News Karnataka Kannada
Sunday, April 28 2024
ಚಾಮರಾಜನಗರ

ಚಾಮರಾಜನಗರ ಬಿಜೆಪಿ ಅಭ್ಯರ್ಥಿಯಾದ ಬಾಲರಾಜು ವಿವರ ಹೀಗಿದೆ

ಲೋಕಸಭಾ ಚುನಾವಣೆಯಲ್ಲಿ ಪ್ರಬಲ ಟಿಕೆಟ್ ಆಕಾಂಕ್ಷಿಗಳಾಗಿದ್ದ ಸಂಸದ ಶ್ರೀನಿವಾಸ ಪ್ರಸಾದ್ ಅಳಿಯಂದರಿಗೆ ಟಿಕೆಟ್ ಕೈ ತಪ್ಪಿದ್ದರಿಂದ ಮಾಜಿ ಶಾಸಕ ಬಾಲರಾಜು ಕಮಲಪಡೆ ಹುರಿಯಾಳಾಗಿದ್ದಾರೆ.
Photo Credit : News Kannada

ಚಾಮರಾಜನಗರ: ಲೋಕಸಭಾ ಚುನಾವಣೆಯಲ್ಲಿ ಪ್ರಬಲ ಟಿಕೆಟ್ ಆಕಾಂಕ್ಷಿಗಳಾಗಿದ್ದ ಸಂಸದ ಶ್ರೀನಿವಾಸ ಪ್ರಸಾದ್ ಅಳಿಯಂದರಿಗೆ ಟಿಕೆಟ್ ಕೈ ತಪ್ಪಿದ್ದರಿಂದ ಮಾಜಿ ಶಾಸಕ ಬಾಲರಾಜು ಕಮಲಪಡೆ ಹುರಿಯಾಳಾಗಿದ್ದಾರೆ.

2004 ರಲ್ಲಿ ಕೊಳ್ಳೇಗಾಲ ಕ್ಷೇತ್ರದಲ್ಲಿ ಪಕ್ಷೇತರರಾಗಿ ಸ್ಪರ್ಧೆ ಮಾಡಿ ಶಾಸಕರಾಗಿದ್ದ ಬಾಲರಾಜು ಬಳಿಕ ನಡೆದ ಚುನಾವಣೆಯಲ್ಲಿ ಅದೃಷ್ಟ ಪರೀಕ್ಷೆಗೆ ಇಳಿದರೂ ಕೈ ಹಿಡಿದಿರಲಿಲ್ಲ. 2023 ರ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಬಿಜೆಪಿಗೆ ಬಂದ ಬಾಲರಾಜು ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿ ಗುರುತಿಸಿಕೊಂಡು ಕ್ಷೇತ್ರದಲ್ಲಿ ಓಡಾಟ ನಡೆಸಿದ್ದರು.

ಯಡಿಯೂರಪ್ಪ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಬಾಲರಾಜು ಬಿಜೆಪಿ ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದು ಮೊದಲ ಬಾರಿಗೆ ಲೋಕಸಭಾ ಅಖಾಡಕ್ಕೆ ಇಳಿಯಲಿದ್ದಾರೆ. ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಚಾಮರಾಜನಗರದಲ್ಲಿ ಮೊದಲ ಬಾರಿಗೆ ಪ್ರಸಾದ್ ಕಮಲ ಅರಳಿಸಿದ್ದರು.

ಟಿಕೆಟ್ ಆಕಾಂಕ್ಷಿಗಳು ಯಾರ್ಯಾರಿದ್ದರು..?

ಬಿಜೆಪಿಯಿಂದ ಟಿಕೆಟ್ ಪಡೆಯಲು ಆಕಾಂಕ್ಷಿಗಳ ಸರತಿ ಸಾಲೆ ನಿರ್ಮಾಣವಾಗಿತ್ತು. ಎಸ್.ಬಾಲರಾಜು, ಪ್ರಸಾದ್ ಅಳಿಯಂದಿರಾದ ಡಾ.ಮೋಹನ್, ಹರ್ಷವರ್ಧನ್, ದಿ.ಕೆ.ಶಿವರಾಂ, ಎಸ್.ಮಹಾದೇವಯ್ಯ, ವೆಂಕಟರಮಣಸ್ವಾಮಿ ಪಾಪು ಆಕಾಂಕ್ಷಿಗಳಾಗಿ ಗುರುತಿಸಿಕೊಂಡಿದ್ದರು.

ಬಾಲರಾಜು ವಿವರ:

ಸಿವಿಲ್ ಎಂಜಿನಿಯರಿಂಗ್ ಪದವಿ ಪಡೆದಿರುವ ಬಾಲರಾಜು 1991 ರಲ್ಲಿ ಮುತ್ಸದಿ ರಾಜಕಾರಣಿ ಎಂ.ರಾಜಶೇಖರಮೂರ್ತಿ ಅವರ ಗರಡಿಯಿಂದ ಬಂದವರಾಗಿದ್ದಾರೆ. ರಾಜಶೇಖರಮೂರ್ತಿ ಶಿಷ್ಯನಾಗಿ ಕಾಂಗ್ರೆಸ್ ಮೂಲಕ ರಾಜಕೀಯಕ್ಕೆ ಬಂದು ವಿವಿಧ ಘಟಕಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಅದಾದ ಬಳಿಕ, 1993 ರಲ್ಲಿ ಟಿಎಪಿಎಂಎಸ್ ನಿರ್ದೇಶಕರಾಗಿ ಆಯ್ಕೆಯಾಗಿ 1997 ರಲ್ಲಿ ಯುವ ಕಾಂಗ್ರೆಸ್ ಚಾಮರಾಜನಗರ ವಿಭಾಗದ ಅಧ್ಯಕ್ಷರಾದರು. 1999 ರಲ್ಲಿ ರಾಜಶೇಖರಮೂರ್ತಿ ಅವರೊಟ್ಟಿಗೆ ಬಿಜೆಪಿಗೆ ಸೇರ್ಪಡೆಗೊಂಡು ಕೊಳ್ಳೇಗಾಲ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ 5421 ಮತಗಳಿಂದ ಸೋಲು ಕಂಡರು.

ಅದೇ ವರ್ಷ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದರು. ಬದಲಾದ ರಾಜಕೀಯ ಸನ್ನಿವೇಶದಲ್ಲಿ ಬಿಜೆಪಿ-ಜೆಡಿಯು ಹೊಂದಾಣಿಕೆ ನಡುವೆ ಟಿಕೆಟ್ ಕೈ ತಪ್ಪಿದ್ದರಿಂದ 2004 ರಲ್ಲಿ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ನಿಂತು ಮೊದಲ ಬಾರಿಗೆ ಶಾಸಕರಾದರು.

2013 ರಲ್ಲಿ ಯಡಿಯೂರಪ್ಪ ಅವರನ್ನು ಹಿಂಬಾಲಿಸಿ ಕೆಜೆಪಿ ಸೇರಿದ ಬಾಲರಾಜು ಮತ್ತೇ ಚುನಾವಣೆಗೆ ನಿಂತು ಮೂರನೇ ಸ್ಥಾನಕ್ಕೆ ತೃಪ್ತಿ ಪಡಬೇಕಾಯಿತು. 2013 ರಲ್ಲಿ ಕಾಂಗ್ರೆಸ್ ಸೇರ್ಪಡೆಗೊಂಡು ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. 2023 ರ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಹೊರಬಂದು ಬಿಜೆಪಿ ಸೇರ್ಪಡೆಗೊಂಡು ಎನ್.ಮಹೇಶ್ ಪರ ಪ್ರಚಾರ ನಡೆಸಿದ್ದರು.

ವಿಧಾನಸಭಾ ಚುನಾವಣೆಯಾದ ಬಳಿಕ ಲೋಕಸಭಾ ಟಿಕೆಟ್ ನ ಪ್ರಬಲ ಆಕಾಂಕ್ಷಿಯಾಗಿ ಗುರುತಿಸಿಕೊಂಡಿದ್ದ ಬಾಲರಾಜು ಅವರಿಗೆ ಹೈಕಮಾಂಡ್ ಒಲವು ತೋರಿ ಟಿಕೆಟ್ ಕೊಟ್ಟಿದೆ.

ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಮೋದಿ ಅಲೆ- ಸಿದ್ದು ಹವಾ ಎರಡೂ ಇದ್ದು ಮತದಾರ ಯಾರಿಗೆ ಮಣೆ ಹಾಕುತ್ತಾನೆಂದು ಕಾದು ನೋಡಬೇಕಿದೆ‌.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು