News Karnataka Kannada
Wednesday, May 08 2024
ಚಾಮರಾಜನಗರ

ಚಾಮರಾಜನಗರ| ಪ್ರವಾಹ ಪರಿಸ್ಥಿತಿ ಸಾಧ್ಯತೆ: ನದಿ ಪಾತ್ರದ ಜನರಿಗೆ ಡಿಸಿ ಎಚ್ಚರಿಕೆ

Flood situation likely: DC warns people on river banks
Photo Credit :

ಚಾಮರಾಜನಗರ: ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಹೇಮಾವತಿ ಮತ್ತು ಹಾರಂಗಿ ಜಲಾಶಯದಿಂದ ಹೆಚ್ಚಿನ ಪ್ರಮಾಣದಲ್ಲಿ ನೀರು ಕೆ.ಆರ್.ಜಲಾಶಯಕ್ಕೆ  ಹರಿದು ಬರುತ್ತಿರುವುದರಿಂದ ಜಲಾಶಯದಿಂದ ನೀರು ಬಿಟ್ಟಿದ್ದೇ ಆದರೆ ಚಾಮರಾಜನಗರದ ಕೆಲವು ಗ್ರಾಮಗಳಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರುವ ಸಾಧ್ಯತೆ ಇರುವುದರಿಂದ ಕಾವೇರಿ ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ತಿಳಿಸಿದ್ದಾರೆ.

ಈಗಾಗಲೇ ಕೃಷ್ಣರಾಜಸಾಗರ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಕೃಷ್ಣರಾಜಸಾಗರ ಜಲಾಶಯಕ್ಕೆ ಹೆಚ್ಚಿನ ಒಳಹರಿವು ಬರುತ್ತಿದ್ದು, ಕೃಷ್ಣರಾಜಸಾಗರ  ಜಲಾಶಯದಿಂದ ಹೆಚ್ಚುವರಿ ನೀರನ್ನು ಯಾವುದೇ ಸಂದರ್ಭದಲ್ಲಾದರೂ ಕಾವೇರಿ ನದಿಗೆ ಬಿಡುವ ಸಾಧ್ಯತೆಗಳಿರುವುದರಿಂದ, ಕೊಳ್ಳೇಗಾಲ ತಾಲ್ಲೂಕು ವ್ಯಾಪ್ತಿಯ ಕಾವೇರಿ ನದಿ ಪಾತ್ರದಲ್ಲಿ ಬರುವ ಮುಳ್ಳೂರು, ಹಳೆ ಹಂಪಾಪುರ, ದಾಸನಪುರ, ಹಳೆ ಅಣಗಳ್ಳಿ, ಹರಳೆ, ಸರಗೂರು, ಧನಗೆರೆ, ಎಡಕುರಿಯ, ಸತ್ತೇಗಾಲ ಮುಂತಾದ ನದಿಯ ಎರಡೂ ದಂಡೆಗಳಲ್ಲಿರುವ ಗ್ರಾಮಗಳಲ್ಲಿ ಹಾಗೂ ನದಿಯ ತಗ್ಗು ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನರು ತಮ್ಮ ಆಸ್ತಿ ಪಾಸ್ತಿ ಹಾಗೂ ಜಾನುವಾರು ರಕ್ಷಣೆಗಾಗಿ ಸುರಕ್ಷಿತ ಮುನ್ನೆಚ್ಚರಿಕೆ ವಹಿಸುವಂತೆ ಅವರು ಮನವಿ ಮಾಡಿದ್ದಾರೆ.

ಜಲಾಶಯದ ಪಾತ್ರದಲ್ಲಿ ವಾಸಿಸುವ ಜನರು ಜಲಾಶಯದ ನೀರಿನಲ್ಲಿ ಬಟ್ಟೆ ಒಗೆಯುವುದು, ಸ್ನಾನ ಮಾಡುವುದು, ಹಸು ತೊಳೆಯುವುದು, ಈಜುವುದು ಇನ್ನಿತರ ಚಟುವಟಿಕೆಗಳನ್ನು  ಮಾಡಬಾರದು. ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಮುಂಜಾಗ್ರತೆ ವಹಿಸಲು ಗ್ರಾಮಗಳಿಗೆ ಆಗಮಿಸುವ ಅಧಿಕಾರಿ, ಸಿಬ್ಬಂದಿಯವರಿಗೆ ಸಹಕರಿಸಬೇಕು. ಜಲಾಶಯದ ವೀಕ್ಷಣೆಗೆ ಆಗಮಿಸುವ ಪ್ರವಾಸಿಗರು ನದಿಗಳಿಗೆ ಇಳಿಯದಂತೆ ಹಾಗೂ ಜಲಾಶಯದ ಬಳಿ ತೆರಳದೆ ಸುರಕ್ಷಿತವಾಗಿರಬೇಕು. ಈ ಸಂದರ್ಭದಲ್ಲಿ ಮಕ್ಕಳು, ಸಾರ್ವಜನಿಕರು ಅಪಾಯಕಾರಿ ವಿದ್ಯುತ್ ಕಂಬ, ಕಟ್ಟಡ, ಮರಗಳ ಹತ್ತಿರ, ಕೆಳಗೆ ನಿಲ್ಲದೆ ಸುರಕ್ಷಿತ ಸ್ಥಳಗಳನ್ನು ತಲುಪಬೇಕು ಎಂದು ಸೂಚಿಸಿದ್ದಾರೆ.

ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಹಾಗೂ ಗ್ರಾಮ ಲೆಕ್ಕಿಗರು ಸಾರ್ವಜನಿಕರಿಗೆ ಸುರಕ್ಷಿತ ಕ್ರಮಗಳ ಕುರಿತು ಗ್ರಾಮಗಳಲ್ಲಿ ತಿಳಿಸಬೇಕು. ಜಿಲ್ಲಾ, ತಾಲ್ಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು ವಿಪತ್ತನ್ನು ನಿಭಾಯಿಸಲು ತಯಾರಿ ಮಾಡಿಕೊಳ್ಳಬೇಕು. ಸಾರ್ವಜನಿಕರು ತುರ್ತು ಸೇವೆಗೆ ಶುಲ್ಕ ರಹಿತ ಸಂಖ್ಯೆ 1077, ದೂ.ಸಂ 08226-223160 ಮೊ.ಸಂ 9740942901 ಸಂಪರ್ಕಿಸುವಂತೆ  ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು