ಚಾಮರಾಜನಗರ: ಲೋಕಾಯುಕ್ತ ಬಲೆಗೆ ಬಿದ್ದ ಇಂಜಿನಿಯರ್ ಗಳು

ಚಾಮರಾಜನಗರ: ಸರ್ಕಾರಿ ಶಾಲಾ ಕಟ್ಟಡದ ಕಾಮಗಾರಿಯ ಬಿಲ್‌ ಮಂಜೂರಾತಿಗಾಗಿ ಗುತ್ತಿಗೆದಾರನ ಬಳಿ ಲಂಚ ಪಡೆದಿದ್ದ  ಇಬ್ಬರು ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ ಗಳು  ಲೋಕಾಯುಕ್ತ ಪೊಲೀಸರು ನಡೆಸಿದ ದಾಳಿ ವೇಳೆ ಹಣದ ಸಹಿತ ಸಿಕ್ಕಿಬಿದ್ದಿದ್ದಾರೆ.

ಚಾಮರಾಜನಗರ ತಾಲ್ಲೂಕಿನ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್‌ ಕೆಂಪರಾಜು ಮತ್ತು ಕಿರಿಯ ಇಂಜಿನಿಯರ್‌ ಮಧುಸೂದನ್‌  ಲೋಕಾಯುಕ್ತ ಬಲೆಗೆ ಬಿದ್ದ ಲಂಚಬಾಕರು. ‌ ಅವರು ಕಾಮಗಾರಿಯ ಬಿಲ್ ಮಂಜೂರು ಮಾಡಲು ಗುತ್ತಿದಾರರ ಬಳಿ ಲಂಚಕ್ಕೆ ಪೀಡಿಸುತ್ತಿದ್ದರು ಎನ್ನಲಾಗಿದೆ.

ಈ ಸಂಬಂಧ ನಗರದ ಸೂರ್ಯ ಬಿಲ್ಡರ್‌ ಅಂಡ್‌ ಡೆವೆಲಪರ್‌ ಸಂಸ್ಥೆಯು ಲೋಕೋಪಯೋಗಿ ಇಲಾಖೆ ಇಂಜಿನಿಯರ್ ವಿರುದ್ಧ ಲೋಕಾಯಕ್ತಕ್ಕೆ ದೂರು ನೀಡಲಾಗಿತ್ತು. ಹೀಗಾಗಿ ಲೋಕಾಯುಕ್ತ ಪೊಲೀಸ್  ಅಧಿಕಾರಿಗಳು ಸನ್ನದ್ಧರಾಗಿದ್ದರು.  ಈ ನಡುವೆ  ಶುಕ್ರವಾರ ಸಂಜೆ ಕಾಮಗಾರಿ ನಡೆದ ಸ್ಥಳದಲ್ಲಿ ಮಧುಸೂದನ್‌ ಅವರು ಗುತ್ತಿಗೆದಾರನಿಂದ 30 ಸಾವಿರ ರೂ ಲಂಚ ಪಡೆದಿದ್ದಾರೆ.  ಆ ನಂತರ ಆ ಹಣವನ್ನು ಕಾರಿನಲ್ಲಿಟ್ಟುಕೊಂಡು ಬರುವ ವೇಳೆ ಕುದೇರು ಚಾಮುಲ್‌ ಘಟಕದ ಬಳಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ ವೇಳೆ ಇಬ್ಬರು ಇಂಜಿನಿಯರ್ ಹಣ ಸಹಿತ ಸಿಕ್ಕಿ ಬಿದ್ದಿದ್ದಾರೆ.

ಚಾಮರಾಜನಗರ ಲೋಕಾಯುಕ್ತ ಡಿವೈಎಸ್‌ಪಿ ಕೆ.ಟಿ.ಮ್ಯಾಥ್ಯೂ ಥಾಮಸ್‌ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.

Ashika S

Recent Posts

ಮತ್ತೆ ಮಳೆಯ ಆರ್ಭಟ; ಶಾಲಾ ಕಾಲೇಜುಗಳಿಗೆ ರಜೆ, ವಿಮಾನ ಹಾರಾಟ ಬಂದ್

ಎಪ್ರಿಲ್ ತಿಂಗಳಲ್ಲಿ ಮಳೆಯ ಆರ್ಭಟಕ್ಕೆ ನಲುಗಿದ್ದ ಯುನೈಟೆಡ್ ಅರಬ್ ಎಮಿರೇಟ್ಸ್ ಮತ್ತೆ ಮಳೆ ಪ್ರಾರಂಭವಾಗಿದೆ. ಮರಳುಗಾಡು ದುಬೈ ಮಳೆಯಿಂದಾಗಿ ತತ್ತರಿಸಿ…

1 min ago

ಯುವಕನಿಗೆ ಲೈಂಗಿಕ ಕಿರುಕುಳ: ವಾಸ್ತು ತಜ್ಞನ ಬಂಧನ

ಯುವಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದಡಿ ವಾಸ್ತುತಜ್ಞನೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.

13 mins ago

ʼತಡರಾತ್ರಿ ತಾಯಿ ಕಾಣೆʼ; ರೇವಣ್ಣನ ವಿರುದ್ಧ ಯವಕನಿಂದ ದೂರು ದಾಖಲು

ಹಾಸನ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹೆಚ್.ಡಿ.ರೇವಣ್ಣಗೆ ಸಂಕಷ್ಟಗಳ ಮೇಲೆ ಸಂಕಷ್ಟ ಎದುರಾಗಿವೆ. ಇದೀಗ ಅವರ ವಿರುದ್ಧ…

20 mins ago

ಧರ್ಮಸ್ಥಳ: ದಾಂಪತ್ಯ ಜೀವನಕ್ಕೆ ಕಾಲಿಟ್ಟ 123 ಜೋಡಿ

ಇಲ್ಲಿ ಬುಧವಾರ ನಡೆದ ಸಾಮೂಹಿಕ ವಿವಾಹದಲ್ಲಿ 39 ಅಂತರ್ಜಾತಿಯ ಜೋಡಿ ಸೇರಿದಂತೆ ಒಟ್ಟು 123 ವಧು–ವರರು ದಾಂಪತ್ಯ ಜೀವನಕ್ಕೆ ಕಾಲಿಟ್ಟರು.…

32 mins ago

ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಅತ್ಯಾಚಾರ ಕೇಸ್ ದಾಖಲು !

ಈಗಾಗಲೇ ಲೈಂಗಿಕ ದೌರ್ಜನ್ಯ, ಕಿರುಕುಳ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ಹೆಚ್​. ಡಿ ರೇವಣ್ಣ ಪುತ್ರ, ಸಂಸದ ಪ್ರಜ್ವಲ್​​ ರೇವಣ್ಣಗೆ…

45 mins ago

ವಿಪರೀತ ಸೆಖೆಯಿದೆ ಎಂದು ಟೆರೇಸ್ ನಲ್ಲಿ ಮಲಗಿದ್ದ ಶಿಕ್ಷಕ ಸಾವು

ವಿಪರೀತ ಸೆಖೆಯಿದೆ ಎಂದು ಮನೆಯ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಸಾವನ್ನಪ್ಪಿದ ಘಟನೆ ಬೆಳಕಿಗೆ ಬಂದಿದೆ.

50 mins ago