News Karnataka Kannada
Tuesday, April 23 2024
Cricket
ಚಾಮರಾಜನಗರ

ಚಾಮರಾಜನಗರ: ಮಲೇರಿಯಾ ಹರಡದಂತೆ ಎಚ್ಚರ ವಹಿಸಬೇಕು – ಡಾ. ಕಾಂತರಾಜ್

Care should be taken to prevent the spread of malaria. Kantharaj
Photo Credit : By Author

ಚಾಮರಾಜನಗರ: ಪ್ರಾಥಮಿಕ ಆರೋಗ್ಯ ಕೇಂದ್ರ ಕಾಗಲವಾಡಿ ವ್ಯಾಪ್ತಿಗೆ ಬರುವ ಆರಣ್ಯ ಮತ್ತು ಗುಡ್ಡಗಾಡು ಪ್ರದೇಶವಾದ ಕನ್ನೇರಿಕಲೋನಿಯಲ್ಲಿ ಜಿಲ್ಲಾ ರೋಗ ವಾಹಕ ಆಶ್ರಿತ ರೋಗಿಗಳ ನಿಯಂತ್ರಣಾಧಿಕಾರಿ ಕಚೇರಿ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ ಕಾಗಲವಾಡಿ ಇವರ ಸಂಯುಕ್ತಾಶ್ರಯದಲ್ಲಿ ಮಲೇರಿಯಾ ವಿರೋಧಿ ಮಾಸಚರಣೆ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿದ ಜಿಲ್ಲಾ ರೋಗ ವಾಹಕ ಆಶ್ರಿತ ರೋಗಿಗಳ ನಿಯಂತ್ರಣಾಧಿಕಾರಿ ಡಾ. ಕಾಂತರಾಜ್ ಮಾಹಿತಿ ನೀಡಿದರು.

ಸೊಳ್ಳೆಗಳಿಂದ ಪ್ರಸಾರವಾಗುವ ರೋಗಗಳಲ್ಲಿ ಮಲೇರಿಯಾ ರೋಗವು ಕೂಡ ಒಂದು. ಇದು ಪ್ಲಾಸ್ಮೋಡಿಯಾ ಎಂಬ ಸೂಕ್ಷ್ಮಾಣು ಪರಾವಲಂಬಿ ಮೂಲಕ ಬರುತ್ತದೆ. ಹೆಣ್ಣು ಅನಾಫಿಲಿಸ್ ಸೊಳ್ಳೆಯು ಮಲೇರಿಯಾ ಸೋಂಕಿತ ವ್ಯಕ್ತಿಗೆ ಕಚ್ಚಿ ರಕ್ತ ಹೀರಿ ಆರೋಗ್ಯವಂತ ವ್ಯಕ್ತಿಗೆ ಕಚ್ಚುವುದರಿಂದ ಒಬ್ಬರಿಂದ ಒಬ್ಬರಿಗೆ ಹರಡುತ್ತದೆ. ಮಲೇರಿಯಾ ರೋಗ ಲಕ್ಷ ಣಗಳಲ್ಲಿ ಮೊದಲು ಚಳಿ ನಂತರ ವಿಪರೀತ ಜ್ವರ ಬಂದು ಕೊನೆಗೆ ಬೆವರುವಿಕೆಯಿಂದ ಆರಾಮ ಎನಿಸುತ್ತದೆ. ಇದೇ ಲಕ್ಷ ಣಗಳು ಪುನರಾವರ್ತನೆಗೊಳ್ಳುತ್ತದೆ. ಇದೇ ಅವಧಿಯಲ್ಲಿ ರಕ್ತ ಲೇಪನವನ್ನು ತೆಗೆದು ಪರೀಕ್ಷೆ ಮಾಡಿದಾಗ ಮಲೇರಿಯಾ ರೋಗವೆಂದು ಖಚಿತ ಪಡಿಸಬಹುದು ಎಂದು ಹೇಳಿದರು.

ಮಲೇರಿಯಾ ರೋಗವೆಂದು ಖಚಿತಪಟ್ಟಾಗ 14 ದಿನಗಳವರೆಗೆ ಕ್ಲೋರೋಕ್ವಿನ್ ಮಾತ್ರೆ ಮತ್ತೆ ಸೊಳ್ಳೆ ಪರದೆಗಳನ್ನು ಉಪಯೋಗಿಸುವಂತೆ ಜನರಿಗೆ ತಿಳಿಸಿದರು. ಸಾರ್ವಜನಿಕರು ಯಾವುದೇ ಜ್ವರ ಬಂದಾಗ ಆರೋಗ್ಯ ಸಹಾಯಕರ ಹತ್ತಿರ ಅಥವಾ ಆಶಾ ಕಾರ್ಯಕರ್ತೆಯರಲ್ಲಿ ರಕ್ತಲೇಪನ ಮಾಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಜನಾರ್ಧನ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಸೊಳ್ಳೆಗಳಿಂದ ಮಲೇರಿಯಾ ಡೆಂಗ್ಯು ಚಿಕುನ್‌ಗುನ್ಯಾ ಮೆದುಳು ಜ್ವರ ಹಾಗೂ ಆನೆಕಾಲು ರೋಗ ಮುಂತಾದ ಹಲವಾರು ಕಾಯಿಲೆ ಹರಡುತ್ತಿದ್ದು, ಸೊಳ್ಳೆ ನಿಯಂತ್ರಣ ಮಾಡಿದಲ್ಲಿ ಇಂತಹ ಕಾಯಿಲೆಗಳನ್ನು ತಡೆಗಟ್ಟಬಹುದಾಗಿದೆ ಎಂದು ಹೇಳಿದರು.

ಮಲೇರಿಯಾ ರೋಗವನ್ನು ಸಂಪೂರ್ಣ ನಿಯಂತ್ರಿಸುವಲ್ಲಿ 2025 ರೊಳಗೆ ಮಲೇರಿಯಾ ನಿರ್ಮೂಲನೆಗೆ ಪಣ ತೊಡೊಣ, ಮಲೇರಿಯಾ ಮುಕ್ತ ಸಮಾಜ ನಿರ್ಮಿಸೋಣ ಮತ್ತು ಒಳಿತಿಗಾಗಿ ಮಲೇರಿಯಾ ಕೊನೆಗೊಳಿಸೋಣ ಎಂಬ ಈ ಸಾಲಿನ ಘೋಷಣೆ ಹೇಳುತ್ತಾ ಮನೆ ಸುತ್ತಲಿನ ಪರಿಸರ ಸ್ವಚ್ಚವಾಗಿಟ್ಟುಕೊಳ್ಳುವುದರ ಜೊತೆಗೆ ಮನೆಯಲ್ಲಿ ಮತ್ತು ಮನೆ ಸುತ್ತಮುತ್ತ ಸೊಳ್ಳೆಗಳು ನಿಂತ ನೀರಿನಲ್ಲಿ ಮೊಟ್ಟೆ ಇಟ್ಟು ಸಂತಾನೋತ್ಪತ್ತಿ ಮಾಡುತ್ತವೆ. ಸೊಳ್ಳೆಗಳ ಸಂತತಿ ಕಡಿಮೆ ಮಾಡಲು ಪರಿಸರದಲ್ಲಿ ಹಾಗೂ ಮನೆಯ ಸುತ್ತಮುತ್ತಲೂ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ಸ್ವಯಂ ರಕ್ಷಣಾ ವಿಧಾನಗಳಾದ ಸೊಳ್ಳೆ ಪರದೆ, ಬೇವಿನ ಸೊಪ್ಪಿನ ಹೊಗೆ, ಸೊಳ್ಳೆ ಬತ್ತಿ ಹಾಗೂ ಸೊಳ್ಳೆ ಬ್ಯಾಟ್ ಮುಖಾಂತರ ಸೊಳ್ಳೆಗಳನ್ನು ನಿಯಂತ್ರಿಸಬಹುದೆಂದರು. ಲಾರ್ವ ಸರ್ವೆ ಮಾಡಲು ಗ್ರಾಮಗಳ ಮನೆಮನೆಗೆ ಬಂದಾಗ ಆರೋಗ್ಯ ಇಲಾಖೆಯ ಸಿಬ್ಬಂದಿಗಳಿಗೆ ಸಹಕಾರ ನೀಡಬೇಕು. ಕಾಡಂಚಿನ ಜನರು ಆರೋಗ್ಯದ ಬಗ್ಗೆ ಹೆಚ್ಚು ಗಮನವಹಿಸಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ವಾಹಕ ಆಶ್ರಿತ ರೋಗಿಗಳ ನಿಯಂತ್ರಣಾಧಿಕಾರಿ ಕಚೇರಿಯ ಸಿಬ್ಬಂದಿ ವರ್ಗ ಮತ್ತು ಕಾಗಲವಾಡಿ ಪ್ರಾಥಮಿಕ ಆರೋಗ್ಯ ಕೇಂದ ಶಶ್ರೂಷಕರು ಮತ್ತು ನೌಕರರು ಹಾಜರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು