ಚಾಮರಾಜನಗರ: ಜಿಲ್ಲಾಡಳಿತದ ಕಾರ್ಯ ವೈಖರಿ ವೀಕ್ಷಣೆಗೆ ವಿದ್ಯಾರ್ಥಿನಿ ಜೆ. ಅಗ್ನೀಶ್ ಸಾರ’ಗೆ ಅವಕಾಶ

ಚಾಮರಾಜನಗರ: ವಿಶ್ವ ಯುವ ಕೌಶಲ್ಯ ದಿನಾಚರಣೆಯ ಅಂಗವಾಗಿ ನಡೆಸಲಾದ ಪ್ರಬಂಧ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ಕೊಳ್ಳೇಗಾಲದ ಜೆ.ಎಸ್.ಎಸ್. ಮಹಿಳಾ ಕಾಲೇಜಿನ ವಿದ್ಯಾರ್ಥಿನಿ ಜೆ. ಅಗ್ನೀಶ್ ಸಾರ ಅವರಿಗೆ ಇಂದು ಇಡೀ ದಿನ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರೊಂದಿಗೆ ಇದ್ದು ಜಿಲ್ಲಾಡಳಿತದ ಕಾರ್ಯ ವೈಖರಿ ವೀಕ್ಷಣೆಗೆ ಅವಕಾಶ ದೊರೆಯಿತು.

ಪ್ರಥಮ ಬಿ.ಕಾಂ ವಿದ್ಯಾರ್ಥಿನಿಯಾಗಿರುವ ಜೆ. ಅಗ್ನೀಶ್ ಸಾರ ಅವರನ್ನು ಜಿಲ್ಲಾಧಿಕಾರಿಗಳೊಂದಿಗೆ ಒಂದು ದಿನ ಎಂಬ ಕಾರ್ಯಕ್ರಮಕ್ಕೆ ಜಿಲ್ಲಾ ಕೌಶಲ್ಯ ಅಭಿವೃದ್ದಿ, ಉದ್ಯಮ ಶೀಲತೆ ಮತ್ತು ಜೀವನೋಪಾಯ ಇಲಾಖೆ ಆಯ್ಕೆ ಮಾಡಿತ್ತು. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಯವರೊಂದಿಗೆ ಇದ್ದು ಜಿಲ್ಲಾಧಿಕಾರಿಯವರ ದಿನದ ಎಲ್ಲಾ ಕಾರ್ಯ ಚಟುವಟಿಕೆಗಳಲ್ಲಿ ಭಾಗವಹಿಸಿ ಜಿಲ್ಲಾಧಿಕಾರಿಯವರ ಆಡಳಿತ ಕಾರ್ಯ ಚಟುವಟಿಕೆಗಳನ್ನು ಜೊತೆಯಲ್ಲೇ ಇದ್ದು ನೋಡುವ ಅವಿಸ್ಮರಣೀಯ ಅವಕಾಶ ಲಭಿಸಿತು.

ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿ ಕಚೇರಿಗೆ ಪೋಷಕರೊಂದಿಗೆ ಆಗಮಿಸಿದ ಅಗ್ನೀಶ್ ಸಾರ ಅವರನ್ನು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಹೂಗುಚ್ಚ ನೀಡಿ ಸ್ವಾಗತಿಸಿದರು. ಆತ್ಮೀಯವಾಗಿ ಮಾತನಾಡಿದ ಜಿಲ್ಲಾಧಿಕಾರಿ ಮುಂದೆ ಏನಾಗಬೇಕೆಂದು ಬಯಸಿದ್ದೀರ ಎಂದು ಅಗ್ನೀಶ್ ಸಾರ ಅವರನ್ನು ಪ್ರಶ್ನಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಅಗ್ನೀಶ್ ಸಾರ ಚಾರ್ಟೆಡ್ ಅಕೌಂಟೆಂಟ್ ಆಗಬೇಕು ಎಂದು ಕೊಂಡಿದ್ದೇನೆ ಎಂದರು.

ಬಳಿಕ ಜಿಲ್ಲಾಧಿಕಾರಿಯವರೊಂದಿಗೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ವಾಲ್ಮೀಕಿ ಭವನ ನಿರ್ವಹಣಾ ಸಮಿತಿ, ಗಿರಿಜನರ ಶೈಕ್ಷಣಿಕ ಅಭಿವೃದ್ದಿ ಸಂಬಂದ ಸಭೆ, ದಸರಾ, ಮಹಾಲಯ ಅಮವಾಸ್ಯೆ, ದೀಪಾವಳಿ ಜಾತ್ರೆ ಪೂರ್ವಭಾವಿ ಸಭೆ ಸೇರಿದಂತೆ ಇತರೆ ಸಭೆಗಳಲ್ಲಿ ಅಗ್ನೀಶ್ ಸಾರ ಅವರು ಜಿಲ್ಲಾಧಿಕಾರಿ ಪಕ್ಕದಲ್ಲೇ ಕುಳಿತು ವೀಕ್ಷಿಸಿದರು. ಸಭೆ ಸಂದರ್ಭದಲ್ಲಿ ಟಿಪ್ಪಣಿ ಸಹ ಮಾಡಿಕೊಳ್ಳುತ್ತಿದ್ದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿಯೂ ಜಿಲ್ಲಾಧಿಕಾರಿಯವರೊಂದಿಗಿದ್ದು ಹತ್ತಿರದಿಂದ ಆಡಳಿತ ಕಾರ್ಯಗಳನ್ನು ವೀಕ್ಷಿಸಿದರು. ಸಭೆಗಳ ಬಳಿಕ ಸಂಜೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಅಗ್ನೀಶ್ ಸಾರ ಅವರನ್ನು ಸನ್ಮಾನಿಸಿ ಆತ್ಮೀಯವಾಗಿ ಬೀಳ್ಕೊಟ್ಟರು. ಮುಂದಿನ ಭವಿಷ್ಯ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.

Gayathri SG

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

2 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

2 hours ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

3 hours ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

3 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

3 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

4 hours ago