ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ದೇವಸ್ಥಾನದಲ್ಲಿ ಕಳೆದ 34 ದಿನಗಳಲ್ಲಿ 2.59 ಕೋಟಿ ರೂ.ಗಳ ಹುಂಡಿ ಕಾಣಿಕೆ ಸಂಗ್ರಹವಾಗಿದೆ.
ದೇವಾಲಯ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಹನೂರು ಬಸ್ ನಿಲ್ದಾಣದ ಶಾಪಿಂಗ್ ಕಾಂಪ್ಲೆಕ್ಸ್ ನಲ್ಲಿ ಸಿಸಿ ಟಿವಿ ಸರ್ವೆಲೆನ್ಸ್ ನಡುವೆ ಕಾಣಿಕೆಗಳನ್ನು ಎಣಿಸಿದರು.
ಮಲೆ ಮಹದೇಶ್ವರ ದೇವಾಲಯವು ದಕ್ಷಿಣ ಭಾರತದ ಪ್ರಸಿದ್ಧ ದೇವಾಲಯವಾಗಿದೆ. ಚಾಮರಾಜನಗರ ಜಿಲ್ಲೆಯಲ್ಲಿದೆ. ಒಟ್ಟು 2 ಕೋಟಿ 59 ಲಕ್ಷ 31 ಸಾವಿರದ 472 ಮತ್ತು 80 ಗ್ರಾಂ ಚಿನ್ನ ಮತ್ತು 3,900 ಗ್ರಾಂ ಬೆಳ್ಳಿಯನ್ನು ಭಕ್ತರು ಅರ್ಪಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.