News Karnataka Kannada
Tuesday, April 30 2024
ಚಾಮರಾಜನಗರ

ಪಿಕಪ್ ವಾಹನಕ್ಕೆ ಬೈಕ್ ಡಿಕ್ಕಿ: ಸವಾರ ಸಾವು

ಬೈಕ್ ಕೋಳಿ ಸಾಗಿಸುತ್ತಿದ್ದ ಪಿಕಪ್ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಕೊಳ್ಳೇಗಾಲ ತಾಲೂಕಿನ ಮುಳ್ಳೂರು  ಗ್ರಾಮದ ಬಳಿ ನಡೆದಿದೆ.
Photo Credit : By Author

ಕೊಳ್ಳೇಗಾಲ: ಬೈಕ್ ಕೋಳಿ ಸಾಗಿಸುತ್ತಿದ್ದ ಪಿಕಪ್ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಕೊಳ್ಳೇಗಾಲ ತಾಲೂಕಿನ ಮುಳ್ಳೂರು  ಗ್ರಾಮದ ಬಳಿ ನಡೆದಿದೆ.

ಕೊಳ್ಳೇಗಾಲ ತಾಲೂಕಿನ ಮುಳ್ಳೂರು ಗ್ರಾಮದ ಸಿದ್ದಯ್ಯ ಎಂಬುವರ ಪುತ್ರ  ಅಭಿಷೇಕ್( 22) ಮೃತಪಟ್ಟ ದುರ್ದೈವಿ.  ಈತ ಬೈಕ್ ನಲ್ಲಿ ತನ್ನ ಸ್ವಗ್ರಾಮಕ್ಕೆ ಬರುತ್ತಿದ್ದ ವೇಳೆ ಮುಳ್ಳೂರಿನ ಹಳ್ಳಿಕೆರೆ ಬಳಿ  ಎದುರಿಗೆ  ಬಂದ  ಕೋಳಿ ಸಾಗಿಸುತ್ತಿದ್ದ  ಪಿಕಪ್ ವಾಹನ ಮುಖಾಮುಖಿಡಿಕ್ಕಿ  ಹೊಡೆದಿದೆ. ಪರಿಣಾಮ ಗಂಭೀರ ಗಾಯಗೊಂಡ ಅಭಿಷೇಕ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ಈ ಸಂಬಂಧ ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ  ದಾಖಲಾಗಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು