News Karnataka Kannada
Wednesday, May 01 2024
ಚಾಮರಾಜನಗರ

ಚಾಮರಾಜನಗರ: ಕಮರಿಗೆ ಉರುಳಿ ಬಿದ್ದ ಕೆಎಸ್ಆರ್ ಟಿಸಿ ಬಸ್, 25 ಜನರಿಗೆ ಗಾಯ

Two-wheeler collides with govt bus, rider killed
Photo Credit : Pixabay

ಚಾಮರಾಜನಗರ: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರೆ ಮುಗಿಸಿಕೊಂಡು ಮನೆಗೆ ಮರಳುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ತಲಬೆಟ್ಟದ ಬಳಿ ಕಮರಿಗೆ ಉರುಳಿ ಬಿದ್ದ ಪರಿಣಾಮ ಕನಿಷ್ಠ 25 ಮಂದಿ ಗಾಯಗೊಂಡಿದ್ದಾರೆ.

ಮಹದೇಶ್ವರ ಬೆಟ್ಟದಿಂದ ತೆರಳುತ್ತಿದ್ದ ಬಸ್ ತಲಬೆಟ್ಟಕ್ಕೆ ಸಮೀಪಿಸುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದಿದೆ. ಘಟನೆಯಲ್ಲಿ 25 ಜನರು ಗಾಯಗೊಂಡಿದ್ದು, ಅವರೆಲ್ಲರನ್ನೂ ಚಿಕಿತ್ಸೆಗಾಗಿ ಕೊಳ್ಳೇಗಾಲ ಉಪವಿಭಾಗೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಸ್ ಚಾಲಕ ಚಂದ್ರಶೇಖರ್, ಕಂಡಕ್ಟರ್ ಪ್ರಕಾಶ್, ಕಾವೇರಿಪುರದ ನಂಜಮ್ಮ ಮತ್ತು ಹೊನ್ನೂರು ಗ್ರಾಮದ ರಾಮಚಂದ್ರ ಅವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಮೈಸೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು