ಚಾಮರಾಜನಗರ: ಕೆಂದ್ರ ಸರ್ಕಾರ ರೈತ ವಿರೋಧಿ ನೀತಿಯನ್ನ ಅನುಸರಿಸುತ್ತಿದೆ ಎಂದು ಪಟ್ಟಣದಲ್ಲಿ ರೈತ ಸಂಘಟನೆ ಸದಸ್ಯರು ಸಾಮೂಹಿಕ ನಾಯಕತ್ವದಡಿ ಗುಂಡ್ಲುಪೇಟೆ ಮತ್ತು ಹನೂರಿನಲ್ಲಿ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.
ಪಟ್ಟಣದ ಪ್ರವಾಸೀಮಂದಿರದಿಂದ ಹೊರಟ ಪ್ರತಿಭಟನಕಾರರು ರಾಷ್ಟ್ರೀಯ ಹೆದ್ದಾರಿ ಮೂಲಕ ಸಾಗಿ ಎಂಡಿಸಿಸಿ ಬ್ಯಾಂಕ್ ವೃತ್ತದ ಬಳಿ ಮಾನವ ಸರಪಳಿ ನಿರ್ಮಿಸಿ ಕೇಂದ್ರ ಸರ್ಕಾರದ ವಿರುದ್ಧ ದಿಕ್ಕಾರದ ಘೋಷಣೆಗಳನ್ನ ಕೂಗಿ ಆಕ್ರೋಶ ಹೊರಹಾಕಿದರು.
ರೈತರ ಆದಾಯ ದ್ವಿಗುಣ ಮಾಡುತ್ತೇನೆ ಎಂದು ಅಧಿಕಾರಕ್ಕೆ ಬಂದ ಕೇಂದ್ರ ಸರ್ಕಾರ ರೈತರಿಗೆ ಬೆಂಬಲ ಬೆಲೆ ನೀಡದೆ ರೈತ ವಿರೋಧಿ ಧೋರಣೆ ಅನುಸರಿಸುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದರು.
ಹನೂರು ಪಟ್ಟಣದಲ್ಲೂ ಸಹ ರಸ್ತೆ ತಡೆ ನಡೆಸಿ ಕೇಂದ್ರ ಸರ್ಕಾರದ ವಿರುದ್ದ ಧಿಕ್ಕಾರದ ಘೋಷಣೆಗಳನ್ನ ಕೂಗಿದರು.