ಚಾಮರಾಜನಗರ: ತಿಮಿಂಗಲ ವಾಂತಿ ವಶ, ನಾಲ್ವರ ಬಂಧನ

ಚಾಮರಾಜನಗರ: ಅಕ್ರಮ ಸಾಗಾಟ ಆಗುತ್ತಿದ್ದ ಕೆಜಿಗಟ್ಟಲೆ ತಿಮಿಂಗಲ ವಾಂತಿ (ಅಂಬರ್ ಗ್ರೀಸ್) ವಶಪಡಿಸಿಕೊಂಡಿರುವ ಅರಣ್ಯ ಸಂಚಾರಿ ದಳದ ಪೊಲೀಸರು ನಾಲ್ವರನ್ನು ಬಂಧಿಸಿರುವ ಘಟನೆ ಜಿಲ್ಲೆಯ ಕೊಳ್ಳೇಗಾಲ ಬಸ್ ನಿಲ್ದಾಣ ಸಮೀಪ ನಡೆದಿದೆ.

ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಅಲ್ಲಮಜ್ಜಿ ರಸ್ತೆಯ ಕೆ.ಬಿ.ವಿರೂಪಾಕ್ಷ (62), ಕೇರಳ ಮೂಲದ ಶಂಸುದ್ಧೀನ್ ಒತಿಯೋತ್ (48), ತ್ರೆಸೀಮಾ ವರ್ಘಸೆ @ ಸುಜಾ (55) ಹಾಗೂ ಸಜಿ ಸುಬಾಸ್ (41) ಬಂಧಿತರು.

ಆರೋಪಿಗಳು ಬೆಂಗಳೂರಿನ ಕಡೆಯ ಕಾಳಸಂತೆಯಲ್ಲಿ ಮಾರಾಟ ಮಾಡುವ ಸಲುವಾಗಿ ಕಾರಿನಲ್ಲಿ ಅಂಬರ್ ಗ್ರಿಸ್ (ತಿಮಿಂಗಿಲ ವಾಂತಿ) ಸಾಗಿಸುತ್ತಿದ್ದರು. ಈ ವಿಷಯ ಖಚಿತಪಡಿಸಿಕೊಂಡ ಅರಣ್ಯ ಸಂಚಾರಿ ದಳದ ಪೊಲೀಸರು ಕೊಳ್ಳೇಗಾಲದ ಬಸ್ ನಿಲ್ದಾಣ ಸಮೀಪ ಮಾಲು ಸಮೇತ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ 14 ಕೆ.ಜಿ 950 ಗ್ರಾಂ ಅಂಬರ್ ಗ್ರಿಸ್ ಹಾಗೂ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ವನ್ಯಜೀವಿ ಸಂರಕ್ಷಣಾ ಕಾಯ್ದೆ ಅಡಿ ಪ್ರಕರಣ ದಾಖಲಿಸಲಾಗಿದೆ.

Sneha Gowda

Recent Posts

ಆರ್​ಸಿಬಿ ಮುಂದಿನ ಪಂದ್ಯವನ್ನು ಯಾವ ತಂಡದ ಜೊತೆ ಆಡಲಿದೆ..?

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬಲಿಷ್ಠ ಚೆನ್ನೈ ಸೂಪರ್ ಕಿಂಗ್ಸ್​ ತಂಡವನ್ನು ಸೋಲಿಸಿ ರಾಯಲ್ಲಾಗಿಯೇ ಪ್ಲೇಆಫ್​ಗೆ ಪ್ರವೇಶಿಸಿದೆ. ಇನ್ನು ಆರ್​ಸಿಬಿ…

3 mins ago

ಮೆಥೋಡಿಸ್ಟ್‌ ಚರ್ಚ್‌ನ 101ನೇ ವಾರ್ಷಿಕ ಜಾತ್ರೆ ಉತ್ಸವ

ನಗರದ ಮಂಗಲಪೇಟ್‌ ಸಮೀಪದ ಮೆಥೋಡಿಸ್ಟ್‌ ಚರ್ಚ್‌ನ 101ನೇ ವಾರ್ಷಿಕ ಜಾತ್ರೆ ಉತ್ಸವ ಸಂಭ್ರಮದಿಂದ ನಡೆಯಿತು.

27 mins ago

ಆಧಾರ್‌ ದುರುಪಯೋಗ: ಕರ್ನಾಟಕದಿಂದ 2.95 ಲಕ್ಷ ದೂರು ದಾಖಲು

ಜನರು ದಾಖಲೆ ದುರುಪಯೋಗ ಪಡಿಸಿಕೊಂಡಿರುವ ಸೈಬರ್ ವಂಚಕರು, ಒಂದೇ ಸಂಖ್ಯೆ ಸಿಮ್‌ಗಳನ್ನು ಖರೀದಿಸಿರುವ ಸಂಬಂಧ ಟೆಲಿಕಾಂ ಅನಾಲಿಟಿಕಲ್‌ ಫಾರ್ ಫ್ರಾಡ್‌…

40 mins ago

ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ: ಆರೆಂಜ್, ಯೆಲ್ಲೋ ಅಲರ್ಟ್‌ ಘೋಷಣೆ

ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಪ್ರತ್ಯೇಕ ಕಡೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಗುಡುಗು ಸಹಿತ ಮಿಂಚು ಮತ್ತು…

57 mins ago

ಆರೋಗ್ಯದ ವೃದ್ಧಿಗೆ ಕಾಮಕಸ್ತೂರಿ ಬೀಜದ ಪಾನಕ

ಮನುಷ್ಯ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಬಹಳ ಮುಖ್ಯ ಅದೇ ರೀತಿ ಖಾಲಿ ಹೊಟ್ಟೆಯಲ್ಲಿ ಕಾಮಕಸ್ತೂರಿ ಬೀಜಗಳನ್ನು ಕುಡಿಯುವುದು ಬಹಳಷ್ಟು…

1 hour ago

ಇವತ್ತಿನ ಚಿನ್ನ, ಬೆಳ್ಳಿ ದರಪಟ್ಟಿ ಹೀಗಿದೆ!

ಚಿನ್ನ ಮತ್ತು ಬೆಳ್ಳಿ ಬೆಲೆ ಈ ವಾರವೂ ಏರಿಳಿತಗಳನ್ನು ಕಂಡಿದ್ದು, ಬೆಳ್ಳಿ ಬೆಲೆ ಕಳೆದ 10 ದಿನದಲ್ಲಿ ಗ್ರಾಮ್​ಗೆ 4…

1 hour ago