ಚಾಮರಾಜನಗರ: ಗಂಡಾನೆಗಳ ಕಾಳಗದಲ್ಲಿ ಒಂದು ಆನೆ ಸಾವು

ಚಾಮರಾಜನಗರ: ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಜಾಗೇರಿ ಗ್ರಾಮದ ದೊಡ್ಡ ಮಾಕಳಿ ಅರಣ್ಯ ಪ್ರದೇಶದಲ್ಲಿ ಎರಡು ಗಂಡಾನೆಗಳ ನಡುವೆ ನಡೆದ ಕಾಳಗದಲ್ಲಿ ಒಂದು ಆನೆ ಮೃತಪಟ್ಟಿದೆ.

ಮೃತಪಟ್ಟ ಆನೆಗೆ ೧೮ ರಿಂದ ೨೦ ವರ್ಷವಾಗಿದ್ದು, ಎರಡು ದಿನಗಳ ಹಿಂದೆ ಈ ಘಟನೆ ನಡೆದಿರಬಹುದು ಎಂದು ಅಂದಾಜಿಸಲಾಗಿದೆ. ಎರಡು ಮೂರು ದಿನಗಳ ಹಿಂದೆ ಆನೆಗಳ ಕೂಗಾಟ ಹೆಚ್ಚಾಗಿತ್ತು ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಮೃತಪಟ್ಟ ಆನೆಯ ಹೊಟ್ಟೆ ಮತ್ತು ಕತ್ತಿನ ಭಾಗಕ್ಕೆ ತೀವ್ರ ಗಾಯಗಳಾಗಿವೆ. ಇನ್ನೊಂದು ಆನೆಯು ದಂತದಿಂದ ತಿವಿದಿದೆ. ಆನೆಯು ತೀವ್ರ ರಕ್ತಸ್ರಾವದಿಂದ ಮೃತಪಟ್ಟಿದೆ ಎಂದು ಪಶುವೈದ್ಯ ಶಿವಕುಮಾರ್ ತಿಳಿಸಿದ್ದಾರೆ. ದೊಡ್ಡಮಾಕಳಿ ಅರಣ್ಯ ಪ್ರದೇಶದ ಸಿಬ್ಬಂದಿ ಬೀಟ್‌ಗೆ ಹೋಗಿದ್ದ ಸಂದರ್ಭದಲ್ಲಿ ಆನೆ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ.

ಮಲೆ ಮಹದೇಶ್ವರ ವನ್ಯಧಾಮದ ಉಪ ಅರಣ್ಯ ಸಂರಕ್ಷಣಾಧಿಕಾರಿ ಜಿ.ಸಂತೋಷ್ ಕುಮಾರ್, ಎಸಿಎಫ್ ಶಶಿಧರ್, ಆರ್‌ಎಫ್‌ಒ ಭರತ್ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿನೆ ನಡೆಸಿದರು. ಆನೆಯ ದಂತವನ್ನು ತೆಗೆದು, ಮರಣೋತ್ತರ ಪರೀಕ್ಷೆ ನಡೆಸಿ, ನಿಯಮಾನುಸಾರ ಕಳೇಬರವನ್ನು ವಿಲೇವಾರಿ ಮಾಡಲಾಯಿತು ಎಂದು ಮೂಲಗಳು ತಿಳಿಸಿವೆ.

Gayathri SG

Recent Posts

ಅಕ್ಷಯ ತೃತೀಯ ದಿನದಂದು ಚಿನ್ನ, ಬೆಳ್ಳಿ ದರ ಪಟ್ಟಿ ಹೀಗಿದೆ!

ಇಂದು ಅಕ್ಷಯ ತೃತೀಯ ದಿನವಾಗಿದ್ದು, ಚಿನ್ನದ ಬೆಲೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ. ಸತತ ಏರಿಕೆಯ ಬಳಿಕ ಎರಡು ದಿನ ಸತತ ಬೆಲೆ…

43 seconds ago

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

8 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

8 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

8 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

8 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

10 hours ago