ಚಾಮರಾಜನಗರ

ಚಾಮರಾಜನಗರ: ಸ್ವಂತ ಶಕ್ತಿ ಮೇಲೆ ಅಧಿಕಾರಕ್ಕೆ ಬಿಜೆಪಿ-ಸಂಸದ ವಿ.ಶ್ರೀನಿವಾಸಪ್ರಸಾದ್

ಚಾಮರಾಜನಗರ: ರಾಜ್ಯದಲ್ಲಿ ಬಿಜೆಪಿ ಸ್ವಂತ ಶಕ್ತಿ ಮೇಲೆ ಅಧಿಕಾರಕ್ಕೆ ಬರಲಿದೆ ಎಂದು ಸಂಸದ ವಿ.ಶ್ರೀನಿವಾಸಪ್ರಸಾದ್ ವಿಶ್ವಾಸ ವ್ಯಕ್ತಪಡಿಸಿದರು.

ನಗರದ ಜಿಲ್ಲಾ ನೂತನ ಬಿಜೆಪಿ ಕಚೇರಿಯಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಚಾಮರಾಜನಗರ ಕ್ಷೇತ್ರದಲ್ಲಿ ಬಿಜೆಪಿಗೆ ಉತ್ತಮ ವಾತಾವರಣವಿದೆ. ಪಕ್ಷದ ಮುಖಂಡರು, ಕಾರ್ಯಕರ್ತರು ಒಟ್ಟಾಗಿ ಸೋಮಣ್ಣ ಗೆಲುವಿಗೆ ಶ್ರಮವಹಿಸುತ್ತಿದ್ದಾರೆ. ವಿ.ಸೋಮಣ್ಣ ಅವರನ್ನು ಅತ್ಯಧಿಕ ಮತಗಳಿಂದ ಗೆಲ್ಲಿಸಿಕೊಡಬೇಕು ಎಂದು ಮತದಾರರಲ್ಲಿ ಮನವಿ ಮಾಡಿದರು.

ಸಿದ್ದರಾಮಯ್ಯಗೆ ಮಜಾ ಮಾಡಲು ಮುಖ್ಯಮಂತ್ರಿ ಸ್ಥಾನಬೇಕು. ನಿನ್ನ ಬೆನ್ನು ಹಿಂದೆ ನಿಂತು ನಾನು ಸಹಾಯ ಮಾಡಿದೆ. ಸಚಿವ ಸಂಪುಟ ಪುನರ್ ರಚನೆ ನೆಪದಲ್ಲಿ ನನ್ನನ್ನು ಮಂತ್ರಿ ಸ್ಥಾನದಿಂದ ಕಿತ್ತು ಹಾಕಿ ಮನಸ್ಸಿಗೆ ಗಾಯ ಮಾಡಿದೆ. ನಂಜನಗೂಡು ಉಪ ಚುನಾವಣೆಯಲ್ಲಿ ಸೋಲಿಸಿದ್ದೀರಿ. ನಾನು ಧೃತಿಗೆಡಲಿಲ್ಲ. ಆದರೆ ಚಾಮುಂಡೇಶ್ವರ ಕ್ಷೇತ್ರದಲ್ಲಿ ನಿಮ್ಮನ್ನು ಸೋಲಿಸಿದೆ. ನಂಜನಗೂಡು ಕ್ಷೇತ್ರದಲ್ಲಿ ನನ್ನ ಅಳಿಯ ಹರ್ಷವರ್ಧನ್ ನ್ನು 10 ಸಾವಿರ ಮತಗಳಿಂದ ಗೆಲ್ಲಿಸಿದೆ. ಲೋಕಸಭಾ ಚುನಾವಣೆಯಲ್ಲಿ ಗೆಲ್ಲಿದ್ದೇನೆ ಎಂದರು.

ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಮಾತನಾಡಿ, ನನ್ನ ಮಗನನ್ನು ಶಾಸಕನಾಗಿಸಲು ನಾನು ಇಲ್ಲಿಗೆ ಬಂದಿಲ್ಲ. ಮಕ್ಕಳನ್ನು ರಾಜಕೀಯಕ್ಕೆ ತರಲ್ಲ. ಚಾಮರಾಜನಗರದಲ್ಲಿ ಮನೆ ಮಾಡಿದ್ದೇನೆ. ರಾತ್ರಿಹಗಲು ಕೆಲಸ ಮಾಡುತ್ತೇನೆ. ನನ್ನ ಚಿತ್ತ ಚಾಮರಾಜನಗರದ ಅಭಿವೃದ್ದಿಯಾಗಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ನಾರಾಯಣಪ್ರಸಾದ್ ಹಾಜರಿದ್ದರು

Sushma K

Recent Posts

ದುರಸ್ತಿ ಮಾಡಿ ವಾರ ಕಳೆಯುವ ಮೊದಲೇ ಕಿತ್ತು ಬಂದ ರಸ್ತೆ

ಪಟ್ಟಣದ ಬಸವಕಲ್ಯಾಣ-ಭಾಲ್ಕಿ ಮುಖ್ಯ ರಸ್ತೆ ಸಂಪೂರ್ಣ ಕೆಟ್ಟು ಹೋಗಿದೆ. ವಾರದ ಹಿಂದೆ ರಸ್ತೆ ದುರಸ್ತಿ ಕಾಮಗಾರಿ ಮಾಡಲಾಗಿದ್ದು, ವಾರ ಕಳೆಯುವ…

6 mins ago

ಬಿರುಗಾಳಿ ಸಹಿತ ಮಳೆಗೆ ಕಬ್ಬಿಣದ ಬಸವ ಮಹಾದ್ವಾರ ಕುಸಿತ

ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದ ಬಸವ ಮಹಾದ್ವಾರ ಗುರುವಾರ ಸುರಿದ ಬಿರುಗಾಳಿ ಸಹಿತ ಮಳೆಗೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ…

19 mins ago

ನೂರಕ್ಕೆ ನೂರು ‘ಇಂಡಿಯಾ’ ಮೈತ್ರಿಗೆ ಅಧಿಕಾರ: ಈಶ್ವರ ಖಂಡ್ರೆ

'ದೇಶದಲ್ಲಿ ಈ ಸಲ 'ಇಂಡಿಯಾ' ಒಕ್ಕೂಟ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ' ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ…

23 mins ago

ನಾನು ಶೀಘ್ರದಲ್ಲೇ ಪಾಕಿಸ್ತಾನಕ್ಕೆ ಭೇಟಿ ನೀಡುತ್ತೇನೆ ಎಂದ ವಿರಾಟ್​​ ಕೊಹ್ಲಿ

ವಿರಾಟ್​​ ಕೊಹ್ಲಿ ಶೀಘ್ರದಲ್ಲೇ ಪಾಕಿಸ್ತಾನಕ್ಕೆ ಭೇಟಿ ನೀಡುತ್ತೇನೆ ಎಂದು ಹೇಳಿದ್ದಾರೆ. ಅವರು ಹೇಳಿರುವ ಆಡಿಯೋ ಸಮೇತ ದೃಶ್ಯ ವೈರಲ್​ ಆಗಿದೆ. 

38 mins ago

ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಮಹಿಳೆಯ ತಲೆ ಸಿಕ್ಕಿಕೊಂಡು ಪರದಾಟ

ಕೆಎಸ್‌ಆರ್‌ಟಿಸಿ ಬಸ್‌ ನ ಕಿಟಕಿಯಿಂದ ಉಗುಳಲು ಹೋಗಿ ಮಹಿಳೆಯೊಬ್ಬರ ತಲೆ ಸಿಕ್ಕಿಕೊಂಡಿರುವ ಘಟನೆ ನಡೆದಿದೆ.

60 mins ago

92ನೇ ಜನ್ಮದಿನ ಆಚರಿಸಿಕೊಳ್ಳದಿರಲು ಎಚ್‌.ಡಿ. ದೇವೇಗೌಡರ ನಿರ್ಧಾರ!

ಇದೇ ತಿಂಗಳ 18 ರಂದು 92ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರು ಈ ಬಾರಿ ಹುಟ್ಟುಹಬ್ಬ…

1 hour ago