ಚಾಮರಾಜನಗರ: ಮಲೆ ಮಹದೇಶ್ವರ ಮಾರ್ಗದಲ್ಲಿ ಭಾರೀ ವಾಹನಗಳ ಸಂಚಾರ ನಿರ್ಬಂಧ

ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ತಾಳಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟದ ಮಾರ್ಗವಾಗಿ ತಮಿಳುನಾಡಿಗೆ ಹೋಗುವ ರಸ್ತೆಯಲ್ಲಿ 6ಕ್ಕಿಂತ ಹೆಚ್ಚಿನ ಚಕ್ರಗಳನ್ನು ಹೊಂದಿರುವ ಭಾರೀ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ನಿರ್ಬಂಧಿಸುವಂತೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಆದೇಶ ಹೊರಡಿಸಿದ್ದಾರೆ.

ಆರು ಚಕ್ರಗಳನ್ನು ಹೊಂದಿರುವ ವಾಹನಗಳ (ಲಾರಿ) ಸಂಚಾರವನ್ನು ರಾತ್ರಿ  ಒಂಭತ್ತು ಗಂಟೆಯಿಂದ ಬೆಳಿಗ್ಗೆ  ಆರು ಗಂಟೆಯವರೆಗೆ ನಿರ್ಬಂಧಿಸುವಂತೆ  ಆದೇಶದಲ್ಲಿ ತಿಳಿಸಿದ್ದಾರೆ.

ಸಾರ್ವಜನಿಕರು, ಗ್ರಾಮಸ್ಥರಿಗೆ ಅನುಕೂಲವಾಗುವಂತೆ ಅಗತ್ಯ ವಸ್ತುಗಳ ಸಾಗಾಣಿಕೆ ವಾಹನಗಳು, ಅಗ್ನಿಶಾಮಕ ವಾಹನ, ಅಂಬುಲೆನ್ಸ್ ವಾಹನ, ರಾಜ್ಯ ಹಾಗೂ ಹೊರರಾಜ್ಯದ ಸಾರ್ವಜನಿಕ ವಾಹನಗಳಾದ ಸರ್ಕಾರಿ, ಖಾಸಗಿ ಬಸ್‍ಗಳು, ಸರ್ಕಾರಿ ಇತರೆ ಎಲ್ಲಾ ರೀತಿಯ ಲಘು ವಾಹನಗಳ ಮುಕ್ತ ಸಂಚಾರಕ್ಕೆ ಅವಕಾಶವಿರುತ್ತದೆ ಎಂದು ಜಿಲ್ಲಾಧಿಕಾರಿಯವರು ಆದೇಶದಲ್ಲಿ ತಿಳಿಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 209ರಲ್ಲಿ ರಾತ್ರಿ ಸಂಚಾರ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ಆದೇಶಿಸಿರುವ ಹಿನ್ನೆಲೆಯಲ್ಲಿ ರಾತ್ರಿ ವೇಳೆಯಲ್ಲಿ ಎಲ್ಲಾ ಮಾದರಿಯ ವಾಹನಗಳು ಮಲೆ ಮಹದೇಶ್ವರ ಬೆಟ್ಟದ ಮಾರ್ಗವಾಗಿ ತಮಿಳುನಾಡಿಗೆ ಸಂಚರಿಸುತ್ತಿರುವ ಹಿನ್ನೆಲೆಯಲ್ಲಿ ತಾಳಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟದವರೆಗೆ ಮತ್ತು ಮಲೆ ಮಹದೇಶ್ವರ ಬೆಟ್ಟದಿಂದ ಪಾಲಾರ್‍ವರೆಗಿನ ರಸ್ತೆಯು ಕಡಿದಾದ ತಿರುವಿನಿಂದ ಕೂಡಿದ್ದು ಹಾಗೂ ಚಿಕ್ಕದಾಗಿರುವುದರಿಂದ ಭಾರೀ ವಾಹನಗಳ ಸಂಚಾರದಿಂದ ರಸ್ತೆಯಲ್ಲಿ ಸಂಚಾರ ದಟ್ಟಣೆಯಾಗಿದೆ. ಇದರಿಂದ ಶ್ರೀ ಮಲೆ ಮಹದೇಶ್ವರಸ್ವಾಮಿ ದೇವಸ್ಥಾನಕ್ಕೆ ಬರುವ ಭಕ್ತಾಧಿಗಳ, ಸಾರ್ವಜನಿಕರ, ಸರ್ಕಾರದ ಹಾಗೂ ತುರ್ತು ವಾಹನಗಳ ಸುಗಮ ಸಂಚಾರವು ಕಷ್ಟಸಾಧ್ಯವಾಗಿದೆ.

ಈ ಹಿನ್ನೆಲೆಯಲ್ಲಿ ಕರ್ನಾಟಕ ಮೋಟಾರು ವಾಹನಗಳ ಕಾಯ್ದೆ 1988ರ ಸೆಕ್ಷನ್ 115, ಕರ್ನಾಟಕ ಮೊಟಾರು ವಾಹನಗಳ ನಿಯಾಮಾವಳಿ-1989ರ ನಿಯಮ 221-ಎ(5)ರ ಹಾಗೂ ಕರ್ನಾಟಕ ಸಂಚಾರ ನಿಯಂತ್ರಣ ಕಾಯ್ದೆ 1960ರ ಸೆಕ್ಷನ್ 3ರ ಪ್ರಕಾರ ಹನೂರು ತಾಲೂಕಿನ ತಾಳಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟದ ಮಾರ್ಗವಾಗಿ ತಮಿಳುನಾಡಿಗೆ ಹೋಗುವ ರಸ್ತೆಯಲ್ಲಿ 6ಕ್ಕಿಂತ ಹೆಚ್ಚಿನ ಚಕ್ರಗಳನ್ನು ಹೊಂದಿರುವ ಭಾರೀ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ನಿರ್ಬಂಧಿಸಿ ಹಾಗೂ 6 ಚಕ್ರಗಳನ್ನು ಹೊಂದಿರುವ ವಾಹನಗಳ (ಲಾರಿ) ಸಂಚಾರವನ್ನು ರಾತ್ರಿ 9 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ನಿರ್ಬಂಧಿಸಿದೆ ಎಂದು ಜಿಲ್ಲಾಧಿಕಾರಿಯವರು ಆದೇಶದಲ್ಲಿ ತಿಳಿಸಿದ್ದಾರೆ.

Gayathri SG

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

42 mins ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

60 mins ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

1 hour ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

2 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

2 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

2 hours ago