News Karnataka Kannada
Saturday, May 11 2024
ಚಾಮರಾಜನಗರ

ಕಾವೇರಿ ಕಿಚ್ಚು: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಪ್ರತಿಭಟನೆ

Cauvery row: Protests in border district of Chamarajanagar
Photo Credit : News Kannada

ಚಾಮರಾಜನಗರ: ರಾಜ್ಯದಲ್ಲಿ ಕಾವೇರಿ ಕಿಚ್ಚು ಹೆಚ್ಚಾಗಿದ್ದು ಗಡಿ ಜಿಲ್ಲೆ ಚಾಮರಾಜನಗರದಲ್ಲೂ ಪ್ರತಿಭಟನೆಯ ಕಾವು ಹೆಚ್ಚಾಗಿದೆ. ಕಳೆದ ಎರಡು ವಾರಗಳಿಂದ ಸಾಲು ಸಾಲು ಪ್ರತಿಭಟನೆ ನಡೆಸಲಾಗ್ತಿದೆ.

ಚಾಮರಾಜನಗರದಲ್ಲಿರುವ ವಿವಿಧ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತಯರು ಶ್ರೀ ಚಾಮರಾಜೇಶ್ವರ ಉದ್ಯಾನವನ ಮುಂಭಾಗದಿಂದ ಶ್ರೀ ಭುವನೇಶ್ವರಿ ವೃತ್ತದವರೆಗೆ ಪಾದಯಾತ್ರೆ ಮೆರವಣಿಗೆ ನಡೆಸಿ ಕೇಂದ್ರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿನ ಏಜೆಂಟ್ ರೀತಿ ವರ್ತನೆ ಮಾಡುತ್ತಿದೆ. ಕರ್ನಾಟಕದಲ್ಲಿ ವಾಡಿಕೆ ಮಳೆಗಿಂತ ಕಡಿಮೆ ಮಳೆಯಾಗಿದೆ, ಕಾವೇರಿ ಕೊಳದ ಜಲಾಶಯಗಳು ಖಾಲಿಯಾಗಿದೆ, ಪರಿಸ್ಥಿತಿ ಹೀಗಿದ್ದರೂ ಪ್ರತಿ ದಿನ ತಮಿಳುನಾಡಿಗೆ 5 ಸಾವಿರ ಕ್ಯೂಸೆಕ್ಸ್ ನೀರು ಬಿಡುವಂತೆ ಸೂಚನೆ ನೀಡಿರುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಮೊದಲಿನಿಂದಲೂ ಕರ್ನಾಟಕಕ್ಕೆ ಅನ್ಯಾಯವಾಗುತ್ತಿದೆ. ಈ ಬಗ್ಗೆ ರಾಜ್ಯದಿಂದ ಲೋಕಸಭೆಗೆ ಆಯ್ಕೆಯಾಗಿರುವ ಸಂಸದರು ಮೌನಹಿಸಿರುವುದು ಸರಿಯಲ್ಲ. ಕೂಡಲೇ ಕೇಂದ್ರ ಸರ್ಕಾರವು ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಮಧ್ಯಸ್ಥಿಕೆ ವಹಿಸಿ ಶಾಶ್ವತ ಪರಿಹಾರ ಕಂಡುಕೊಳ್ಳದೇ ಹೋದರೆ ಕರ್ನಾಟಕ ತಮಿಳುನಾಡು ರಾಜ್ಯಗಳ ನಡುವೆ ಸಾಮರಸ್ಯ ಹದಗೆಡುತ್ತದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು