News Karnataka Kannada
Saturday, April 27 2024
ಚಾಮರಾಜನಗರ

ಚಾಮರಾಜನಗರ: ಎಡಿಸಿ ಸಹಿ ಪೋರ್ಜರಿ ಮಾಡಿ ವಂಚಿಸಿದ್ದವನ ಬಂಧನ

Chamarajanagar: Man arrested for forgery of ADC's signature
Photo Credit : By Author

ಚಾಮರಾಜನಗರ: ಜಿಲ್ಲಾಧಿಕಾರಿ ಕಚೇರಿಯ ಆಡಳಿತ ಶಾಖೆಯ ಬ್ಯಾಂಕ್‌ ಖಾತೆಯ ಚೆಕ್‌ಗೆ ಹೆಚ್ಚುವರಿ ಜಿಲ್ಲಾಧಿಕಾರಿಯವರ ಸಹಿಯನ್ನು ಫೋರ್ಜರಿ ಮಾಡಿ ತನ್ನ ಖಾತೆಗೆ ಹಣ ವರ್ಗಾವಣೆ ಮಾಡಿದ ಆರೋಪಿ ದೊಡ್ಡರಾಯಪೇಟೆ ಗ್ರಾಮದ ರಾಜೇಶ್‌ನನ್ನು ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.

ಆರಂಭದಲ್ಲಿ ₹32.64 ಲಕ್ಷ ಹಣವನ್ನು ಜಿಲ್ಲಾಧಿಕಾರಿ ಅನುಮತಿ ಪಡೆಯದೆ ವರ್ಗಾವಣೆ ಮಾಡಲಾಗಿದೆ ಎಂದು ಹೇಳಲಾಗಿತ್ತು. ಆದರೆ, ಈಗ ಈ ಮೊತ್ತ ₹1.24 ಕೋಟಿಗೆ ಏರಿದೆ. ಹಣ ವಂಚನೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಯವರು ಪಟ್ಟಣ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿರುವ ಪೊಲೀಸರು, ಸೋಮವಾರ ಮುಂಜಾನೆ ಬೆಂಗಳೂರಿನಲ್ಲಿ ಆರೋಪಿಯನ್ನು ಬಂಧಿಸಿ ನಗರಕ್ಕೆ ಕರೆದುಕೊಂಡು ಬಂದಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯ ಆಡಳಿತ ಶಾಖೆಯಲ್ಲಿ ರಾಜೇಶ್‌ ಹೊರ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದರು.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಚೆಕ್‌ ನಿರ್ವಹಣೆ ಜವಾಬ್ದಾರಿ ಹೊಂದಿದ್ದ ದ್ವಿತೀಯ ದರ್ಜೆ ಸಹಾಯಕಿ ಸೌಮ್ಯ ಅವರನ್ನು ಜಿಲ್ಲಾಧಿಕಾರಿ ಡಿ.ಎಸ್‌.ರಮೇಶ್‌ ಅಮಾನತು ಮಾಡಿ ಆದೇಶ ಹೊರಡಿಸಿದ್ದರು. ಡಿಸಿ ಕಚೇರಿಯ ಆಡಳಿತ ಶಾಖೆಯು ಗ್ರಾಮೀಣ ರಸಪ್ರಶ್ನೆ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಎಸ್‌ಬಿಐ ಶಾಖೆಯಲ್ಲಿ ಖಾತೆ ತೆರೆದಿತ್ತು. ಈ ಖಾತೆಯ ಚೆಕ್‌ ಪುಸ್ತಕದಿಂದ 13 ಚೆಕ್‌ ಹಾಳೆಗಳನ್ನು ಬಳಸಿಕೊಂಡು ಹಿಂದಿನ ಹೆಚ್ಚುವರಿ ಜಿಲ್ಲಾಧಿಕಾರಿ ಆನಂದ್‌ ಅವರ ಸಹಿಯನ್ನು ಫೋರ್ಜರಿ ಮಾಡಿ ರಾಜೇಶ್‌ ತಮ್ಮ ಖಾತೆ ಹಾಗೂ ಇನ್ನೊಬ್ಬರ ಖಾತೆಗೆ ಹಣ ವರ್ಗಾವಣೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. 2022ರ ನವೆಂಬರ್‌ 1ರಿಂದ ಮಾರ್ಚ್‌ 21ರ ನಡುವೆ ಹಣ ವರ್ಗಾವಣೆ ನಡೆದಿದೆ ಎಂದು ಮೂಲಗಳು ತಿಳಿಸಿವೆ.

ಆನಂದ್‌ ಅವರು ವರ್ಗಾವಣೆಗೊಂಡು ಎರಡು ವರ್ಷ ಆಗುತ್ತಾ ಬಂದಿದೆ. ಅವರ ನಕಲಿ ಸಹಿಯನ್ನು ಚೆಕ್‌ಗೆ ಹಾಕಲಾಗಿದೆ. ಎಸ್‌ಬಿಐ ಸಿಬ್ಬಂದಿ ಕೂಡ ಇದನ್ನು ಗಮನಿಸಿಲ್ಲ. ಎಡಿಸಿ ಸಹಿ ಎಂಬ ಕಾರಣಕ್ಕೆ ಹಣ ವರ್ಗಾವಣೆ ಮಾಡಿದ್ದಾರೆ. ಅಲ್ಲಿಯ ಸಿಬ್ಬಂದಿಯಿಂದಲೂ ಲೋಪ ಆಗಿದೆ. ಅವರ ವಿರುದ್ಧವೂ ದೂರು ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಆರೋಪಿ‌ ದೊಡ್ಡರಾಯಪೇಟೆಯ ರಾಜೇಶ್‌ ಬಂಧನವನ್ನು ಪೊಲೀಸರು ಖಚಿತಪಡಿಸಿದ್ದು, ತನಿಖೆ ಮುಂದುವರಿದಿದೆ ಎಂದು ಮಾಹಿತಿ ನೀಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು