ಗುಂಡ್ಲುಪೇಟೆಯಲ್ಲಿ ವಿಜಯ ಸಂಕಲ್ಪ ಅಭಿಯಾನಕ್ಕೆ ಬಿಜೆಪಿ ಸಿದ್ಧತೆ

ಗುಂಡ್ಲುಪೇಟೆ: ಮುಂಬರುವ ವಿಧಾನಸಭೆ ಚುನಾವಣೆಯ ಸಿದ್ಧತೆ ಭಾಗವಾಗಿ ಬಿಜೆಪಿಯು ಜ. 21ರಿಂದ 29ರವರೆಗೆ ರಾಜ್ಯದಾದ್ಯಂತ ಬೂತ್‌ ಮಟ್ಟದಲ್ಲಿ ವಿಜಯ ಸಂಕಲ್ಪ ಅಭಿಯಾನ ಹಮ್ಮಿಕೊಂಡಿದ್ದು ಅದರಂತೆ ಗುಂಡ್ಲುಪೇಟೆ ವಿಧಾನ ಸಭಾ ಕ್ಷೇತ್ರದಲ್ಲಿ ಅಭಿಯಾನ ನಡೆಸಲು ಸರ್ವ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ ಎಂದು ಬಿಜೆಪಿಯ ಜಿಲ್ಲಾ ಉಪಾಧ್ಯಕ್ಷ ಸೋಮಶೇಖರ್ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಅಭಿಯಾನದ ಮೂಲಕ ರಾಜ್ಯದಾದ್ಯಂತ ಎರಡು ಕೋಟಿ ಮತದಾರರನ್ನು ತಲುಪುವ ಗುರಿ ಹೊಂದಲಾಗಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜಯಪ್ರಕಾಶ್‌ ನಡ್ಡಾ, ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಜ.21ರಂದು ಬೆಳಿಗ್ಗೆ 11 ಗಂಟೆಗೆ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌.ಯಡಿಯೂರಪ್ಪ, ರಾಜ್ಯ ಘಟಕದ ಅಧ್ಯಕ್ಷ ನಳಿನ್‌ಕುಮಾರ್ ಕಟೀಲ್‌ ಭಾಗವಹಿಸಲಿದ್ದಾರೆ. ಅದೇ ಸಮಯದಲ್ಲಿ ಜಿಲ್ಲೆಯ ನಾಲ್ಕೂ ವಿಧಾನಸಭಾ ಕ್ಷೇತ್ರಗಳಲ್ಲೂ ಅಭಿಯಾನಕ್ಕೆ ಚಾಲನೆ ನೀಡಲಾಗುವುದು ಎಂದರು.

ಜನವರಿ 2 ರಿಂದ 12ರವರೆಗೆ ನಡೆದಿದ್ದ ಬೂತ್‌ ವಿಜಯಿ ಅಭಿಯಾನದಲ್ಲಿ ತಾಲೂಕಿನ 249 ಬೂತ್‌ಗಳಲ್ಲಿ ಬೂತ್‌ ಮಟ್ಟದ ಸಮಿತಿ ರಚಿಸಲಾಗಿದೆ. ಅಭಿಯಾನದಲ್ಲಿ ‍ಪಕ್ಷದ ಮುಖಂಡರು, ಪದಾಧಿಕಾರಿಗಳು, ಶಾಸಕರು, ಸಚಿವರೆಲ್ಲ ಮನೆ ಮನೆಗಳಿಗೆ ತೆರಳಿ, ಮತದಾರರನ್ನು ಭೇಟಿ ಮಾಡಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಾಧನೆಗಳನ್ನು ವಿವರಿಸಲಿದ್ದಾರೆ. ಈ ಸಂಬಂಧದ ಕರಪತ್ರಗಳನ್ನು ವಿತರಿಸಲಿದ್ದಾರೆ. ರಾಜ್ಯಮಟ್ಟದಲ್ಲಿ ಎರಡು ಕೋಟಿ ಮತದಾರರನ್ನು ತಲುಪುವ ಗುರಿ ಹೊಂದಲಾಗಿದ್ದು, ಜಿಲ್ಲೆಯಲ್ಲಿ ನಾಲ್ಕು ಲಕ್ಷದಿಂದ ಐದು ಲಕ್ಷ ಮತದಾರರನ್ನು ನಾವು ಭೇಟಿ ಮಾಡಲಿದ್ದೇವೆ. ಬಿಜೆಪಿ ಸರ್ಕಾರಗಳ ಸಾಧನೆಯನ್ನು ಅವರ ಮುಂದೆ ತೆರೆದಿಡಲಿದ್ದೇವೆ ಎಂದು ಹೇಳಿದರು.

ಎಪಿಎಂಸಿ ಅಧ್ಯಕ್ಷ ಕಮರಳ್ಳಿ ರವಿ, ಸಂಚಾಲಕರಾದ ಗೀತಾ, ಮಹದೇವ ಪ್ರಸಾದ್, ಮಲ್ಲಿಕಾರ್ಜುನ್, ಸುಜೆಂದ್ರ, ಪ್ರಭಾಕರ್, ನವೀನ್ ಮೌರ್ಯ ಹಾಗೂ ಮಂಜುನಾಥ್ ಇದ್ದರು.

Gayathri SG

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

6 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

6 hours ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

7 hours ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

7 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

7 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

8 hours ago