News Karnataka Kannada
Monday, May 20 2024
ಚಾಮರಾಜನಗರ

ಚಾಮರಾಜನಗರ: ಮಹದೇಶ್ವರ ಸ್ವಾಮಿ ಹೆಸರಿನ ಫೇಸ್ ಬುಕ್ ಪೇಜ್ ನಲ್ಲಿ ಅಶ್ಲೀಲ ವಿಡಿಯೋ

Chamarajanagar: A facebook page in the name of Mahadeshwara Swamy has gone viral on social media.
Photo Credit : Facebook

ಚಾಮರಾಜನಗರ: ಲಕ್ಷಾಂತರ ಭಕ್ತರ ಪರಮ ದೈವ ‘ಶ್ರೀಮಲೆ ಮಹದೇಶ್ವರ ಸ್ವಾಮಿಯ ಹೆಸರಿನಲ್ಲಿ ಫೇಸ್ ಬುಕ್ ಪೇಜ್ವೊಂದನ್ನು ಸೃಷ್ಟಿಸಲಾಗಿತ್ತು. ಇದರಲ್ಲಿ ಅಶ್ಲೀಲ ವಿಡಿಯೋಗಳು ಅಪ್‌ಲೋಡ್ ಆಗುತ್ತಿದ್ದು, ಇದರಿಂದ ಭಕ್ತರ ಭಾವನೆಗೆ ಧಕ್ಕೆ ಉಂಟಾಗಿದೆ.

ಕೊಳ್ಳೇಗಾಲದ ಸಂಜಯ್‌ಕುಮಾರ್ 2013ರಲ್ಲಿ ಇದನ್ನು ಕ್ರಿಯೇಟ್ ಮಾಡಿದ್ದರು. ಈ ಫೇಜ್‌ಬುಕ್ ಪೇಜ್ನಲ್ಲಿ ಸುಮಾರು 17 ಸಾವಿರ ಅನುಯಾಯಿಗಳಿದ್ದಾರೆ. ಇದರಲ್ಲಿ ದೇವರ ಫೋಟೋಗಳು, ಪೂಜಾ ಕೈಂಕರ್ಯಗಳು ಸೇರಿದಂತೆ ಇತರ ಮಾಹಿತಿಗಳನ್ನು ಅಪ್‌ಲೋಡ್ ಮಾಡಲಾಗುತ್ತಿದೆ. ಆದರೆ ಕಳೆದ ಎರಡು ತಿಂಗಳ ಹಿಂದೆ ಈ ಪೇಜ್ ಅನ್ನು ಹ್ಯಾಕ್ ಮಾಡಲಾಗಿದೆ. ಸ್ಟೋರಿಗಳ ವಿಭಾಗದಲ್ಲಿ ಹುಡುಗಿಯರ ಅಶ್ಲೀಲ ಫೋಟೋ, ವಿಡಿಯೋಗಳನ್ನು ಹಾಕಲಾಗುತ್ತಿದೆ. ಫೇಸ್‌ಬುಕ್ ಪೇಜ್ ಹ್ಯಾಕ್ ಆದ ಮರು ದಿನವೇ ಅಡ್ಮಿನ್ ಸಂಜಯ್‌ ಕುಮಾರ್ ಸೈಬರ್ ಕ್ರೈಂಗೆ ದೂರು ನೀಡಿರುವುದಾಗಿ ತಿಳಿಸಿದ್ದಾರೆ. 30 ಜನರಿಂದ ಈ ಪೇಜ್ ವಿರುದ್ಧ ರಿಪೋರ್ಟ್ ಮಾಡಿಸುವಂತೆ ಪೊಲೀಸರು ಸಂಜಯ್‌ಗೆ ಸಲಹೆ ನೀಡಿದ್ದಾರೆ.

ಇದುವರೆಗೆ 5 ಜನರಿಂದ ಸಂಜಯ್ ರಿಪೋರ್ಟ್ ಮಾಡಿಸಿದ್ದಾರೆ. ಹಾಗಾಗಿ ಹ್ಯಾಕ್ ಆಗಿರುವ ಪೇಜ್ ಅನ್ನು ಡೀ ಆ್ಯಕ್ಟಿವ್ ಮಾಡಲು ಸಾಧ್ಯವಾಗುತ್ತಿಲ್ಲ. ಪೊಲೀಸರು ಈ ಕುರಿತು ತಕ್ಷಣ ಕ್ರಮ ಕೈಗೊಳ್ಳಬೇಕಾಗಿದೆ. ತಾನು ಕ್ರಿಯೇಟ್ ಮಾಡಿದ್ದ ಫೇಸ್‌ಬುಕ್ ಪೇಜ್ ಹ್ಯಾಕ್ ಆಗಿದೆ. ಈ ಬಗ್ಗೆ ದೂರು ಸಲ್ಲಿಸಿದ್ದರೂ ಕ್ರಮವಹಿಸಿಲ್ಲ. ಅದರಲ್ಲಿ ಅಶ್ಲೀಲ ಫೋಟೋ, ವಿಡಿಯೋಗಳು ಅಪ್‌ ಲೋಡ್ ಆಗುತ್ತಿವೆ. ಹ್ಯಾಕ್ ಆಗಿರುವ ಬಗ್ಗೆ ತಿಳಿದ ಜನರು ನನಗೆ ಕರೆ ಮಾಡಿ ಬೈಯುತ್ತಿದ್ದಾರೆ ಎಂದು ಅಳಲು ತೋಡಿಕೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು