ಚಾಮರಾಜನಗರ: ಹಿಮವದ್ ಗೋಪಾಲಸ್ವಾಮಿ ರಥೋತ್ಸವ

ಚಾಮರಾಜನಗರ: ಗುಂಡ್ಲುಪೇಟೆ ತಾಲೂಕಿನ ಶ್ರೀ ಹಿಮವದ್ ಗೋಪಾಲಸ್ವಾಮಿಯವರ ಬ್ರಹ್ಮ ರಥೋತ್ಸವವು ಮಾರ್ಚ್ 18ರಂದು ನಡೆಯಲಿದ್ದು, ಈ ಸಂಬಂಧ ಮಾರ್ಚ್ 16ರಿಂದಲೇ 21ರವರೆಗೆ ದೇವಾಲಯದಲ್ಲಿ ವಿವಿಧ ಪೂಜಾ ಕೈಂಕರ್ಯಗಳು ನಡೆಯಲಿವೆ.

ಮಾರ್ಚ್ 16ರಂದು ಬೆಳಿಗ್ಗೆ ಉತ್ಸವ, ಪಷ್ಪಬಲಿ, ಧ್ವಜಾರೋಹಣ, ಸಂಜೆ ಭೇರಿತಾಡನ ಯಾಗಶಾಲಾ ಪ್ರವೇಶ ನಡೆದಿದ್ದು, 17ರಂದು ಬೆಳಿಗ್ಗೆ ಶ್ರೀಯವರ ಉತ್ಸವ, ಸಂಜೆ 4ಗಂಟೆಗೆ ಕಾಶಿಯಾತ್ರಾ ಉತ್ಸವ, ಸಂಬಂಧ ಮಾಲಾಪೂರ್ವಕ ಶ್ರೀ ರುಕ್ಮಿಣಿ ಸತ್ಯಭಾಮ ಸಹಿತ ಶ್ರೀ ಹಿಮವದ್ ಗೋಪಾಲಸ್ವಾಮಿಯವರ ದಿವ್ಯಕಲ್ಯಾಣೋತ್ಸವ, 18ರಂದು ಬೆಳಿಗ್ಗೆ ಡೋಲಾಯಮಾನಂ, ಗೋವಿಂದಂ ಮಂಚಸ್ಥಂ ಮಧುಸೂಧನಂ ರಥಸ್ಥಂ ಕೇಶವಂಷ್ಠ್ವಾಪುನರ್ಜನ್ಮ ನವಿದ್ಯತೇ ಎಂಬ ಮರ್ಯಾದೆಯಂತೆ ಶ್ರೀಯವರ ದಿವ್ಯ ಬ್ರಹ್ಮ ರಥೋತ್ಸವ ನಡೆಯಲಿದ್ದು, ಸಂಜೆ ಶಾಂತ್ಯುತ್ಸವ ಜರುಗಲಿದೆ.

ಮಾರ್ಚ್ 19ರಂದು ಬೆಳಿಗ್ಗೆ ಉತ್ಸವ ಕೈಂಕರ್ಯ ಮತ್ತು ಬೆಳ್ಳಿ ಗರುಡೋತ್ಸವ ಸಂಜೆ ಡೋಲೋತ್ಸವ ಶಯನೋತ್ಸವ, 20೦ರಂದು ಸಂಧಾನ ಲೀಲೋತ್ಸವ, ಅವಭೃತ ಸ್ನಾನ ಸಂಜೆ ಉತ್ಸವ, ಫಣಿಮಾಲಾ ಪ್ರಬಂಧಸೇವೆ, ಪೂರ್ಣಾಹುತಿ, 21ರಂದು ಬೆಳಿಗ್ಗೆ ಮಹಾಭಿಷೇಕ, ಮಹಾಮಂಗಳಾರತಿ, ದ್ವಾದಶಾರಾಧನಾ, ಪುಷ್ಪಯಾಗ ಧ್ವಜಾರೋಹಣ, ಉಧ್ವಾಸನ ಪ್ರಬಂಧ ಸೇವೆ ಸೇತೂ ಸೇವೆ ಮೂಕಬಲಿ ಕಾರ್ಯಕ್ರಮಗಳು ನಡೆಯಲಿವೆ.

ಗುಂಡ್ಲುಪೇಟೆ ತಾಲೂಕು ಶ್ರೀ ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಮಾರ್ಚ್ 18ರಂದು ನಡೆಯಲಿರುವ ರಥೋತ್ಸವದಲ್ಲಿ ಪಾಲ್ಗೊಂಡು ದೇವರ ದರ್ಶನಕ್ಕೆ ಆಗಮಿಸುವ ಭಕ್ತಾದಿಗಳಿಗೆ ಅರಣ್ಯ ಇಲಾಖೆಯ ಚೆಕ್‌ಪೋಸ್ಟ್ ಮೈದಾನದಿಂದ ಕೆ.ಎಸ್.ಆರ್.ಟಿ.ಸಿ ವಾಹನಗಳ ವ್ಯವಸ್ಥೆ ಮಾಡಲಾಗಿದೆ.

ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಮಾರ್ಚ್ 18ರಂದು ನಡೆಯಲಿರುವ ರಥೋತ್ಸವಕ್ಕೆ ದ್ವಿಚಕ್ರ, ನಾಲ್ಕು ಚಕ್ರ, ಮಿನಿ ವಾಹನ ಮತ್ತು ಇತರೆ ವಾಹನಗಳಲ್ಲಿ ಬರುವ ಭಕ್ತಾದಿಗಳು ಅರಣ್ಯ ಇಲಾಖೆಯ ಚೆಕ್‌ಪೋಸ್ಟ್ ಮೈದಾನದಲ್ಲಿ ನಿಲುಗಡೆ ಮಾಡಬೇಕು. ನಂತರ ಅಲ್ಲಿಂದ ಕೆ.ಎಸ್.ಆರ್.ಟಿ.ಸಿ ವಾಹನಗಳಲ್ಲಿ ನಿಗದಿಪಡಿಸಿರುವ ದರ ಪಾವತಿಸಿ ಹಿಮವದ್ ಗೋಪಾಲಸ್ವಾಮಿ ಬೆಟ್ಟದ ರಥೋತ್ಸವ ಹಾಗೂ ದರ್ಶನಕ್ಕೆ ಹೋಗಿ ಬರುವ ವ್ಯವಸ್ಥೆ ಮಾಡಲಾಗಿದೆ. ಭಕ್ತಾಧಿಗಳು ಮತ್ತು ಸಾರ್ವಜನಿಕರು ಸಹಕರಿಸಬೇಕೆಂದು ಗುಂಡ್ಲುಪೇಟೆ ತಹಶೀಲ್ದಾರ್ ತಿಳಿಸಿದ್ದಾರೆ.

Sneha Gowda

Recent Posts

ಐಪಿಎಲ್ ಪ್ರಸಾರಕರ ಹಿಟ್​ಮ್ಯಾನ್​ ರೋಹಿತ್​ ಕಿಡಿ

ಟೀಮ್​ ಇಂಡಿಯಾದ ನಾಯಕ ರೋಹಿತ್ ಶರ್ಮಾ ಅವರು ಐಪಿಎಲ್ ಬ್ರಾಡ್‌ಕಾಸ್ಟರ್ ಸ್ಟಾರ್ ಸ್ಪೋರ್ಟ್ಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಲ ದಿನಗಳ…

4 mins ago

ಈಶಾನ್ಯ ಪದವೀಧರರ ಕ್ಷೇತ್ರದ ಅಭ್ಯರ್ಥಿಗಳ ಬಂಡಾಯ ಶಮನ: ವಿಜಯೇಂದ್ರ ಮಾತಕತೆ ಸಕ್ಸಸ್

ಈಶಾನ್ಯ ಪದವೀಧರ ಕ್ಷೇತ್ರ, ನೈಋತ್ಯ ಪದವೀಧರ ಕ್ಷೇತ್ರ, ಬೆಂಗಳೂರು ಪದವೀಧರ ಕ್ಷೇತ್ರ, ಆಗ್ನೇಯ ಶಿಕ್ಷಕರ ಕ್ಷೇತ್ರ, ನೈಋತ್ಯ ಶಿಕ್ಷಕರ ಕ್ಷೇತ್ರ…

10 mins ago

ಥಾಯ್ಲೆಂಡ್ ಓಪನ್ 2024: ಸಾತ್ವಿಕ್-ಚಿರಾಗ್ ಜೋಡಿಗೆ ಭರ್ಜರಿ ಗೆಲುವು

ಇಂದು (ಭಾನುವಾರ) ನಡೆದ ಥಾಯ್ಲೆಂಡ್‌ ಓಪನ್‌ ಸೂಪರ್‌ 500 ಬ್ಯಾಡ್ಮಿಂಟನ್‌ ಫೈನಲ್​ ಪಂದ್ಯದಲ್ಲಿ ಗೆದ್ದು ಚಾಂಪಿಯನ್​ ಪಟ್ಟ ಅಲಂಕರಿಸಿದ್ದಾರೆ.

22 mins ago

ಕೇರಳದ ಕೆಲವು ರಾಜ್ಯಗಳಿಗೆ ಮೇ 20 ರವರೆಗೆ ರೆಡ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

ಕೇರಳದ ಪತ್ತನಂತಿಟ್ಟ, ಇಡುಕ್ಕಿ, ಅಲಪ್ಪುಳ ಮತ್ತು ಕೊಟ್ಟಾಯಂ ಜಿಲ್ಲೆಗಳಲ್ಲಿ ಮೇ 20 ರವರೆಗೆ ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್…

60 mins ago

ಕೇಜ್ರಿವಾಲ್ ನಿವಾಸದ ಸಿಸಿಟಿವಿ ಡಿವಿಆರ್ ಪೊಲೀಸ್‌ ವಶಕ್ಕೆ

ಎಎಪಿ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಅವರ ಮೇಲಿನ ಹಲ್ಲೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ತಂಡವು ಭಾನುವಾರ…

1 hour ago

5 ದಿನ ಮೀನುಗಾರಿಕೆಗೆ ತೆರಳದಂತೆ ಉತ್ತರ ಕನ್ನಡ ಜಿಲ್ಲಾಡಳಿತ ಸೂಚನೆ

ಮೇ 18 ರಿಂದ ಮೇ 22 ರ ವರೆಗೆ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಉತ್ತರ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ…

1 hour ago