News Karnataka Kannada
Monday, April 29 2024
ಚಾಮರಾಜನಗರ

ಚಾಮರಾಜನಗರ: ವಿಧಾನಸಭಾ ಚುನಾವಣೆಗೆ 26 ನಾಮಪತ್ರ ಸಲ್ಲಿಕೆ

26 nominations filed in Chamarajanagar
Photo Credit : By Author

ಚಾಮರಾಜನಗರ: ವಿಧಾನಸಭಾ ಚುನಾವಣೆಗೆ ಜಿಲ್ಲೆಯಲ್ಲಿ ಶಾಸಕರಾದ ನರೇಂದ್ರ, ಎನ್ ಮಹೇಶ್, ವಿ.ಸೋಮಣ್ಣ ಸೇರಿದಂತೆ ಸೇರಿದಂತೆ ಹಲವು ಅಭ್ಯರ್ಥಿಗಳು ಬುಧವಾರ ಉಮೇದುವಾರಿಕೆ ಸಲ್ಲಿಸಿದ್ದು, ಒಟ್ಟಾರೆ ಜಿಲ್ಲೆಯಲ್ಲಿ 26 ನಾಮಪತ್ರಗಳು ಸಲ್ಲಿಕೆಯಾಗಿವೆ.

ಹನೂರು ವಿಧಾನಸಭಾ ಕ್ಷೇತ್ರದಿಂದ ಭಾರತೀಯ ರಾಷ್ಟ್ರೀಯ ಕಾಂಗ್ರೇಸ್ ಪಕ್ಷದ ಅಭ್ಯರ್ಥಿಯಾಗಿ ಆರ್. ನರೇಂದ್ರ ಅವರು ಎರಡು ನಾಮಪತ್ರ ಸಲ್ಲಿಸಿದ್ದಾರೆ. ಕಂಟ್ರಿ ಸಿಟಿಜನ್ ಪಾರ್ಟಿ ಅಭ್ಯರ್ಥಿಯಾಗಿ ಸಿದ್ದಪ್ಪ. ಆರ್.ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಅಭ್ಯರ್ಥಿಯಾಗಿ ಟಿ. ಜಾನ್‌ಪೀಟರ್, ಪಕ್ಷೇತರ ಅಭ್ಯರ್ಥಿಯಾಗಿ ಸೆಲ್ವರಾಜ್. ಎಸ್.ಎಂ. ನಾಗರಾಜು, ಟಿ. ಮುತ್ತುರಾಜು, ಎನ್. ಕೃಷ್ಣಮೂರ್ತಿ ಅವರು ತಲಾ ಒಂದು ನಾಮಪತ್ರ ಸಲ್ಲಿಸಿದ್ದಾರೆ.

ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದಿಂದ ಭಾರತೀಯ ಜನತಾ ಪಾರ್ಟಿ ಅಭ್ಯರ್ಥಿಯಾಗಿ ಎನ್. ಮಹೇಶ್, ಕರ್ನಾಟಕ ಜನತಾ ಪಕ್ಷದ ಅಭ್ಯರ್ಥಿಯಾಗಿ ಎಸ್. ನಿಂಗರಾಜು ಅವರು ತಲಾ ಒಂದು ನಾಮಪತ್ರ ಸಲ್ಲಿಸಿದ್ದಾರೆ. ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿಯಾಗಿ ಬಿ.ವಿನಯ್‌ಕುಮಾರ್ ಅವರು ಎರಡು ನಾಮಪತ್ರ ಮತ್ತು ಚಾಮರಾಜನಗರ ವಿಧಾನಸಭಾ ಕ್ಷೇತ್ರದಿಂದ ಭಾರತೀಯ ಜನತಾ ಪಾರ್ಟಿ ಅಭ್ಯರ್ಥಿಯಾಗಿ ವಿ. ಸೋಮಣ್ಣ ಅವರು ನಾಲ್ಕು ನಾಮಪತ್ರ ಸಲ್ಲಿಸಿದ್ದಾರೆ. ಪಕ್ಷೇತರ ಅಭ್ಯರ್ಥಿಯಾಗಿ ನಿಂಗರಾಜು ಅವರು ಒಂದು ನಾಮಪತ್ರ ಸಲ್ಲಿಸಿದ್ದಾರೆ.

ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದಿಂದ ಬಹುಜನ ಸಮಾಜ ಪಕ್ಷದ ಅಭ್ಯರ್ಥಿಯಾಗಿ ಡಿ. ಗೋವಿಂದರಾಜು ಅವರು ಎರಡು ನಾಮಪತ್ರ ಸಲ್ಲಿಸಿದ್ದಾರೆ. ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಅಭ್ಯರ್ಥಿಯಾಗಿ ಗಿರೀಶ್. ಕೆ.,ಭಾರತೀಯ ಬೆಳಕು ಪಾರ್ಟಿ ಅಭ್ಯರ್ಥಿಯಾಗಿ ಕೆ. ಬಸವಶೆಟ್ಟಿ, ಆಮ್ ಆದ್ಮಿ ಪಾರ್ಟಿ ಅಭ್ಯರ್ಥಿಯಾಗಿ ಮಹದೇವಪ್ರಸಾದ್. ಎಂ, ಪಕ್ಷೇತರ ಅಭ್ಯರ್ಥಿಗಳಾಗಿ ಸಿದ್ದರಾಜು. ಹೆಚ್.ಎಸ್.,ಎಂ.ಪಿ.ಸುನೀಲ್, ಶೇಖರ್‌ರಾಜ್. ಬಿ.ಸಿ, ಹೆಚ್.ಎಸ್. ತೋಂಟಧಾರ್ಯಸ್ವಾಮಿ ಅವರು ತಲಾ ಒಂದು ನಾಮಪತ್ರ ಸಲ್ಲಿಸಿದ್ದಾರೆ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು