ಅಮಿತ್ ಶಾ  ಓರ್ವ ಗೂಂಡಾ, ರೌಡಿ: ಯತೀಂದ್ರ ಸಿದ್ದರಾಮಯ್ಯ

ಚಾಮರಾಜನಗರ:  ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಹಲವು ರಾಜಕೀಯ ನಾಯಕರು ತಮ್ಮ ನಾಲಗೆ ಹರಿಬಿಡುತಿದ್ದಾರೆ. ಈಗ ಯತೀಂದ್ರ ಸಿದ್ದರಾಮಯ್ಯ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದಾರೆ.

ಹನೂರು ಕಾಂಗ್ರೆಸ್  ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ಅಮಿತ್ ಶಾ  ಓರ್ವ ಗೂಂಡಾ, ರೌಡಿ ಎಂದು ಹೇಳಿದ್ದಾರೆ.

ಗುಜರಾತ್‍ನಲ್ಲಿ ನರಮೇಧ ಮಾಡಿದವರು ಯಾರು? ಇಂತಹವರು ದೇಶದ ಉನ್ನತ ಸ್ಥಾನದಲ್ಲಿದ್ದಾರೆ. ಕ್ರಿಮಿನಲ್ ಚಟುವಟಿಕೆಯುಳ್ಳ ಇಂತಹವರನ್ನು ಮೋದಿ ತಮ್ಮ ಪಕ್ಕದಲ್ಲಿ ಕೂರಿಸಿಕೊಂಡು ಆಡಳಿತ ನಡೆಸುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

400ಕ್ಕೂ ಹೆಚ್ಚು ಸ್ಥಾನ ಗೆಲ್ತೀವಿ, 400ಕ್ಕೂ ಹೆಚ್ಚು ಸ್ಥಾನ ಬಂದ್ರೆ ಸಂವಿಧಾನ ಬದಲಾವಣೆ ಮಾಡುವುದು ಇವರ ಹಿಡನ್ ಅಜೆಂಡಾ ಆಗಿದೆ. ದೇಶದ ಇತಿಹಾಸದಲ್ಲೇ ಪ್ರಜಾಪ್ರಭುತ್ವದ ಕತ್ತು ಹಿಸುಕುವ ಸರ್ಕಾರ ಎಂದರೆ ಅದು ಮೋದಿ ಸರ್ಕಾರ ಎಂದು ತೀವ್ರ ವಾಗ್ದಾಳಿ ನಡೆಸಿದ್ದಾರೆ.

2 ಕೋಟಿ ಉದ್ಯೋಗ ಸೃಷ್ಟಿಸುತ್ತೇವೆ ಎಂದಿದ್ದರು, ಅದು ಆಗಲಿಲ್ಲ. ಈಗ ನಿರೋದ್ಯೋಗಿಗಳಿಗೆ ಉದ್ಯೋಗ ಸೃಷ್ಟಿ ಮಾಡೋದು ಕೇಂದ್ರ ಸರ್ಕಾರದ ಹೊಣೆ ಅಲ್ಲ ಎಂದು ಹೇಳ್ತಿದ್ದಾರೆ. ಕಪ್ಪು ಹಣ ವಾಪಸ್ ತರುತ್ತೇವೆ ಎಂದಿದ್ದರು, ತಂದ್ರಾ? ಸ್ವಿಸ್ ಬ್ಯಾಂಕ್‍ನಲ್ಲಿ ಯಾರ ಖಾತೆಯಿದೆ ಎಂದು ಪಟ್ಟಿ ಕೂಡ ರಿಲೀಸ್ ಮಾಡಲಿಲ್ಲ. ಪೆಟ್ರೋಲ್ ಡೀಸೆಲ್ ರೇಟ್ ಹೆಚ್ಚಾಗಿ ಹೋಗಿದೆ ಎಂದಿದ್ದಾರೆ.

Ashika S

Recent Posts

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

1 hour ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

2 hours ago

ನಂಜನಗೂಡು ತಾಲ್ಲೂಕಿಗೆ ಶೇ.86.74 ರಷ್ಟು ಫಲಿತಾಂಶ: ವಿದ್ಯಾರ್ಥಿನಿ ಬಾಂಧವ್ಯ ತಾಲೂಕಿಗೆ ಪ್ರಥಮ ‌

ತಾಲ್ಲೂಕಿಗೆ ಶೇ.86.74 ರಷ್ಟು ಫಲಿತಾಂಶ ಬಂದಿದ್ದು, ನಂಜನಗೂಡಿನ ಸರ್ಕಾರಿ ಆದರ್ಶ ಶಾಲೆಯ ವಿದ್ಯಾರ್ಥಿನಿ ಬಾಂಧವ್ಯ ತಾಲ್ಲೂಕಿಗೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ…

2 hours ago

ಲೋಕಸಭೆ ಚುನಾವಣೆ: ಭಾಲ್ಕಿ ಕ್ಷೇತ್ರದಲ್ಲಿ ಅತ್ಯಧಿಕ ಮತದಾನ

ಬೀದರ್‌ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು ಶೇ 65.45ರಷ್ಟು ಮತದಾನ ದಾಖಲಾಗಿದ್ದು, ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ ಭಾಲ್ಕಿಯಲ್ಲಿ ಅತಿ ಹೆಚ್ಚು…

2 hours ago

ಕುಡಿಯುವ ನೀರಿನ ಸಮಸ್ಯೆ ನಿವಾರಣೆ: ಮಲಪ್ರಭಾ ಕಾಲುವೆಗೆ ಮೇ 14 ರಿಂದ 23 ರವರೆಗೆ ನೀರು

ಮೇ 14 ರಿಂದ 23 ರವರೆಗೆ ನವಿಲುತೀರ್ಥ ಜಲಾಶಯದಿಂದ ಮಲಪ್ರಭಾ ಹಾಗೂ ನರಗುಂದ ಶಾಖಾ ಕಾಲುವೆ ಮೂಲಕ ನವಲಗುಂದ ಅಣ್ಣಿಗೇರಿ,…

3 hours ago

ಬಿಜೆಪಿ ಸಾಮಾಜಿಕ ಜಾಲತಾಣ ಸಂಚಾಲಕ ಪ್ರಶಾಂತ್‌ ಮಾಕನೂರು ಬಂಧನ

ಎಸ್‌ಸಿ, ಎಸ್‌ಟಿ ಅನುದಾನ ಮುಸ್ಲಿಂ ಪಾಲಾಗುತ್ತಿದೆ ಎಂದು ಬಿಜೆಪಿ ತನ್ನ ಎಕ್ಸ್‌ ಖಾತೆಯನ್ನು ವಿಡಿಯೋ ಜಾಹೀರಾತು ಪ್ರಕಟಿಸಿತ್ತು. ಈ ವಿಡಿಯೋ…

3 hours ago