆ.

Swathi MG

Recent Posts

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

8 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

9 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

9 hours ago

ಮರಿ ಆನೆಗೆ ಕುಟುಂಬದಿಂದ Z+ ಭದ್ರತೆ: ವಿಡಿಯೋ ವೈರಲ್

ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.‌ ಹೌದು. .…

9 hours ago

ಆರ್‌ಸಿಬಿ vs ಸಿಎಸ್‌ಕೆ ಫ್ಯಾನ್ಸ್‌ ಗೆ ಎಚ್ಚರಿಕೆ ಕೊಟ್ಟ ಬೆಂಗಳೂರು ಪೊಲೀಸರು

ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ vs ಸಿಎಸ್‌ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…

9 hours ago

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಮೃತ್ಯು

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್‌ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.

10 hours ago