ಚಾಮರಾಜನಗರ: ಅಕ್ರಮ ಜಿಂಕೆ ಬೇಟೆ, ಬೇಟೆಗಾರನ ಬಂಧನ

ಚಾಮರಾಜನಗರ: ಬಂಡೀಪುರ ಅಭಯಾರಣ್ಯದಲ್ಲಿ ಅಕ್ರಮವಾಗಿ ಜಿಂಕೆ ಬೇಟೆ ಮಾಡಿ ಮಾಂಸ ಸಾಗಿಸುತ್ತಿದ್ದ ಜಾಲ ಪತ್ತೆಯಾಗಿದ್ದು, ಐವರು ಬೇಟೆಗಾರರಲ್ಲಿ ನಾಲ್ವರು ಪರಾರಿಯಾಗಿ ಒಬ್ಬನನ್ನು ಅರಣ್ಯ ಇಲಾಖೆ ಸಿಬ್ಬಂದಿಗಳು ಬಂಧಿಸಿರುವ ಘಟನೆ ನಡೆದಿದೆ.

ಮದ್ದೂರು ಕಾಲೋನಿ ನಿವಾಸಿ ಷಣ್ಮುಖ (35) ಬಂಧಿತ ಬೇಟೆಗಾರ. ಚಾಮರಾಜನಗರ ಜಿಲ್ಲೆಯ ಬಂಡೀಪುರ ವ್ಯಾಪ್ತಿಯ ಮದ್ದೂರು ವಲಯದ ನೇರಳೆ ಮರದ ವಲಯದಲ್ಲಿ ಐವರು ಬೇಟೆಗಾರರು ಜಿಂಕೆ ಯೊಂದನ್ನು ಬೇಟೆಯಾಡಿ ಮಾಂಸವನ್ನಾಗಿ ಪರಿವರ್ತಿಸಿ ಸಾಗಣೆ ಮಾಡುವ ಸಂಗತಿ ಅರಿತ ಸಹಾಯಕ ಅರಣ್ಯಾಧಿಕಾರಿ ರವೀಂದ್ರ, ಮದ್ದೂರು ವಲಯದ ವಲಯ ಅರಣ್ಯಾಧಿಕಾರಿ ಬಿ.ಎಂ ಮಲ್ಲೇಶ್ `ರವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಮದ್ದೂರು ಕಾಲೋನಿ ನಿವಾಸಿ ಷಣ್ಮುಖನನ್ನು ಬಂಧಿಸುವಲ್ಲಿ ಯಶಸ್ವಿಯಾದರೆ ಉಳಿದ ನಾಲ್ವರು ಪರಾರಿಯಾಗಿದ್ದಾರೆ.

ಬಂಧಿತನಿಂದ ಮೃತ ಜಿಂಕೆ ಮಾಂಸ ಹಾಗೂ ಪರಿಕರಗಳನ್ನು ವಶಪಡಿಸಿಕೊಂಡು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ತಲೆ‌ಮರೆಸಿಕೊಂಡಿರುವ ನಾಲ್ವರು ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚಿಸಿ ಕಾರ್ಯಾಚರಣೆ ನಡೆಸಲಾಗುತ್ತಿದೆ.

Ashika S

Recent Posts

‘ಕಲ್ಕಿ-2898 AD’ ಚಿತ್ರಕ್ಕೆ ಕನ್ನಡದಲ್ಲಿ ಧ್ವನಿ ನೀಡಿದ ದೀಪಿಕಾ ಪಡುಕೋಣೆ

ನಟ ಪ್ರಭಾಸ್‌ ಅಭಿನಯದ ಬಹುನಿರೀಕ್ಷಿತ 'ಕಲ್ಕಿ-2898 AD' ಚಿತ್ರವು ಬಿಡುಗಡೆಗೆ ಸಿದ್ಧವಾಗಿದ್ದು, ನಟಿ ದೀಪಿಕಾ ಪಡುಕೋಣೆ ತಮ್ಮ ಪಾತ್ರದ ಡಬ್ಬಿಂಗ್‌…

9 mins ago

ಧನುಷ್- ಐಶ್ವರ್ಯ ಇಬ್ಬರೂ ಬೇರೆಯವರೊಟ್ಟಿಗೆ ಡೇಟಿಂಗ್; ಖ್ಯಾತ ಗಾಯಕಿ ಮಾಹಿತಿ

ಕಾಲಿವುಡ್‌ ನಟ ಧನುಷ್‌ ಮತ್ತು ಸೂಪರ್‌ ಸ್ಟಾರ್‌ ರಜನಿಕಾಂತ್‌ ಪುತ್ರಿ ಐಶ್ವರ್ಯಾ ರಜನಿಕಾಂತ್‌ ಅವರ ದಾಂಪತ್ಯ ಜೀವನ ಮುರಿದು ಬಿದ್ದಿದೆ.…

18 mins ago

ತಾಯಿ ಚಾಮುಂಡೇಶ್ವರಿ ದರ್ಶನ ಪಡೆದ ಎಚ್​.ಡಿ ರೇವಣ್ಣ ಏನಂದ್ರು ?

ಹಾಸನ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಶಿಕ್ಷೆ ಅನುಭವಿಸಿ ಜಾಮೀನಿನ ಮೇಲೆ ಪರಪ್ಪರ ಅಗ್ರಹಾರ ಜೈಲಿನಿಂದ ಬಿಡುಗಡೆ ಹೊಂದಿದ ಶಾಸಕ…

43 mins ago

ಅಂಕಿತಾ ಓದಿದ ಶಾಲೆಗೆ 1 ಕೋಟಿ ರೂ. ಘೋಷಿಸಿದ ಸಿಎಂ ಸಿದ್ದರಾಮಯ್ಯ

ಈ ವರ್ಷದ ಎಸ್‌ ಎಸ್‌ ಎಲ್‌ ಸಿ ಪರೀಕ್ಷೆಯಲ್ಲಿ ಬಾಗಲಕೋಟೆಯ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿ ಅಂಕಿತಾ ರಾಜ್ಯಕ್ಕೆ ಫಸ್ಟ್…

55 mins ago

10 ವರ್ಷದಲ್ಲಿ ಪ್ರಧಾನಿ ಮೋದಿ ಆಸ್ತಿ ಏರಿಕೆಯಾಗಿದ್ದು ಎಷ್ಟು?

ಪ್ರಧಾನಿ ನರೇಂದ್ರ ಮೋದಿ ಅವರು ಸತತ 3ನೇ ಬಾರಿ ಲೋಕಸಭಾ ಚುನಾವಣೆಗೆ ವಾರಾಣಸಿ ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ. ಇಂದು ಬೆಳಗ್ಗೆ 11.40ರ…

1 hour ago

ಕರೆಂಟ್ ಕಟ್‌ನಿಂದಾಗಿ ಜನರ ಜೀವನ ಕತ್ತಲು: ವಿದ್ಯುತ್ ಸರಬರಾಜು ಕಚೇರಿಗೆ ಮುತ್ತಿಗೆ

ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಒಂದು ಚಿಕ್ಕ ಮಳೆ ಬಂದರೆ ಸಾಕು ಕೆಲವೊಂದು ಭಾಗಗಳಲ್ಲಿ ಕರೆಂಟ್ ಇಲ್ಲದೆ, ಕತ್ತಲಲ್ಲಿ ಜೀವನ ನಡೆಸುವಂತಾಗಿದೆ.…

2 hours ago