ಚಾಮರಾಜನಗರ: ಚಾಮರಾಜನಗರದಲ್ಲಿ ಕಾವೇರಿ ಕಾವು ಮುಂದುವರಿದಿದ್ದು, ಇಂದು (ನ.10) ರಾಷ್ಟ್ರೀಯ ಹೆದ್ದಾರಿಯಲ್ಲಿ ಅರ್ಧಗಂಟೆಗೂ ಹೆಚ್ಚು ಕಾಲ ರಸ್ತೆತಡೆ ನಡೆಸಿ ಕನ್ನಡಪರ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಲಿ ಡಬ್ಬಿಗಳನ್ನಿಡಿದು, ಕೇಂದ್ರ, ರಾಜ್ಯ ಹಾಗೂ ಕಾವೇರಿ ನಿರ್ವಹಣಾ ಮಂಡಳಿಯ ವಿರುದ್ಧ ಕಾರ್ಯಕರ್ತರು ಆಕ್ರೋಶ ಹೊರಹಾಕಿದರು.