ಚಾಮರಾಜನಗರ

ಚಾಮರಾಜನಗರ: ರೈತರ ಸಂಕಷ್ಟ ಆಲಿಸಿದ ಜಿಲ್ಲಾಧಿಕಾರಿ ಚಾರುಲತಾ ಸೋಮಲ್

ಚಾಮರಾಜನಗರ: ಜಿಲ್ಲೆಯಲ್ಲಿ ಸತತವಾಗಿ ಸುರಿದಿರುವ ಮಳೆ ಹಾಗೂ ಇದರಿಂದ ಸಂಭವಿಸಿರುವ ಬೆಳೆಹಾನಿ ಬಗ್ಗೆ ವೈಜ್ಞಾನಿಕವಾಗಿ ಸಮೀಕ್ಷೆ ನಡೆಸಿ ರೈತರು, ಬೆಳೆಗಾರರಿಗೆ ಆಗಿರುವ ನಷ್ಟವನ್ನು ಸಮರ್ಪಕವಾಗಿ ನೀಡುವುದು,ಭತ್ತ ಖರೀದಿ ಕೇಂದ್ರ ಆರಂಭ, ಕಬ್ಬಿಗೆ ಸರಿಯಾದ ಬೆಲೆ ನಿಗದಿ ಸೇರಿದಂತೆ ವಿವಿಧ ಸಮಸ್ಯೆಗಳ ಸಂಬಂಧ ರೈತ ಮುಖಂಡರ ಜತೆ ಸಭೆ ನಡೆಸಿ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಮಾಹಿತಿ ಪಡೆದುಕೊಂಡಿದ್ದಾರೆ.

ವಸತಿ, ಮೂಲಸೌಲಭ್ಯ ಅಭಿವೃದ್ದಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರ ಅಧ್ಯಕ್ಷತೆಯಲ್ಲಿ ಅಕ್ಟೋಬರ್ 22ರಂದು ರೈತರ ಸಮಸ್ಯೆಗಳ ಕುರಿತು ಚರ್ಚೆಗಾಗಿ ಸಭೆ ಕರೆದಿರುವ ಹಿನ್ನೆಲೆಯಲ್ಲಿ ಪೂರ್ವಭಾವಿಯಾಗಿ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸಭೆ ನಡೆಸಲಾಗಿದ್ದು, ಮಳೆಯಿಂದಾಗಿ ಸಾಕಷ್ಟು ಪ್ರಮಾಣದಲ್ಲಿ ಬೆಳೆ ನಷ್ಟ ಉಂಟಾಗಿದೆ.

ಬಿತ್ತನೆಯಾಗದೇ ರೈತರು ಸಾಕಷ್ಟು ತೊಂದರೆಗೆ ಒಳಗಾಗಿದ್ದಾರೆ. ಸಮರ್ಪಕವಾಗಿ ಬೆಳೆ ಪರಿಹಾರ ನೀಡಬೇಕಿದೆ ಎಂದು ರೈತ ಮುಖಂಡರಾದ ಹೊನ್ನೂರು ಪ್ರಕಾಶ್ ಅವರು ಜಿಲ್ಲಾಧಿಕಾರಿಗಳ ಗಮನ ಸೆಳೆದರಲ್ಲದೆ, ಕಬ್ಬಿನ ಖರೀದಿಗೆ ಸರಿಯಾದ ಬೆಲೆ ನೀಡಬೇಕು. ಭತ್ತ ಖರೀದಿ ಕೇಂದ್ರವನ್ನು ಮುಂಚಿತವಾಗಿ ಆರಂಭಿಸಬೇಕು. ವಿದ್ಯುತ್ ಬಾಕಿ ಮನ್ನಾ ಸಂಬಂಧ ಪ್ರಸ್ತಾಪಿಸಿದ ರೈತ ಮುಖಂಡರು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದಿಂದ ಬಾಕಿ ಪಾವತಿಸುವಂತೆ ಒತ್ತಾಯ ಮಾಡಲಾಗುತ್ತಿರುವ ಬಗ್ಗೆಯೂ ತಿಳಿಸಿದರು.

ಕಾಡುಪ್ರಾಣಿಗಳಿಂದ ಆಗುತ್ತಿರುವ ಬೆಳೆ ನಷ್ಟವನ್ನು ತಪ್ಪಿಸಬೇಕು. ಅರಣ್ಯ ಇಲಾಖೆ ಕಾಡುಪ್ರಾಣಿಗಳಿಂದ ಉಂಟಾದ ಬೆಳೆಹಾನಿಗೆ ನೀಡುವ ಪರಿಹಾರ ವೈಜ್ಞಾನಿಕವಾಗಿರಬೇಕು. ಪೌತಿ ಖಾತೆ ವಿಳಂಬ ಮಾಡಬಾರದು ಎಂಬುದು ಸೇರಿದಂತೆ ಹಲವಾರು ವಿಷಯಗಳನ್ನು ರೈತ ಮುಖಂಡರು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು.

ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ರೈತರ ಸಮಸ್ಯೆಗಳ ಬಗ್ಗೆ ಸಭೆಯಲ್ಲಿ ಪ್ರಸ್ತಾಪಿಸಿರುವ ಹಾಗೂ ಚರ್ಚಿಸಲಾಗಿರುವ ಎಲ್ಲಾ ವಿಷಯಗಳಿಗೆ ಸಂಬಂಧಿಸಿದಂತೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ವರದಿ ಸಲ್ಲಿಸಬೇಕೆಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಸಭೆಯಲ್ಲಿ ಜಿಪಂ ಸಿಇಓ ಕೆ.ಎಂ. ಗಾಯತ್ರಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್. ಸುಂದರರಾಜು, ರೈತ ಮುಖಂಡರಾದ ಡಾ. ಗುರುಪ್ರಸಾದ್, ಹಳ್ಳಿಕೆರೆಹುಂಡಿ ಭಾಗ್ಯರಾಜ್, ಹೆಬ್ಬಸೂರು ಬಸವಣ್ಣ, ಹೊನ್ನೂರು ಬಸವಣ್ಣ, ಶೈಲೇಶ್, ಜ್ಯೋತಿಗೌಡನಪುರದ ಸಿದ್ದರಾಜು, ಇತರೆ ಮುಖಂಡರು, ಮಲೈ ಮಹದೇಶ್ವರ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ. ಸಂತೋಷ್‍ಕುಮಾರ್, ಬಿ.ಆರ್.ಟಿ. ಹುಲಿ ಸಂರಕ್ಷಿತ ಪ್ರದೇಶದ ಉಪ ಅರಣ್ಯ ಸಂರಕ್ಷಣಾಧಿಕಾರಿ ದೀಪಾ ಜೆ. ಕಂಟ್ರಾಕ್ಟರ್, ಜಂಟಿ ಕೃಷಿ ನಿರ್ದೇಶಕರಾದ ಮಧುಸೂಧನ್, ತಹಶೀಲ್ದಾರ್ ಬಸವರಾಜು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

Ashika S

Recent Posts

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

4 mins ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

15 mins ago

ಬೀದರ್: ಸಾಯಿಜ್ಞಾನ ಪಬ್ಲಿಕ್ ಶಾಲೆಗೆ ಶೇ. 100 ಫಲಿತಾಂಶ

ಸಾಯಿಜ್ಞಾನ ಪಬ್ಲಿಕ್ ಶಾಲೆಯು ಪ್ರಸಕ್ತ ಸಾಲಿನ ಸಿಬಿಎಸ್‍ಇ 10ನೇ ತರಗತಿ ಪರೀಕ್ಷೆಯಲ್ಲಿ ಶೇ 100ಕ್ಕೆ 100 ರಷ್ಟು ಫಲಿತಾಂಶ ಪಡೆದಿದೆ.…

52 mins ago

ಎಸಿಯಲ್ಲಿ ಬೆಂಕಿ: ತುರ್ತು ಭೂಸ್ಪರ್ಶ ಮಾಡಿದ ಏರ್ ಇಂಡಿಯಾ ವಿಮಾನ

ಎಸಿಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಬೆಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನ ದೆಹಲಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.

1 hour ago

ಹೊಳೆಯಲ್ಲಿ ಸ್ನಾನ ಮಾಡಲು ಹೋಗಿ ಇಬ್ಬರು ಮೃತ್ಯು

ಹೊಳೆಯಲ್ಲಿ ಮುಳುಗಿ ಇಬ್ಬರು ಮೃತಪಟ್ಟಿರುವ ಘಟನೆ ಇಂದು ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಕಡವಿನಕಟ್ಟೆಯಲ್ಲಿ ನಡೆದಿದೆ.

2 hours ago

ರಸ್ತೆ ತಿರುವಿನ ಅಪಾಯಕಾರಿ ವಿದ್ಯುತ್ ತಂತಿಗಳು: ಸುರಕ್ಷಿತ ಎತ್ತರಕ್ಕೆ ಏರಿಕೆ

ಸಾಣೂರಿನ ಲೈನ್ ಮ್ಯಾನ್  ಸುಭಾಷ್ ರವರು ತಮ್ಮ ತಂಡದೊಂದಿಗೆ ಮೇ 17 ರಂದು ಮುರತಂಗಡಿ ಇರುವತ್ತೂರು ರಸ್ತೆ ತಿರುವಿನಲ್ಲಿರುವ ವಿದ್ಯುತ್…

2 hours ago