News Karnataka Kannada
Tuesday, April 30 2024
ಚಾಮರಾಜನಗರ

ಚಾಮರಾಜನಗರ: ಇ-ಕೆವೈಸಿ ಮಾಡಿಕೊಳ್ಳಲು ಪಡಿತರ ಚೀಟಿದಾರರಿಗೆ ಸೂಚನೆ

Chamarajanagar: Ration card holders asked to do e-KYC
Photo Credit :

ಚಾಮರಾಜನಗರ: ಜಿಲ್ಲೆಯ ಪಡಿತರ ಚೀಟಿ ಹೊಂದಿರುವ ಎಲ್ಲಾ ಪಡಿತರ ಚೀಟಿದಾರರು ತಮ್ಮ ಕುಟುಂಬದ ಎಲ್ಲಾ ಸದಸ್ಯರ ವಿವರಗಳೊಂದಿಗೆ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಕೊಳ್ಳಬೇಕು ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ತಿಳಿಸಿದೆ.

ಈವರೆಗೆ ಮೂಲ ನ್ಯಾಯಬೆಲೆ ಅಂಗಡಿಗಳಲ್ಲಿ ಮಾತ್ರ ಇ-ಕೆವೈಸಿ ಮಾಡಲು ಅವಕಾಶವಿತ್ತು. ಪ್ರಸ್ತುತ ಜೂನ್ 2022ರ ಮಾಹೆಯಿಂದ ರಾಜ್ಯದ ಯಾವುದೇ ನ್ಯಾಯಬೆಲೆ ಅಂಗಡಿಗಳಲ್ಲಿ ಪೋರ್ಟೆಬಿಲಿಟಿ ಮುಖಾಂತರ ಇ-ಕೆವೈಸಿ ಮಾಡಬಹುದಾಗಿದೆ. ಈವರೆಗೆ ವಲಸೆ ಹೋಗಿ ಅಥವಾ ಬೇರೆ ಜಿಲ್ಲೆಯಲ್ಲಿ ಕೆಲಸ ನಿಮಿತ್ತ ತೆರಳಿರುವ ವ್ಯಕ್ತಿಗಳು ಮೂಲ ನ್ಯಾಯಬೆಲೆ ಅಂಗಡಿಗಳಿಗೆ ಬಂದು ಇ-ಕೆವೈಸಿ ಮಾಡಿಸಿರುವುದಿಲ್ಲ ಇಂತವರಿಗೆ ಅನುಕೂಲವಾಗಲು ಸರ್ಕಾರವು ಪೋರ್ಟೆಬಿಲಿಟಿಯಲ್ಲಿ ಇ-ಕೆವೈಸಿಯನ್ನು ಮಾಡಲು ಅವಕಾಶ ಕಲ್ಪಿಸಿದೆ.

ಈವರೆಗೆ ಇ-ಕೆವೈಸಿ ಮಾಡಿಸದ ಪಡಿತರ ಚೀಟಿದಾರರು ತಾವು ವಾಸಿಸುವ ಸಮಿಪದ ನ್ಯಾಯಬೆಲೆ ಅಂಗಡಿಗಳಲ್ಲಿ ಕೂಡಲೇ ಇ-ಕೆವೈಸಿ ಮಾಡಿಸಿಕೊಳ್ಳಬೇಕು. ಆಗಸ್ಟ್ ತಿಂಗಳವರೆಗೂ ಅವಕಾಶವಿದ್ದು ಬೆಳಿಗ್ಗೆ 8 ರಿಂದ ರಾತ್ರಿ 8 ಗಂಟೆಯವರೆಗೆ ಯಾವುದೇ ನ್ಯಾಯಬೆಲೆ ಅಂಗಡಿಗಲ್ಲಿ ಇ-ಕೆವೈಸಿ ಮಾಡಬಹುದಾಗಿದೆ.

ಪಡಿತರ ಚೀಟಿದಾರರ ಎಲ್ಲಾ ಸದಸ್ಯರು ತಮ್ಮ ಬಯೋದೃಢೀಕರಣ ಮಾಡಿಸಬೇಕು. ಆಧಾರ್ ಸಂಖ್ಯೆ, ಫೋನ್ ನಂಬರ್, ಗ್ಯಾಸ್ ಹೊಂದಿರುವ ಮಾಹಿತಿ ಹಾಗೂ ಕುಟುಂಬ ಸದಸ್ಯರ ಸಹ ಸಂಬಂಧವನ್ನು ಇ-ಕೆವೈಸಿಯಲ್ಲಿ ನಮೂದಿಸಬೇಕು. ಪಡಿತರ ಚೀಟಿದಾರರಿಗೆ ಅಂತಿಮ ಅವಕಾಶವಾಗಿದ್ದು, ಈ ತಿಂಗಳಲ್ಲಿ ಇ-ಕೆವೈಸಿ ಮಾಡಿಸಿಕೊಳ್ಳದ ಪಡಿತರ ಚೀಟಿದಾರರಿಗೆ ಮುಂದಿನ ತಿಂಗಳಿನಿAದ ಪಡಿತರ ವಿತರಣೆ ರದ್ದಾಗಬಹುದು.

ಚಾಮರಾಜನಗರ ಜಿಲ್ಲೆಯಲ್ಲಿ 2,89,833 ಪಡಿತರ ಚೀಟಿಗಳಿದ್ದು, ಅದರಲ್ಲಿ 875098 ಸದಸ್ಯರಿರುತ್ತಾರೆ. ಇದರಲ್ಲಿ 801319 ಸದಸ್ಯರು ಇ-ಕೆವೈಸಿ ಮಾಡಿಸಿರುತ್ತಾರೆ. ಉಳಿದ 73779 ಸದಸ್ಯರು ಕೂಡಲೇ ಇ-ಕೆವೈಸಿ ಮಾಡಿಸಿಕೊಳ್ಳಲು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರಾದ ಯೋಗಾನಂದ ಅವರು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು