News Karnataka Kannada
Friday, May 17 2024
ಚಾಮರಾಜನಗರ

ಚಾಮರಾಜನಗರ: ರಾಜಕೀಯ ಕಾರ್ಯಕ್ರಮಗಳಿಂದ ಮಕ್ಕಳನ್ನು ದೂರವಿಡಿ

Chamarajanagar: Keep children away from political programmes
Photo Credit : By Author

ಚಾಮರಾಜನಗರ: ಗುಂಡ್ಲುಪೇಟೆ ಪಟ್ಟಣದ ಬಸವೇಶ್ವರ ಕಮ್ಯುನಿಟಿ ಹಾಲ್ ನಲ್ಲಿ ನಡೆದ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಕಾರ್ಯಕ್ರಮದಲ್ಲಿ 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಭಾಗಿಯಾಗಿರುವುದು ಇದೀಗ ಸುದ್ದಿಯಾಗಿದೆ.

ಕಾಂಗ್ರೆಸ್ ಅಭ್ಯರ್ಥಿ ಗಣೇಶ್ ಪ್ರಸಾದ್ ನೇತೃತ್ವದಲ್ಲಿ ಮಡಿವಾಳ ಸಮುದಾಯದ ಕೆಲ ಮುಖಂಡರು ಕಾಂಗ್ರೆಸ್ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಪಕ್ಷದ ಶಾಲು ಧರಿಸಿ ನಿಂತಿರುವುದು ಕಂಡು ಬಂದಿದೆ. ಇದು ಅಪರಾಧವಾಗಿದ್ದು ಕ್ರಮ ಕೈಗೊಳ್ಳುವಂತೆ ಆಗ್ರಹಗಳು ಕೇಳಿ ಬಂದಿವೆ.

ಭಾರತ ಸರ್ಕಾರ ಹಾಗೂ ವಿಶ್ವ ಸಂಸ್ಥೆಯು ಅನುಮೋದಿತ ಮಕ್ಕಳ ಹಕ್ಕುಗಳ ಒಡಂಬಡಿಕೆಗೆ 1992 ರ ಡಿಸೆಂಬರ್ 11 ರಂದು ಒಪ್ಪಿ ಅನುಮೋದಿಸಿದ್ದು, ಈ ಮಕ್ಕಳ ಹಕ್ಕುಗಳ ಒಡಂಬಡಿಕೆ ಹಾಗೂ ಮಕ್ಕಳ ನ್ಯಾಯ (ಮಕ್ಕಳ ಪೋಷಣೆ ಮತ್ತು ರಕ್ಷಣೆ ಕಾಯ್ದೆ) 2015 ರ ಅನ್ವಯ 18 ವರ್ಷದೊಳಗಿನ ಎಲ್ಲರೂ ಮಕ್ಕಳು ಎಂದು ಪರಿಗಣಿತವಾಗಿದೆ. ಮಕ್ಕಳ ಹಕ್ಕುಗಳ ಒಡಂಬಡಿಕೆಯ ಕಲಂ 32 ಮತ್ತು 36 ರಲ್ಲಿ ಮಕ್ಕಳ ಆರೋಗ್ಯ ಮತ್ತು ಶಿಕ್ಷಣಕ್ಕೆ ಅಪಾಯಕಾರಿಯಾದ ಕ್ಷೇತ್ರಗಳಲ್ಲಿ ಮಕ್ಕಳು ಕಾರ್ಯನಿರ್ವಹಿಸದಂತೆ ಹಾಗೂ ಮಕ್ಕಳ ಬೆಳವಣಿಗೆಗೆ ತೊಡಕನ್ನುಂಟು ಮಾಡುವ ಯಾವುದೇ ಚಟುವಟಿಕೆಗಳಲ್ಲಿ ಭಾಗವಹಿಸಬಾರದು.

ರಾಷ್ಟ್ರೀಯ ಮಕ್ಕಳ ಹಕ್ಕುಗಳ ಆಯೋಗ ಕೂಡ ಚುನಾವಣಾ ಕಾರ್ಯಗಳಲ್ಲಿ (ಪ್ರಚಾರ ಹಾಗೂ ಇನ್ನಿತರೆ ಕಾರ್ಯಗಳು) ಯಾವುದೇ ಪಕ್ಷಗಳು 18 ವರ್ಷದೊಳಗಿನ ಮಕ್ಕಳನ್ನು ಬಳಸಿಕೊಳ್ಳದಂತೆ ಅಗತ್ಯ ಸೂಕ್ತಕ್ರಮಗಳನ್ನು ಕೈಗೊಳ್ಳಲು ಕೋರಿದ್ದು, ಈ ಕುರಿತು ಮಕ್ಕಳನ್ನು ಚುನಾವಣಾ ಕಾರ್ಯಗಳಲ್ಲಿ ಬಳಸಿಕೊಂಡಲ್ಲಿ ಕಾಯ್ದೆಯನ್ವಯ ಸೂಕ್ತ ಶಿಸ್ತಿನ ಕ್ರಮ ಜರುಗಿಸಲು ಸೂಚನೆ ನೀಡಿದೆ.

ಹೀಗಿರುವಾಗ ಯಾವುದೇ ಪಕ್ಷಗಳಾಗಲೀ ಮಕ್ಕಳನ್ನು ತಮ್ಮ ಪ್ರಚಾರ ಕಾರ್ಯದಲ್ಲಿ ಬಳಸಿಕೊಳ್ಳುವುದು ಅಪರಾಧವಾಗಿದ್ದು, ಈ ನಿಟ್ಟಿನಲ್ಲಿ ಎಚ್ಚರಿಕೆ ವಹಿಸುವುದು ಅಗತ್ಯವಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು