News Karnataka Kannada
Saturday, May 04 2024
ಚಾಮರಾಜನಗರ

ಚಾಮರಾಜನಗರ: ವರುಣಾ ಕ್ಷೇತ್ರದ ಅವ್ಯವಸ್ಥೆ ಸಿದ್ದರಾಮಯ್ಯ ನೋಡಲಿ

Let Siddaramaiah see the chaos in Varuna constituency
Photo Credit : By Author

ಚಾಮರಾಜನಗರ: ವರುಣಾದ ರಸ್ತೆಗಳು ಮತ್ತು ಕ್ಷೇತ್ರದಲ್ಲಿ ಅವ್ಯವಸ್ಥೆ ಹೇಗಿದೆ ಎಂಬುದನ್ನು ಸಿದ್ದರಾಮಯ್ಯ ಒಂದು ಬಾರಿ ಕ್ಷೇತ್ರದಲ್ಲಿ ಓಡಾಡಿ ನೋಡಲಿ ಎಂದು ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಹೇಳಿದ್ದಾರೆ.

ಚಾಮರಾಜನಗರದಲ್ಲಿ ಪ್ರಚಾರ ನಡೆಸುವ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಿದ್ದರಾಮಯ್ಯ ಒಂದು ಬಾರಿ ಕ್ಷೇತ್ರದಲ್ಲಿ ಓಡಾಡಲಿ. ಅದೆಷ್ಟು ಚೆನ್ನಾಗಿ ರಸ್ತೆಗಳಿವೆ, ಯಾವ ರೀತಿ ಅವ್ಯವಸ್ಥೆಯಿದೆ? ಯಾವ ರೀತಿ ಜನರು ಒದ್ದಾಡ್ತಿದ್ದಾರೆ ಎಂದು ನೋಡಲಿ. ನಾನು ಒಬ್ಬನೇ ಅವರ ಜತೆಗೆ ಬರ್ತೀನಿ, ಹೋಗೋಣ. ಸಿದ್ದರಾಮಯ್ಯ ಕರೆದರೆ ನಾನು ಹೋಗಲೂ ಸಿದ್ದ. ಹೋಗಿ ಸುತ್ತಾಡೋಣ ಎಂದು ಸವಾಲ್ ಹಾಕಿದರು.

ಅವರು ಮಾಡಿರುವ ಕೆಲಸ ಅವರಿಗೆ ತೃಪ್ತಿ ಕೊಟ್ಟಿದೆ ಅನ್ಸಿದ್ರೆ, ಅವರಿಗೆ ನಮಸ್ಕಾರ ಮಾಡಿ ನಾನು ಏನೂ ಮಾತನಾಡಲ್ಲ. ನಿಜಲಿಂಗಪ್ಪ, ದೇವರಾಜ ಅರಸುಗಿಂತ ಸಿದ್ದರಾಮಯ್ಯ ದೊಡ್ಡವರಲ್ಲ. ಎಲ್ಲವನ್ನೂ ಜನರು ತೀರ್ಮಾನ ಮಾಡ್ತಾರೆ. ಸಿದ್ದರಾಮಯ್ಯ ಅವರು ಇನ್ನೊಬ್ಬರ ಮೇಲೆ ಗೂಬೆ ಕೂರಿಸುವುದು ಬಿಟ್ಟು ವಾಸ್ತವಾಂಶಕ್ಕೆ ಗಮನ ಕೊಟ್ರೆ ಒಳ್ಳೆಯದು ಎಂದು ಕಿವಿಮಾತು ಹೇಳಿದರು.

ವರುಣಾದಲ್ಲಿ ಪ್ರಚಾರಕ್ಕೆ ಅಡ್ಡಿ ಸಂಬಂಧ ಪ್ರತಿಕ್ರಿಯಿಸಿದ ಸೋಮಣ್ಣ “ಒಂದು ದಿನ ಅಲ್ಲ. ದಿನವೂ ಪ್ರಚಾರಕ್ಕೆ ಅಡ್ಡಿಪಡಿಸುತ್ತಿದ್ದಾರೆ. ಸಿದ್ದರಾಮಯ್ಯ ಅವರು ಹತಾಶರಾಗಿದ್ದಾರೆ. ಈ ರಾಜ್ಯದ ಮಾಜಿ ಮುಖ್ಯಮಂತ್ರಿ ಗಳಿಗೆ ಮುಜುಗರವಾಗಬಾರದೆಂದು ಸಹಿಸಿಕೊಂಡಿದ್ದೇನೆ. ಅರ್ಥ ಮಾಡಿಕೊಂಡಿಲ್ಲ ಅಂದ್ರೆ ಹೇಗೆ? ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಪ್ರತಾಪ್ ಸಿಂಹ ಅವರಿಂದಲೇ ಗಲಾಟೆಯಾಗುತ್ತಿದೆ ಎಂಬ ಹೇಳಿಕೆಗೆ ಪ್ರತಿಕ್ರಿಯಿಸುತ್ತಾ “ಪ್ರತಾಪ್ ಸಿಂಹ ಜವಾಬ್ದಾರಿಯುತ ಲೋಕಸಭಾ ಸದಸ್ಯ. ಆತ ನನಗೆ ಸಹೋದರನಂತೆ. ಪಕ್ಷದ ಭವಿಷ್ಯದ ನಾಯಕ. ವಾಸ್ತವಾಂಶ ಇರೋದನ್ನು ಮಾತನಾಡುತ್ತಾರೆ. ನಿಮ್ಮವರೇ ಜಗಳ ಮಾಡಿಸುತ್ತಿರುವುದು. ಅವರು ಬಿಟ್ರೆ ಬೇರೆ ಯಾರೂ ಇಲ್ಲ. ನ್ಯಾಯಸಮ್ಮತ ಚುನಾವಣೆ ನಡೆಯಲಿ. 10ನೇ ತಾರೀಕು ಅದು ತೀರ್ಮಾನವಾಗಲಿ ಎಂದರು.

ಇದೇ ವೇಳೆ, ವರುಣಾದಲ್ಲಿ ಗಲಾಟೆ ಮಾಡಿಸಿದ್ದು ಸೋಮಣ್ಣ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸುತ್ತಾ “ಸಿದ್ದರಾಮಯ್ಯ ಮತ್ತೆ ಏಕೆ ಈ ರೀತಿ ಮಾಡಿ ಚಿಕ್ಕವರಾಗ್ತಿದ್ದಾರೋ ಗೊತ್ತಿಲ್ಲ. ನಾವೇನೂ ಕಾಲು ಕೆರೆದುಕೊಂಡು ಹೋಗಿರಲಿಲ್ಲ. ನಾವು ಪ್ರಚಾರಕ್ಕೆ ಹೋದರೆ ರಸ್ತೆಗೆ ಅಡ್ಡಲಾಗಿ ನೊಗ ಇಡ್ತಾರೆ. ಆಚೆಗೆ ಹೋಗಬಾರದು ಅಂತಾರೆ. ಇವೆಲ್ಲ ಮಾಡುತ್ತಿರುವುದು ಒಂದೇ ವರ್ಗದ ಜನ” ಎಂದು ಕಿಡಿಕಾರಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು